• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಬಾಗಿನ ಅರ್ಪಣೆ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 06: ಮಲೆನಾಡು ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಬಾಗಿನ ಅರ್ಪಿಸಿದರು.

ಕಳೆದೆರೆಡು ದಿನಗಳಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ಡ್ಯಾಂ ನಿಂದ ಹೊರಬಿಡಲಾಗುತ್ತಿದೆ.

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡ ಹಸಿರುಮಕ್ಕಿ ಲಾಂಚ್, ಪ್ರಯಾಣಿಕರ ಆತಂಕಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ಸಿಲುಕಿಕೊಂಡ ಹಸಿರುಮಕ್ಕಿ ಲಾಂಚ್, ಪ್ರಯಾಣಿಕರ ಆತಂಕ

ಈ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ತುಂಗಾ ನದಿ ಭರ್ತಿಯಾಗಿ ಹರಿಯುತ್ತಿದ್ದು, ಕೋರ್ಪಲಯ್ಯನ ಛತ್ರದ ಬಳಿಯ ಮಂಟಪ ಮುಳುಗಿ ಹೋಗಿದೆ. ಇಂದು ಸಚಿವ ಕೆ.ಎಸ್ ಈಶ್ವರಪ್ಪ ಅವರು ಕುಟುಂಬ ಸಮೇತರಾಗಿ ತುಂಗಾ ನದಿಗೆ ಬಾಗಿನ ಅರ್ಪಿಸಿದರು.

ಈ ವೇಳೆ ಮಾತನಾಡಿದ ಸಚಿವರು, ತುಂಗಾ ನದಿ ಸಂಪೂರ್ಣವಾಗಿ ತುಂಬಿ ಹರಿಯುತ್ತಿರುವುದು ಸಂತಸ ತಂದಿದೆ. ರೈತರ ಮೊಗದಲ್ಲಿ ಹರ್ಷ ಕಾಣುತ್ತಿದ್ದೇವೆ. ಕಳೆದ ಭಾರಿ ನಿರೀಕ್ಷೆ ಮೀರಿ ನೆರೆ ಬಂದ ಹಿನ್ನೆಲೆಯಲ್ಲಿ, ಜನರು ಸಾಕಷ್ಟು ತೊಂದರೆ ಅನುಭವಿಸಿದ್ದಾರೆ ಎಂದರು.

ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...ಶಿವಮೊಗ್ಗದಲ್ಲಿನ ಮಳೆ ಪ್ರಮಾಣ; ಜಿಲ್ಲೆಯ ಜಲಾಶಯಗಳ ನೀರಿನ ಮಟ್ಟ...

ರಾಜ್ಯದ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ರಸ್ತೆ ದುರಸ್ತಿ ಸೇರಿದಂತೆ, ಇತರೆ ಪರಿಹಾರಕ್ಕಾಗಿ ಸ್ಪಂದಿಸಿ, 1500 ಕೋಟಿ ರೂ. ಬಿಡುಗಡೆ ಮಾಡಿದ್ದು, ತುರ್ತು ಪರಿಹಾರ ಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸದರು.

Shivamogga: Minister KS Eshwarappa Offered Bagina To Tunga River

ಈ ಬಾರಿ ಯಾವುದೇ ತೊಂದರೆ ಇಲ್ಲದಂತೆ ಮಳೆಯಾಗುತ್ತಿದ್ದು, ಯಾವುದೇ ತೊಂದರೆಯಾಗದಂತೆ ತುಂಗೆಗೆ ಬಾಗಿನ ಅರ್ಪಿಸಿ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದರು.

English summary
Monsoon Rain Continued In Malenadu Region, Minister KS Eshwarappa today offered a Bagina to the Tunga River.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X