ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಿತ್ರದುರ್ಗ: ಶಾಸಕ ಯತ್ನಾಳ್ ಹೇಳಿಕೆಗೆ ಸಚಿವ ಶ್ರೀರಾಮುಲು ಹೇಳಿದ್ದೇನು?

By ಚಿತ್ರದುರ್ಗ ಪ್ರತಿನಿಧಿ
|
Google Oneindia Kannada News

ಚಿತ್ರದುರ್ಗ, ಜನವರಿ 16: ಶನಿವಾರದಂದು ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕೋಟೆನಾಡು ಚಿತ್ರದುರ್ಗದಲ್ಲಿ ಸಚಿವ ಶ್ರೀರಾಮುಲು ಅವರು ಲಸಿಕಾ ವಿತರಣೆಗೆ ಚಾಲನೆ ನೀಡಿದರು.

ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹೆಲ್ತ್ ವಾರಿಯರ್ ಅಜಯ್ ಎಂಬುವವರು ಮೊದಲ ಲಸಿಕೆ ಪಡೆದುಕೊಂಡರು. ಜಿಲ್ಲೆಯ 8 ಕೇಂದ್ರಗಳಲ್ಲಿ ಲಸಿಕೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಐತಿಹಾಸಿಕ ಕೊರೊನಾ ಲಸಿಕೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಾಲನೆಐತಿಹಾಸಿಕ ಕೊರೊನಾ ಲಸಿಕೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಚಾಲನೆ

ಇನ್ನು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವಾರು ನಾಲಿಗೆ ಬಿಗಿ ಹಿಡಿದು ಮಾತನಾಡಲಿ. ಸಮ್ಮಿಶ್ರ ಸರ್ಕಾರ ವೇಳೆ ಎಚ್.ಡಿ ಕುಮಾರಸ್ವಾಮಿ ಅವರನ್ನು ಕೆಳಗಿಳಿಸಿದರು. ಇಂದು ಬಿಜೆಪಿ ಸರ್ಕಾರದ ಬಗ್ಗೆ ನೈತಿಕ ಬಗ್ಗೆ ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

Chitradurga: Minister B Sriramulu Reacted About MLA Basanagowda Patil Yatnal Statement

ಮಾಜಿ ಸಿಎಂ ಸಿದ್ದರಾಮಯ್ಯಗೆ ಮತಿಭ್ರಮಣೆಯಾಗಿ ಈ ರೀತಿ ಪದೇ ಪದೇ ಹೇಳಿಕೆ ಕೊಡುತ್ತಿದ್ದಾರೆ. ಮುಖ್ಯಮಂತ್ರಿ ಸಿಎಂ ಬಿಎಸ್ವೈ ಅವರನ್ನು ಕೆಳಗಿಸುವ ಕೆಲಸ ಮಾಡುತ್ತಿದ್ದಾರೆ ಎಂದರು. ಎಲ್ಲೂ ಕೂಡ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳಲು ಆಗಲಿಲ್ಲ, ಅದಕ್ಕೋಸ್ಕರ ಪುಗಸಟ್ಟೆ ಪಬ್ಲಿಸಿಟಿ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ರೀತಿ ಹೇಳಿಕೆಗಳನ್ನು ಕೊಡುವುದು ಕೂಡಲೇ ನಿಲ್ಲಿಸಬೇಕೆಂದರು. ನಾಲಿಗೆ ಬಿಗಿ ಹಿಡಿದು ಮಾತನಾಡುವುದನ್ನು ಕಲಿಯಲಿ ಎಂದು ಸಿದ್ದರಾಮಯ್ಯಗೆ ತಿಳಿ ಹೇಳಿದರು.

ಇನ್ನು ಶಾಸಕ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶ್ರೀರಾಮುಲು, ಭಾರತೀಯ ಜನತಾ ಪಾರ್ಟಿಯಲ್ಲಿ ಹಿಟ್ ಅಂಡ್ ರನ್ ಹೇಳಿಕೆ ಸಲ್ಲದು ಎಂದಿದ್ದಾರೆ. ಆಧಾರ ರಹಿತ ಹೇಳಿಕೆಗಳನ್ನು ನೀಡುವುದು ಸರಿಯಲ್ಲ ಎಂದು ತಿಳಿಸಿದರು.

Recommended Video

ಮಂಡ್ಯ: 8 ಲಸಿಕ ಕೇಂದ್ರಗಳಲ್ಲಿ ಕೊರೊನಾ ಲಸಿಕೆ ವಿತರಣೆ, ಜಿಲ್ಲಾ ಆರೋಗ್ಯಾಧಿಕಾರಿ ಮಾಹಿತಿ | Oneindia Kannada

ಕೇಂದ್ರ ಗೃಹ ಸಚಿವ ಅಮಿತ್ ಶಾ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಬಿಜೆಪಿ ಶಿಸ್ತಿನ ಪಕ್ಷ, ಈ ರೀತಿ ಅಶಿಸ್ತಿನ ಹೇಳಿಕೆ ನೀಡಿದಾಗ ಕ್ರಮವನ್ನು ಕೈಗೊಳ್ಳಬೇಕಾಗುತ್ತದೆ. ಯತ್ನಾಳ್ ಹೇಳಿಕೆಯನ್ನು ಗಮನಿಸಿ ಅಮಿತ್ ಶಾ ಗಮನಕ್ಕೆ ತರಲಾಗುವುದು. ನಂತರ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಲಸ ಮಾಡಲಾಗುತ್ತದೆ ಎಂದು ಸಚಿವ ಶ್ರೀರಾಮುಲು ಹೇಳಿದರು.

English summary
"It is not right to make a hit-and-run statement and baseless statements in the Bharatiya Janata Party,' Minister Sriramulu said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X