ಶಿವಮೊಗ್ಗದಲ್ಲಿ ಸಿಲಿಂಡರ್ ಲಾರಿ-ಟ್ರಕ್ ಡಿಕ್ಕಿ, ಸ್ಥಳದಲ್ಲೇ ಮೂವರ ಸಾವು
ಶಿವಮೊಗ್ಗ,ಮಾರ್ಚ್ 23: ಎಲ್‌ಪಿಜಿ ಸಿಲಿಂಡರ್ ತುಂಬಿದ್ದ ಲಾರಿ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಎದುರು ಬದುರು ಬರುತ್ತಿದ್ದ 2 ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಸಾಗರ ತಾಲೂಕಿನ ಐಗಿನಬೈಲು ಕ್ರಾಸ್ ಬಳಿ ಈ ಘಟನೆ ಸಂಭವಿಸಿದ್ದು, ಸಾಗರದ ಕಡೆ ಬರುತ್ತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ, ಶಿವಮೊಗ್ಗ ಕಡೆ ತೆರಳುತ್ತಿದ್ದ ಡಾಂಬರ್ ತುಂಬಿದ ಲಾರಿ ಡಿಕ್ಕಿ ಹೊಡೆದಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಲ್ಲಿ ಲಾರಿಗಳು ನಜ್ಜು ಗುಜ್ಜಾಗಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದಾಗಿ ತುಮಕೂರು ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು ಶನಿವಾರ ಬೆಳಗಿನ ಜಾವ ಘಟನೆ ಸಂಭವಿಸಿದೆ.












Click it and Unblock the Notifications