Breaking; ಯಡಿಯೂರಪ್ಪ ನಿಲುವು ಬಗ್ಗೆ ಎಂ. ಬಿ. ಪಾಟೀಲ್ ಮೆಚ್ಚುಗೆ

ಬೆಂಗಳೂರು, ಏಪ್ರಿಲ್ 25; ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಸೂಕ್ತವಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಮಾಜಿ ಸಚಿವ ಎಂ. ಬಿ. ಪಾಟೀಲ್ ಯಡಿಯೂರಪ್ಪ ನಡೆ ಸ್ವಾಗತಿಸಿದ್ದಾರೆ.

ಸೋಮವಾರ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಎಂ. ಬಿ. ಪಾಟೀಲ್ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ. ಎಸ್. ಯಡಿಯೂರಪ್ಪ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದರು.

ಆದರೆ ಭಾನುವಾರ ಯಡಿಯೂರಪ್ಪ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ತಮ್ಮ ತೀರ್ಮಾನ ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕು ಎಂದು ಕೋರಿದ್ದರು.

MB Patil Appreciate Yediyurappa Letter On Shivamogga Airport Naming

ಎಂ. ಬಿ. ಪಾಟೀಲ್ ತಮ್ಮ ಫೇಸ್‌ ಬುಕ್‌ನಲ್ಲಿ ತಮ್ಮ ಹೆಸರು ಬೇಡ. ತಮಗಿಂತಲೂ ಹೆಚ್ಚಿನ ಸಾಧನೆ ಮಾಡಿದವರ ಹೆಸರನ್ನು ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಇಡಿ. ಕಾಮಗಾರಿಗಳನ್ನು ಶೀಘ್ರ ಮುಗಿಸಲು ಅಗತ್ಯದ ಅನುದಾನವನ್ನು ಬಿಡುಗಡೆ ಮಾಡಿ ಎಂಬ ಅಮೂಲ್ಯ ಸಲಹೆ ನೀಡಿ ದೊಡ್ಡತನ ಮತ್ತು ಹೃದಯ ಶ್ರೀಮಂತಿಕೆ ತೋರಿದ ಹಿರಿಯರಾದ ಶ್ರೀ ಬಿ.ಎಸ್. ಯಡಿಯೂರಪ್ಪ ಅವರ ನಡೆ ಪ್ರಶಂಸನಾರ್ಹ ಎಂದು ಹೇಳಿದ್ದಾರೆ.

ಕಳೆದ ವಾರ ಶಿವಮೊಗ್ಗ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗದ ಸೊಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ ಮಾಡಿದ್ದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಶಿವಮೊಗ್ಗ ವಿಮಾನ‌ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಹೆಸರು ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+