ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಸ್ತ್ರಿ ಮಾಡುವಾಗ ಶಾರ್ಟ್ ಸರ್ಕ್ಯೂಟ್ ಆಗಿ ಎಂಬಿಬಿಎಸ್ ವಿದ್ಯಾರ್ಥಿ ಸಾವು; ಸಾವಿನ ಹಿಂದೆ ಶಂಕೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 12: ಬಟ್ಟೆ ಇಸ್ತ್ರಿ ಮಾಡುತ್ತಿದ್ದ ಸಂದರ್ಭ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ವಿದ್ಯಾರ್ಥಿಯೊಬ್ಬರು ಸಾವಿಗೀಡಾದ ಘಟನೆ ಶಿವಮೊಗ್ಗದ ಪುರ್ಲೆ ಬಡಾವಣೆಯಲ್ಲಿ ನಡೆದಿದೆ.

ಬಟ್ಟೆ ಒಣಹಾಕುವಾಗ ವಿದ್ಯುತ್ ತಗುಲಿ ತಾಯಿ ಮಕ್ಕಳ ಸಾವುಬಟ್ಟೆ ಒಣಹಾಕುವಾಗ ವಿದ್ಯುತ್ ತಗುಲಿ ತಾಯಿ ಮಕ್ಕಳ ಸಾವು

ಶಿವಮೊಗ್ಗದ ಸುಬ್ಬಯ್ಯ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ, ದಾವಣಗೆರೆ ಮೂಲದ ವಿದ್ಯಾರ್ಥಿ ನಿತಿನ್ (23) ಮೃತಪಟ್ಟಿರುವ ವಿದ್ಯಾರ್ಥಿ. ನವೆಂಬರ್ 11, ಸೋಮವಾರ ರಾತ್ರಿ ಮನೆಯಲ್ಲಿ ಬಟ್ಟೆ ಇಸ್ತ್ರಿ ಮಾಡಿಕೊಳ್ಳಲು ನಿತಿನ್ ಮುಂದಾಗಿದ್ದಾನೆ. ಹೀಗೆ ಇಸ್ತ್ರಿ ಮಾಡುತ್ತಿದ್ದ ಸಂದರ್ಭ ಶಾರ್ಟ್ ಸರ್ಕ್ಯೂಟ್ ಆಗಿ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

MBBS Student Death By Short Circuit In Shivamogga

ನಿತಿನ್ ಮನೆಯಿಂದ ಹೊಗೆ ಬಂದಿದ್ದನ್ನು ಗಮನಿಸಿದ ಸ್ಥಳೀಯರು ಮನೆ ಬಾಗಿಲು ತೆಗೆದು ನೋಡಿದಾಗ ನಿತಿನ್ ನೆಲದ ಮೇಲೆ ಬಿದ್ದಿರುವುದನ್ನು ನೋಡಿದ್ದಾರೆ. ಸ್ಥಳೀಯರು ತಕ್ಷಣ ನಿತಿನ್ ಸ್ನೇಹಿತರಿಗೆ ಈ ವಿಷಯ ತಿಳಿಸಿದ್ದಾರೆ. ಆತನ ವೈದ್ಯಕೀಯ ಸ್ನೇಹಿತರು ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದಾಗ ನಿತಿನ್ ಮೃತಪಟ್ಟಿದ್ದನು.

ಆದರೆ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಪೊಲೀಸರ ತನಿಖೆಯಿಂದ ವಿದ್ಯಾರ್ಥಿ ಸಾವಿಗೆ ನಿಖರವಾದ ಕಾರಣ ತಿಳಿದುಬರಬೇಕಿದೆ. ಈ ಸಂಬಂಧ ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Student died by short circuit while ironing clothes occurred in Purale area of ​​Shivamogga
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X