ಅಪಾರ ಬೆಂಬಲಿಗರೊಂದಿಗೆ ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ:ಎಚ್‌ಡಿಕೆ, ಡಿಕೆಶಿ ಸಾಥ್
ಶಿವಮೊಗ್ಗ, ಏಪ್ರಿಲ್ 03:ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ತಮ್ಮ ಅಪಾರ ಬೆಂಬಲಿಗರೊಂದಿಗೆ ಇಂದು ಬುಧವಾರ ನಾಮಪತ್ರ ಸಲ್ಲಿಸಿದರು.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜಿಲ್ಲಾ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಧು ಬಂಗಾರಪ್ಪ ಅವರೊಂದಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ ಇದ್ದರು.
ಬಿಜೆಪಿ ಭದ್ರಕೋಟೆ ಎಂದೇ ಹೆಸರಾಗಿರುವ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಪಕ್ಷ ತನ್ನ ಶಕ್ತಿ ಪ್ರದರ್ಶನ ತೋರಿ ಧೂಳೆಬ್ಬಿಸಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್ ನಿಂದ ಹೊರಟ ಮೈತ್ರಿ ಪಕ್ಷದ ಮೆರವಣಿಗೆಯಲ್ಲಿ ಜನ ಸಾಗರವೇ ಹರಿದುಬಂದಿತ್ತು. ಸುಮಾರು 10 ಸಾವಿರಕ್ಕೂ ಹೆಚ್ಚು ಜನ ತಮ್ಮ ನಾಯಕನ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.

ಜೆಡಿಎಸ್ ನ ತೆನೆಹೊತ್ತ ಮಹಿಳೆ ಹಾಗೂ ಕಾಂಗ್ರೆಸ್ ನ ಹಸ್ತದ ಬಾವುಟ ಹಿಡಿದಿದ್ದ ಕಾರ್ಯಕರ್ತರು ಮುಖ್ಯಮಂತ್ರಿ ಕುಮಾರ ಸ್ವಾಮಿ, ಸಚಿವ ಡಿಕೆಶಿ ಮಧು ಬಂಗಾರಪ್ಪನವರ ಪರ ಜೈಕಾರ ಕೂಗಿದರು. ಚೌಕಿದಾರ್ ಚೋರ್ ಹೈ ಘೋಷಣೆಯು ಅಲ್ಲಲ್ಲಿ ಕೇಳಿ ಬಂದಿತ್ತು.
ಮೆರವಣಿಗೆ ಗೋಪಿ ವೃತ್ತದ ಬಳಿ ಬರುತ್ತಿದ್ದ ಹಾಗೆ ಮಾತನಾಡಿದ ಸಚಿವ ಡಿಕೆಶಿ ಬಿಜೆಪಿ ಅಭ್ಯರ್ಥಿಯಾದ ಸಂಸದ ಬಿ.ವೈ.ರಾಘವೇಂದ್ರರನ್ನ ಗೆಲ್ಲಿಸಿ ಅವರ ಕಾರ್ಯ ವೈಖರಿ ನೋಡಿದ್ದೀರಿ. ಸಾಕು, ಈ ಬಾರಿ ಮಧುಗೆ ಒಂದು ಅವಕಾಶ ಕೊಡಿ ಎಂದು ಕೋರಿದರು. ಮುಂದೆ ಓದಿ...
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪರಿಚಯ ಓದಿ
ಮೆರವಣಿಗೆಯಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಬಿಜೆಪಿ ನಾಯಕರು ಅಧಿಕಾರದಲ್ಲಿದ್ದಾಗ ನೀರಾವರಿ ಕೆಲಸ ಮಾಡಲಿಲ್ಲ. ನಾವು ಬಜೆಟ್ ನಲ್ಲಿ ಜಿಲ್ಲೆಗೆ ಅನುದಾನ ನೀಡಿದಾಗ ಅದನ್ನ ನಮ್ಮದು ಎಂದು ಹೇಳಿಕೊಳ್ಳುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಮೆರವಣಿಗೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್, ಅಭ್ಯರ್ಥಿ ಮಧು ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ಶಾಸಕ ಬಿ.ಕೆ.ಸಂಗಮೇಶ್ವರ್, ಮಾಜಿ ಶಾಸಕರಾದ ಕೆ.ಬಿ.ಪ್ರಸನ್ನ ಕುಮಾರ್ ಮಾಜಿ ಶಾಸಕ ಅಪ್ಪಾಜಿ ಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಎಂ.ಮಂಜುನಾಥ್ ಗೌಡ ಮೊದಲಾದವರು ಭಾಗವಹಿಸಿದ್ದರು.












Click it and Unblock the Notifications