• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಕಾರ್ಯಾರಂಭ

By ಶಿವಮೊಗ್ಗ ಪ್ರತಿನಿಧಿ
|

ಶಿವಮೊಗ್ಗ, ಆಗಸ್ಟ್ 29: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳುವ ಉದ್ದೇಶದಿಂದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಆರಂಭಿಸಲಾಗಿದೆ.

ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

ಮೆಡಿಕಲ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲು ಪ್ರಾಕ್ಸಿಯಾರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ 10 ವರ್ಷಗಳ ಟೆಂಡರ್ ನೀಡಲಾಗಿದ್ದು, ಶುಕ್ರವಾರದಿಂದ ಆಕ್ಸಿಜನ್ ಸರಬರಾಜು ಆರಂಭಿಸಲಾಗಿದೆ ಎಂದು ಶಿವಮೊಗ್ಗ ಬೋಧನಾ ಆಸ್ಪತ್ರೆಯ ನಿರ್ದೇಶಕ ಡಾ.ಸಿದ್ಧಪ್ಪ ತಿಳಿಸಿದ್ದಾರೆ. ಪ್ರಸ್ತುತ 13 ಕೆ.ಎಲ್.ಡಿ ಸಾಮರ್ಥ್ಯದ ಮೆಡಿಕಲ್ ಆಕ್ಸಿಜನ್ ಟ್ಯಾಂಕ್ ಕಾರ್ಯಾರಂಭ ಮಾಡಲಾಗಿದ್ದು, ಆಸ್ಪತ್ರೆಯ ಬೇಡಿಕೆಯನ್ನು ಸಂಪೂರ್ಣವಾಗಿ ಪೂರೈಸಲು ಸಾಧ್ಯವಾಗಲಿದೆ.

ತೀರ್ಥಹಳ್ಳಿ; ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರಕ್ಕೆ ವಿನೂತನ ಪ್ರಯತ್ನ

ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಲಭ್ಯತೆಗಾಗಿ ಪ್ಲಾಂಟ್ ಅಳವಡಿಸಲಾಗಿದೆ. ಕೊರೊನಾ ತೀವ್ರಗೊಂಡಂತೆ ಮೂಲ ತಯಾರಿಕಾ ಸಂಸ್ಥೆಗಳಿಂದ ಮೆಡಿಕಲ್ ಆಕ್ಸಿಜನ್ ಕೊರತೆ ಕಂಡು ಬಂದಿತ್ತು. ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್ ಲಭ್ಯವಿರುವುದರಿಂದ ಇನ್ನು ಮುಂದೆ ಯಾವುದೇ ಕೊರತೆ ಉಂಟಾಗದು ಎಂದು ತಿಳಿಸಿದ್ದಾರೆ. ಆಕ್ಸಿಜನ್ ಅಗತ್ಯವಿರುವ ವ್ಯಕ್ತಿಗಳಿಗೆ ಎಚ್.ಎಫ್.ಎನ್.ಸಿ ಮತ್ತು ವೆಂಟಿಲೇಟರ್ ಉಪಕರಣಗಳನ್ನು ಬಳಸಲಾಗುತ್ತಿದೆ.

ಒಬ್ಬ ವ್ಯಕ್ತಿಗೆ ಪ್ರತಿ ನಿಮಿಷಕ್ಕೆ 10 ರಿಂದ 60 ಲೀಟರ್ ಮೆಡಿಕಲ್ ಆಕ್ಸಿಜನ್ ಅವಶ್ಯಕವಿದ್ದು, ಯಾವುದೇ ತೊಂದರೆಯಾಗದಂತೆ ನಿರ್ವಹಣೆ ಮಾಡಲಾಗುತ್ತಿದೆ. ಮೆಗ್ಗಾನ್ ಆಸ್ಪತ್ರೆಯು 950 ಹಾಸಿಗೆ ಸಾಮರ್ಥ್ಯ ಹೊಂದಿದ್ದು, ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಪ್ರಸ್ತುತ ಜಿಲ್ಲೆಯಲ್ಲಿ 1621 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 7086 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಇದುವರೆಗೂ 120 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

English summary
The Medical Oxygen Plant has been started at the Mc Gann Hospital premises with the objective of ensuring that the coronavirus patients in the shivamogga do not lack oxygen,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X