ಸಿಮ್ಸ್ ವೈದ್ಯಕೀಯ ಅಧೀಕ್ಷಕರಾಗಿ ಡಾ.ಶ್ರೀಧರ್ ನೇಮಕ
ಶಿವಮೊಗ್ಗ, ಜುಲೈ 21: ಶಿವಮೊಗ್ಗದ ಸಿಮ್ಸ್ ನ ವೈದ್ಯಕೀಯ ಅಧೀಕ್ಷಕರಾಗಿ ಮೆಗ್ಗಾನ್ ನ ವೈದ್ಯ ಡಾ.ಶ್ರೀಧರ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಈ ಹುದ್ದೆಯಲ್ಲಿ ಪ್ರಭಾರಿಯಾಗಿದ್ದ ಡಾ.ವಿರೂಪಾಕ್ಷಪ್ಪನವರ ನಂತರ ರಾಜ್ಯ ಸರ್ಕಾರದ ವೈದ್ಯಕೀಯ ಶಿಕ್ಷಣ ಇಲಾಖೆ ಡಾ.ಶ್ರೀಧರ್ ಅವರನ್ನು ನೇಮಿಸಿ ಆದೇಶಿಸಿದೆ. ವಿರೂಪಾಕ್ಷಪ್ಪನವರನ್ನು ಜನರಲ್ ಮೆಡಿಸಿನ್ ವಿಭಾಗದ ಪ್ರಾಧ್ಯಾಪಕರು ಮತ್ತು ವಿಭಾಗದ ಮುಖ್ಯಸ್ಥರನ್ನಾಗಿ ಮುಂದುವರೆಯುವಂತೆ ಸೂಚನೆ ನೀಡಲಾಗಿದೆ.

ಆಡಳಿತಾತ್ಮಕ ಹಿತದೃಷ್ಟಿಯಿಂದ ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಡಾ.ಶ್ರೀಧರ್ ಅವರನ್ನು ವೈದ್ಯಕೀಯ ಅಧೀಕ್ಷಕರ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕ ಪ್ರಭಾರದಲ್ಲಿರಿಸಿ ಆದೇಶಿಸಿದೆ.












Click it and Unblock the Notifications