ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ರೈಲು, ಸೇವೆ ಲಾಭ ಪಡೆಯಿರಿ

|
Google Oneindia Kannada News

ಶಿವಮೊಗ್ಗ, ಫೆಬ್ರವರಿ 26: ಶಿವಮೊಗ್ಗ ಭಾಗದ ಜನರ ಅನುಕೂಲಕ್ಕೆ ರೈಲು ಸೇವೆಗಳನ್ನು ಹೆಚ್ಚಿಸುವ ನಿಟ್ಟಿನಲ್ಲಿ ನಿರಂತರ ಪ್ರಯತ್ನ ಮುಂದುವರೆದಿದೆ, ಇದರ ಲಾಭವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ತೀರ ಇತ್ತೀಚಿನವರೆಗೆ ಶಿವಮೊಗ್ಗದಿಂದ ಕೇವಲ ಬೆಂಗಳೂರು ಮತ್ತು ಮೈಸೂರಿಗೆ ಮಾತ್ರ ರೈಲು ಸಂಪರ್ಕ ಲಭ್ಯವಿದ್ದು, ನಿರಂತರ ಪ್ರಯತ್ನದ ಫಲವಾಗಿ 2019ರ ನವೆಂಬರ್ 1 ರಿಂದ ಶಿವಮೊಗ್ಗದಿಂದ ತಿರುಪತಿಗೆ ಹಾಗೂ ಶಿವಮೊಗ್ಗದಿಂದ ದೇಶದ ಮಹಾನಗರಗಳಲ್ಲಿ ಒಂದಾದ ಚೆನ್ನೈಗೆ ವಾರಕ್ಕೊಮ್ಮೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ಸೇವೆಯನ್ನು ಆರಂಭಿಸಲಾಗಿದೆ ಎಂದು ತಿಳಿಸಿರುವ ಅವರು, ವಾರಕ್ಕೊಮ್ಮೆ ಸಂಚರಿಸುತ್ತಿದ್ದ ಶಿವಮೊಗ್ಗ-ತಿರುಪತಿ (ರೇಣಿಗುಂಟ) ಎಕ್ಸ್‍ಪ್ರೆಸ್ ರೈಲನ್ನು ವಾರಕ್ಕೆ ಎರಡು ಬಾರಿ ಸಂಚರಿಸುವಂತೆ ರೈಲು ಸೇವೆಯನ್ನು ಹೆಚ್ಚಿಸಲಾಗಿದೆ ಎಂದರು.

ಬೆಂಗಳೂರು ರೈಲಿಗೆ ಹೊನ್ನಾವರದಲ್ಲಿ ಯಾಕಿಲ್ಲ ನಿಲುಗಡೆ?ಬೆಂಗಳೂರು ರೈಲಿಗೆ ಹೊನ್ನಾವರದಲ್ಲಿ ಯಾಕಿಲ್ಲ ನಿಲುಗಡೆ?

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಜನ್ಮ ದಿನವಾದ ಫೆಬ್ರವರಿ 27 ರಿಂದ, ಈಗ ವಾರದಲ್ಲಿ ಒಮ್ಮೆ ಸಂಚರಿಸುತ್ತಿರುವ ಶಿವಮೊಗ್ಗ-ಚೆನ್ನೈ ತತ್ಕಾಲ್ ಸ್ಪೆಷಲ್ ಎಕ್ಸ್ ಪ್ರೆಸ್ ವಾರದಲ್ಲಿ ಎರಡು ದಿನ ಸಂಚಾರ ಆರಂಭಿಸಲಿದೆ. ಈ ರೈಲಿನ ಉದ್ಘಾಟನಾ ವಿಶೇಷ ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಫೆಬ್ರವರಿ 27ರಂದು ಗುರುವಾರ ಮಧ್ಯಾಹ್ನ 12.00 ಗಂಟೆಗೆ ಚಾಲನೆ ನೀಡಲಾಗುತ್ತಿದೆ ಎಂದರು.

 ಯಡಿಯೂರಪ್ಪ ಜನ್ಮದಿನ ವಿಶೇಷ ರೈಲು

ಯಡಿಯೂರಪ್ಪ ಜನ್ಮದಿನ ವಿಶೇಷ ರೈಲು

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರು ಹಾಗೂ ಕೇಂದ್ರ ಸರ್ಕಾರದ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿರವರು ಈ ರೈಲು ಸೇವೆಗೆ ಬೆಂಗಳೂರಿನ ರೈಲ್ವೆ ವಿಭಾಗೀಯ ಕಛೇರಿಯಿಂದ ಮಧ್ಯಾಹ್ನ 12.00 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಬೆಂಗಳೂರಿನ ಈ ಸಮಾರಂಭದಲ್ಲಿ ಖುದ್ದು ತಾವು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಭಾಗವಹಿಸಲಿರುವುದಾಗಿ ಅವರು ತಿಳಿಸಿದ್ದಾರೆ.

 ಈ ರೈಲು ವಾರದಲ್ಲಿ 2 ದಿನ ಸಂಚರಿಸಲಿದೆ

ಈ ರೈಲು ವಾರದಲ್ಲಿ 2 ದಿನ ಸಂಚರಿಸಲಿದೆ

ಈ ರೈಲು ಸೇವೆ 28.02.2020 ರಿಂದ ವಾರದಲ್ಲಿ 2 ದಿನ ಸಂಚರಿಸಲಿದೆ. ಈ ರೈಲು ಶಿವಮೊಗ್ಗದಿಂದ ಪ್ರತಿ ಸೋಮವಾರ ಮತ್ತು ಶುಕ್ರವಾರ ರಾತ್ರಿ 11.55ಕ್ಕೆ ಹೊರಟು ಮರುದಿನ ಅಂದರೆ ಮಂಗಳವಾರ ಮತ್ತು ಶನಿವಾರ ಬೆಳಗ್ಗೆ 11.45ಕ್ಕೆ ಚೆನ್ನೈ ಸೆಂಟ್ರಲ್ ರೈಲ್ವೆ ನಿಲ್ದಾಣವನ್ನು ತಲುಪಲಿದೆ. ಚೆನ್ನೈ ಸೆಂಟ್ರಲ್‍ನಿಂದ ಅದೇ ದಿನ ಅಂದರೆ ಮಂಗಳವಾರ ಮತ್ತು ಶನಿವಾರ ಮದ್ಯಾಹ್ನ 3.00 ಗಂಟೆಗೆ ಹೊರಟು ಬುಧವಾರ ಮತ್ತು ಭಾನುವಾರ ಬೆಳಿಗ್ಗೆ 3.55ಕ್ಕೆ ಶಿವಮೊಗ್ಗ ರೈಲು ನಿಲ್ದಾಣವನ್ನು ತಲುಪಲಿದೆ.

ಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲ್ವೇ ವಿದ್ಯುದ್ದೀಕರಣಕ್ಕೆ 25 ಕೋಟಿಬೀರೂರು-ಶಿವಮೊಗ್ಗ-ತಾಳಗುಪ್ಪ ರೈಲ್ವೇ ವಿದ್ಯುದ್ದೀಕರಣಕ್ಕೆ 25 ಕೋಟಿ

 ಈ ರೈಲಿನ ಮಾರ್ಗ, ನಿಲುಗಡೆ ವಿವರ

ಈ ರೈಲಿನ ಮಾರ್ಗ, ನಿಲುಗಡೆ ವಿವರ

ಈ ರೈಲಿಗೆ ಮಾರ್ಗ ಮಧ್ಯದಲ್ಲಿ ಭದ್ರಾವತಿ, ತರೀಕೆರೆ, ಬೀರೂರು, ಕಡೂರು, ಅರಸೀಕೆರೆ, ತುಮಕೂರು, ಚಿಕ್ಕಬಾಣಾವರ, ಬಾಣಸವಾಡಿ, ಕೃಷ್ಣಾರಾಜಪುರ, ಬಂಗಾರಪೇಟೆ ಜೋಲಾರಪೇಟೆ, ಕಾಟ್ಪಾಡಿ, ಅರಕೋಣಂ ಮತ್ತು ಪೆರಂಬೂರುಗಳಲ್ಲಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕರ ಈ ರೈಲು ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.

 ಮೋದಿಗೆ ಧನ್ಯವಾದ ಅರ್ಪಿಸಿದ ರಾಘವೇಂದ್ರ

ಮೋದಿಗೆ ಧನ್ಯವಾದ ಅರ್ಪಿಸಿದ ರಾಘವೇಂದ್ರ

ಈ ನೂತನ ರೈಲು ಸೇವೆಗಳ ಆರಂಭಕ್ಕೆ ಕಾರಣೀಭೂತರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಮುಖ್ಯ ಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಹಾಗೂ ಕೇಂದ್ರ ರಾಜ್ಯ ರೈಲ್ವೆ ಸಚಿವ ಸುರೇಶ್ ಅಂಗಡಿ ಅವರುಗಳಿಗೆ ಕ್ಷೇತ್ರದ ಜನತೆಯ ಪರವಾಗಿ ಹಾಗೂ ವೈಯಕ್ತಿಕವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದವರು ತಿಳಿಸಿದ್ದಾರೆ.

ರೈಲ್ವೆ ಇಲಾಖೆಯಿಂದ ಶಿವಮೊಗ್ಗಕ್ಕೆ ಮತ್ತೊಂದು ಕೊಡುಗೆರೈಲ್ವೆ ಇಲಾಖೆಯಿಂದ ಶಿವಮೊಗ್ಗಕ್ಕೆ ಮತ್ತೊಂದು ಕೊಡುಗೆ

English summary
Shivamogga MP B.Y Raghavendra appealed public to make use of New Railway services from Shivamogga: MP B.Y Raghavendra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X