ಶಿವಮೊಗ್ಗ : ಅಕ್ಟೋಬರ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಶಿವಮೊಗ್ಗ, ಸೆಪ್ಟೆಂಬರ್ 08 : ಶಿವಮೊಗ್ಗದಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗುತ್ತದೆ. ಸುಮಾರು 150 ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಜಿಲ್ಲಾಧಿಕಾರಿ ಡಾ.ಕೆ.ಎಂ.ಲೋಕೇಶ್ ಅಧಿಕಾರಿಗಳ ಜೊತೆ ಉದ್ಯೋಗ ಮೇಳದ ಸಿದ್ಧತೆ ಕುರಿತು ಸಭೆ ನಡೆಸಿದ್ದಾರೆ. ಕುವೆಂಪು ರಂಗಮಂದಿರದ ಹೊರಾಂಗಣ ಹಾಗೂ ಆಚಾರ್ಯ ತುಳಸಿ ರಾಷ್ಟ್ರೀಯ ಕಾಲೇಜಿಗೆ ಗುರುವಾರ ಭೇಟಿ ನೀಡಿ, ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು.

Mega job fair in Shivamogga on October 2017

ಜಿಲ್ಲೆಯ ನಿರುದ್ಯೋಗಿ ಯುವಕ ಯುವತಿಯರಿಗೆ ಮಾತ್ರವಲ್ಲದೆ ಉದ್ಯೋಗ ಮಾರುಕಟ್ಟೆಯಲ್ಲಿ ಉತ್ತಮ ಅವಕಾಶಗಳನ್ನು ಎದುರು ನೋಡುತ್ತಿರುವವರಿಗೆ ಅವಕಾಶಗಳನ್ನು ಕಲ್ಪಿಸಲು ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ. ಉದ್ಯೋಗ ಮೇಳದಲ್ಲಿ ಸುಮಾರು 125ರಿಂದ 150ಕಂಪೆನಿಗಳು ಭಾಗವಹಿಸುವ ನಿರೀಕ್ಷೆ ಇದ್ದು, 10ಸಾವಿರ ಅಭ್ಯರ್ಥಿಗಳು ಭಾಗವಹಿಸಬಹುದು ಎಂದು ಅಂದಾಜಿಸಲಾಗಿದೆ.

ವೆಬ್‌ಸೈಟ್ ಆರಂಭ : ಉದ್ಯೋಗಾಕಾಂಕ್ಷಿಗಳು ಹಾಗೂ ಕಂಪೆನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕು. ಇದಕ್ಕಾಗಿ ವೆಬ್‌ಸೈಟ್ ಆರಂಭಿಸಲಾಗುತ್ತದೆ. ಮೇಳದಲ್ಲಿ ಭಾಗವಹಿಸುವ ಕಂಪೆನಿಗಳ ವಿವರ, ನೋಂದಣಿ ಮಾಹಿತಿ, ಅಭ್ಯರ್ಥಿಗಳಿಗೆ ಸೂಚನೆಗಳು ಇತ್ಯಾದಿ ಮಾಹಿತಿಯನ್ನು ಅಲ್ಲಿ ನೀಡಲಾಗುತ್ತದೆ.

ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ತಾಲೂಕು ಮಟ್ಟದಲ್ಲಿ ಸಹ ಮಾಹಿತಿ ಕೇಂದ್ರಗಳನ್ನು ತೆರೆಯಲಾಗುತ್ತದೆ. ಅಭ್ಯರ್ಥಿಗಳು ಸಮರ್ಪಕವಾಗಿ ಬಯೋಡಾಟಾ ಸಿದ್ಧಪಡಿಸಲು ಹಾಗೂ ಸಂದರ್ಶನವನ್ನು ಎದುರಿಸಲು ತಾಲೂಕು ಮಟ್ಟದಲ್ಲಿ ತರಬೇತಿ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಎರಡು ದಿನಗಳ ಕಾಲ ಉದ್ಯೋಗ ಮೇಳ ನಡೆಯಲಿದ್ದು, ಪ್ರಥಮ ದಿನ ನೋಂದಣಿ ಮಾಡಿದ ಅಭ್ಯರ್ಥಿಗಳಿಗೆ, ಎರಡನೇ ದಿನ ಸ್ಥಳದಲ್ಲೇ ನೋಂದಣಿ ಮಾಡಲು ಬಯಸುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ. ಮೇಳ ನಡೆಯುವ ದಿನಾಂಕ ಇನ್ನೂ ಅಂತಿಮಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+