ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ವಾತಂತ್ರ್ಯ ಹೋರಾಟಗಾರರು ಪಕ್ಷಾತೀತವಾಗಿರಬೇಕು: ಸಚಿವ ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಫೆಬ್ರವರಿ 27: ಎಚ್.ಎಸ್.ದೊರೆಸ್ವಾಮಿ ಅವರು ಸ್ವಾತಂತ್ರ್ಯ ಹೋರಾಟಗಾರರು, ಅವರು ಒಂದು ಪಕ್ಷದ ಪರವಾಗಿ ಮಾತನಾಡಿದರೆ ಅವರ ಬಗ್ಗೆ ಗೌರವ ಹೇಗೆ ಉಳಿಯುತ್ತದೆ, ಸ್ವಾತಂತ್ರ ಹೋರಾಟಗಾರರು ಪಕ್ಷಾತೀತವಾಗಿರಬೇಕು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ, ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಬಸವನಗೌಡ ಯತ್ನಾಳ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು.

"ಕಣ್ಣೀರು ಹಾಕುವ ಸಿಎಂ ಹೋಗಿ, ಕಣ್ಣೀರು ಒರೆಸುವ ಸಿಎಂ ಬಂದಿದ್ದಾರೆ'

ಕಾಂಗ್ರೆಸ್ ನಾಯಕರು ನೀಡಿದ ಹೇಳಿಕೆಗೆ ಹಿಂದಿನಿಂದನೂ ದೊರೆಸ್ವಾಮಿ ಅವರು ಬೆಂಬಲ‌ ನೀಡಿಕೊಂಡೇ ಬಂದಿದ್ದಾರೆ, ಈಗ ಯತ್ನಾಳ್ ಹೇಳಿಕೆ ವಿರೋಧಿಸಿ ಕಾಂಗ್ರೆಸ್ಸಿಗರು ಪ್ರತಿಭಟನೆ‌ ಆರಂಭಿಸಿರುವುದು ನಾಚಿಕೆಗೇಡಿನ ಸಂಗತಿ ಎಂದರು

Minister Eshwarappa Said Freedom Fighters Should Be Impartial

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ಅವರು, ""ಪ್ರಧಾನಿಯನ್ನು ಸಿದ್ದರಾಮಯ್ಯ ಕೊಲೆಗಡುಕ ಎಂದಾಗ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷ ಹೊರಗಡೆ ಹಾಕಬೇಕಿತ್ತು. ಇಂಥ ಕಾಂಗ್ರೆಸ್ಸಿಗರು ಯತ್ನಾಳ್ ವಿರುದ್ಧ ಪ್ರತಿಭಟನೆ ನಡೆಸುತ್ತಾರಂತೆ, ವಿಧಾನಸೌಧದ ಅಧಿವೇಶನ ನಡೆಯಲು ಬಿಡುವುದಿಲ್ಲ ಎನ್ನುತ್ತಿದ್ದಾರೆ ಇವರಿಗೆ ಏನು ಹೇಳಬೇಕು'' ಎಂದು ಕಿಡಿಕಾರಿದರು.

""ಅದು ಹೇಗೆ ಅಧಿವೇಶನ ನಡೆಯಲು ಬಿಡುವುದಿಲ್ಲವೋ ನಾನು ನೋಡುತ್ತೇನೆ ವಿಧಾನಸೌಧ ಅವರ ಸ್ವಂತ ಆಸ್ತಿಯಲ್ಲ, ಕಾಂಗ್ರೆಸ್ಸಿಗರ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ವಿಧಾನಸೌಧವಿಲ್ಲ'' ಎಂದು ತಿಳಿಸಿದರು.

ಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ರೈಲು, ಸೇವೆ ಲಾಭ ಪಡೆಯಿರಿಶಿವಮೊಗ್ಗದಿಂದ ಚೆನ್ನೈ, ತಿರುಪತಿಗೆ ರೈಲು, ಸೇವೆ ಲಾಭ ಪಡೆಯಿರಿ

"ಪಾಕಿಸ್ತಾನ ಜಿಂದಾಬಾದ್' ಎಂದವರ ಬಗ್ಗೆ ಖಂಡನಾ ಹೇಳಿಕೆ ನೀಡಿದರೆ ಸಿದ್ದರಾಮಯ್ಯ ವಿರೋಧ ಮಾಡುತ್ತಾರೆ, ಯತ್ನಾಳ್ ಹೇಳಿಕೆಗೆ ಧರಣಿ ಕೂರುತ್ತೀರಿ, ಪಾಕಿಸ್ತಾನ್ ಜಿಂದಾಬಾದ್ ಎಂದವರ ಬಗ್ಗೆ ಒಂದು ಖಂಡನಾ ಹೇಳಿಕೆ ನೀಡುತ್ತೀರಾ'' ಎಂದು ಸಿದ್ದರಾಮಯ್ಯರನ್ನು ಪ್ರಶ್ನಿಸಿದರು.

""ರಾಜ್ಯದಲ್ಲಿ ಕಾಂಗ್ರೆಸ್ ನಲ್ಲಿ ಎಷ್ಟು ಜನರಿದ್ದಾರೋ ಗೊತ್ತಿಲ್ಲ, ಇನ್ನೂ ನಿಮಗೆ ಕೆಪಿಸಿಸಿ ಅಧ್ಯಕ್ಷರನ್ನು ನೇಮಿಸಿಕೊಳ್ಳಲು ಆಗಿಲ್ಲ ‌ಇಂಥ ಕಾಂಗ್ರೆಸ್ ಯತ್ನಾಳ್ ವಿರುದ್ಧ ಧರಣಿ ಕೂರುತ್ತದೆಯಂತೆ ಎಂದು ವ್ಯಂಗ್ಯವಾಡಿದರು.

ಕಾಂಗ್ರೆಸ್ ನಿರ್ನಾಮವಾಗುವುದಕ್ಕೆ ಮೂಲಕಾರಣ‌, ದೊರೆಸ್ವಾಮಿ ಅಂತವರು. ಪಾಕಿಸ್ತಾನ್ ಜಿಂದಾಬಾದ್ ಎಂದವರ ವಿರುದ್ಧ ಧರಣಿ ಕೂತಿದ್ದರೆ ನಾವೂ ಅವರಿಗೆ ಬೆಂಬಲ ನೀಡುತ್ತಿದ್ದೆವು.

ಅಮೂಲ್ಯ ರಾಷ್ಟ್ರದ್ರೋಹಿ ಹೇಳಿಕೆ ನೀಡಿದ್ದಕ್ಕೆ ಪ್ರತಿಭಟನೆ ನಡೆಸುತ್ತಿದ್ದೇವೆ. ದೊರೆಸ್ವಾಮಿ ಅವರು ಹಿರಿತನಕ್ಕೆ ತಕ್ಕಂತೆ ಮಾರ್ಗದರ್ಶನ ಮಾಡಿದರೆ ನಾವು ಅವರೊಂದಿಗೆ ಇರುತ್ತೇವೆ'' ಎಂದರು.

English summary
Freedom fighters should be unbiased Minister KS Eshwarappa said In Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X