ಶಿವಮೊಗ್ಗ; ಆಸ್ಪತ್ರೆ ಕ್ವಾರಂಟೈನ್‌ನಲ್ಲಿ ಇದ್ದ ವ್ಯಕ್ತಿ ಪರಾರಿ
ಶಿವಮೊಗ್ಗ, ಮೇ 18 : ಶಿವಮೊಗ್ಗ ನಗರದಲ್ಲಿ ಆಸ್ಪತ್ರೆ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಯೊಬ್ಬರು ಪರಾರಿಯಾಗಿದ್ದಾರೆ. ಹಸಿರು ವಲಯದಲ್ಲಿದ್ದ ಶಿವಮೊಗ್ಗ ಜಿಲ್ಲೆಯಲ್ಲಿ ಈಗ 14 ಕೊರೊನಾ ಪ್ರಕರಣಗಳು ದಾಖಲಾಗಿವೆ.
ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಆಸ್ಪತ್ರೆ ಸಿಬ್ಬಂದಿ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. ಈ ವ್ಯಕ್ತಿ ಚಿಕ್ಕಮಗಳೂರು ಜಿಲ್ಲೆಗೆ ಸೇರಿದವರು. ಶಿವಮೊಗ್ಗದಲ್ಲಿ ಆಸ್ಪತ್ರೆಯಲ್ಲಿ ಕ್ವಾರಂಟೈನ್‌ನಲ್ಲಿದ್ದರು.
ಕೊರೊನಾ ಸೋಂಕಿನ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಗೆ ಕ್ವಾರಂಟೈನ್ ಮಾಡಲಾಗಿತ್ತು. ವ್ಯಕ್ತಿಯ ಕೋವಿಡ್ - 19 ಪರೀಕ್ಷೆ ವರದಿ ನೆಗೆಟೀವ್ ಬಂದಿತ್ತು. ಆದರೂ ಸಹ ಕ್ವಾರಂಟೈನ್ ಅವಧಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿತ್ತು. ಆದರೆ, ಆಸ್ಪತ್ರೆಯಿಂದ ಆತ ಪರಾರಿಯಾಗಿದ್ದಾನೆ.

ಮೆಗ್ಗಾನ್ ಆಸ್ಪತ್ರೆ ಸಿಬ್ಬಂದಿಗೆ ಸೋಮವಾರ ಬೆಳಗ್ಗೆ ವ್ಯಕ್ತಿ ಪರಾರಿಯಾಗಿರುವ ಮಾಹಿತಿ ಸಿಕ್ಕಿದೆ. ಮುಂಜಾನೆ ವೇಳೆಗೆ ಆತ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಹುಡುಕಾಟವನ್ನು ನಡೆಸಲಾಗುತ್ತಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಕೊರೊನಾ ಪ್ರಕರಣಗಳು ದಾಖಲಾಗಿವೆ. ಈಗ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿ ಪರಾರಿಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ಮೇ 17ರ ಸಂಜೆಯ ವರದಿಯಂತೆ ಪ್ರಸ್ತುತ ಜಿಲ್ಲೆಯಲ್ಲಿ ನಿಗಾದಲ್ಲಿ ಇರುವವರು 584 ಜನ. ಆಸ್ಪತ್ರೆ ಕ್ವಾರಂಟೈನ್‌ನಲ್ಲಿ 21 ಜನರು ಇದ್ದಾರೆ. ಹಾಸ್ಟೆಲ್ ಕ್ವಾರಂಟೈನ್‌ನಲ್ಲಿ 704 ಜನರು ಇದ್ದಾರೆ. ಇನ್ನೂ 291 ಜನರ ಕೋವಿಡ್ - 19 ಪರೀಕ್ಷೆ ವರದಿಗಾಗಿ ಕಾಯಲಾಗುತ್ತಿದೆ.












Click it and Unblock the Notifications