Get Updates
Get notified of breaking news, exclusive insights, and must-see stories!

ಸಚಿವ ಸ್ಥಾನಕ್ಕೆ ರಾಜೀನಾಮೆ; ಪತ್ರಿಕಾಗೋಷ್ಠಿಯಲ್ಲಿ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಶಿವಮೊಗ್ಗ, ಏಪ್ರಿಲ್ 14: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಪ್ರತಿಭಟನೆ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಗುತ್ತಿಗೆದಾರ ಸಂತೋಷ್‌ ಪಾಟೀಲ್ ಯಾರೆಂದು ನನಗೆ ಗೊತ್ತಿಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಬುಧವಾರದ ಸುದ್ದಿಗೋಷ್ಠಿಯಲ್ಲಿ ಕೆ.ಎಸ್. ಈಶ್ವರಪ್ಪ ಖಡಕ್ ಆಗಿ ಹೇಳಿದ್ದರು.

ಒಂದು ದಿನದ ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಶಿವಮೊಗ್ಗದಲ್ಲಿ ಗುರುವಾರ ಸಂಜೆ ತುರ್ತು ಪತ್ರಿಕಾಗೋಷ್ಠಿ ನಡೆಸಿ ಶುಕ್ರವಾರ ಸಂಜೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.

Minister KS Eshwarappa Announces Resignation; Press meet Highlights

ಶಿವಮೊಗ್ಗದಲ್ಲಿ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, "ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ತಪ್ಪು ಮಾಡಿದ್ದರೆ ನಮ್ಮ ಮನೆದೇವತೆ ಚೌಡೇಶ್ವರಿ ನನಗೆ ತಕ್ಕ ಶಿಕ್ಷೆ ನೀಡಲಿ. ನಾಳೆಯೇ (ಶುಕ್ರವಾರ) ಬೆಂಗಳೂರಿಗೆ ಹೋಗಿ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಲಿದ್ದೇನೆ,'' ಎಂದು ಸ್ಪಷ್ಟಪಡಿಸಿದ್ದಾರೆ.

"ಪಕ್ಷದಲ್ಲಿ ಬೆಳೆಸಿದ ಹಿರಿಯರು, ನಾಯಕರಿಗೆ ಇರುಸು ಮುರಿಸು ಆಗಬಾರದು ಎಂಬ ಕಾರಣಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ಈತನಕ ಬೆಂಬಲ ನೀಡಿದವರಿಗೆ ಧನ್ಯವಾದಗಳು, ನನಗೆ ಸಂಪೂರ್ಣ ವಿಶ್ವಾಸವಿದೆ. ನನ್ನದು ಒಂದೇ ಒಂದು ಪರ್ಸೆಂಟ್ ತಪ್ಪಿದ್ದರೆ ಭಗವಂತ ಶಿಕ್ಷೆ ಕೊಡಲಿ. ಇದರ ಬಗ್ಗೆ ತನಿಖೆ ಮಾಡಬೇಕು ಎಂದು ಸಿಎಂಗೆ ಹೇಳಿದಾಗ ಸಂತೋಷದಿಂದ ತನಿಖೆ ಮಾಡಿಸುತ್ತೇನೆ,'' ಎಂದಿದ್ದಾರೆ ಎಂದು ಹೇಳಿದರು.

ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿದ್ದ ಕಾಂಗ್ರೆಸ್
ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿತ್ತು. ಬುಧವಾರ ರಾಜ್ಯಪಾಲರಿಗೂ ಮನವಿ ಸಲ್ಲಿಸಿತ್ತು. ಇನ್ನು ಗುರುವಾರ ಬೆಳಗ್ಗೆ ಸಿಎಂ ಬೊಮ್ಮಾಯಿ ನಿವಾಸಕ್ಕೆ ಕಾಂಗ್ರೆಸ್‌ ನಾಯಕರು ಮುತ್ತಿಗೆ ಹಾಕುವ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು.

ಇದೇ ಏ.16, 17 ರಂದು ರಾಜ್ಯ ಬಿಜೆಪಿ ಕಾರ್ಯಕಾರ್ಯಣಿ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಎರಡು ದಿನ ಕರ್ನಾಟಕ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ವೇಳೆ ಈಶ್ವರಪ್ಪ ಪ್ರಕರಣದಿಂದ ತಮ್ಮ ಭೇಟಿಯ ಸಂದರ್ಭದಲ್ಲಿ ಮುಜುಗರಕ್ಕೆ ಒಳಗಾಗಬಹುದು ಎಂಬ ಕಾರಣದಿಂದ ರಾಜೀನಾಮೆ ನೀಡುವಂತೆ ಸಲಹೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಮಧ್ಯಾಹ್ನ ಈಶ್ವರಪ್ಪ ಅವರಿಗೆ ಫೋನ್‌ ಕರೆ ಮಾಡಿ ತಿಳಿಸಿದ್ದರು.

ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ನೇರ ಕಾರಣ. ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ವಾಟ್ಸಪ್ ಡೆತ್‌ನೋಟ್ ಸಂದೇಶ ಕಳುಹಿಸಿ ಗುತ್ತಿಗೆದಾರ ಸಂತೋಷ್‌ ಪಾಟೀಲ್ ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಗುರುವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ತವರೂರಿನಲ್ಲಿ ಸಂತೋಷ್‌ ಪಾಟೀಲ್ ಅಂತ್ಯಕ್ರಿಯೆ ನೆರವೇರಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+