ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟವರ ಋಣ ತೀರಿಸಲಿದೆ ಬಿಜೆಪಿ: ಕೆ.ಎಸ್ ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಅಕ್ಟೋಬರ್ 14: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವಿದ್ದಾಗ ಯಾರು ರಾಜೀನಾಮೆ ಕೊಟ್ಟು ಬಿಜೆಪಿಗೆ ಬಂದಿದ್ದಾರೆಯೋ, ಅವರ ಋಣ ತೀರಿಸುವ ಜವಾಬ್ದಾರಿ ಬಿಜೆಪಿಯದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯನ್ನಾಗಿ ಮುನಿರತ್ನ ಅವರನ್ನು ಕಣಕ್ಕೆ ಇಳಿಸಿದ್ದೇವೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ, ಮುನಿರತ್ನ ವಿರುದ್ಧದ ಅಕ್ರಮ ಚುನಾವಣೆ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಾರ್ಹವಾಗಿದೆ ಎಂದರು.

ಶಿರಾ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಘೋಷಣೆ ಶಿರಾ ಉಪ ಚುನಾವಣೆ; ಬಿಜೆಪಿ ಅಭ್ಯರ್ಥಿ ಘೋಷಣೆ

ಇನ್ನು ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ 2020-21ನೇ ಸಾಲಿಗೆ 44.86 ಲಕ್ಷ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಲಾಗಿದ್ದು, ಈ ವರ್ಷ 8.34 ಲಕ್ಷ ಕಾಮಗಾರಿಗಳು ಪ್ರಗತಿಯಲ್ಲಿವೆ. ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ 3ರಡಿ ಕರ್ನಾಟಕ ರಾಜ್ಯಕ್ಕೆ ಒಟ್ಟು 5612.50 ಕಿ.ಮೀ ಹಂಚಿಕೆ ಮಾಡಲಾಗಿದೆ ಎಂದು ಈ ವೇಳೆ ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.

Shivamogga: Minister KS Eshwarappa Reacted About RR Nagara By-Election

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯು ಆರ್.ಆರ್. ನಗರ ಉಪ ಚುನಾವಣೆಗೆ ಮುನಿರತ್ನ ಅವರ ಹೆಸರನ್ನು ಮಂಗಳವಾರ ಪ್ರಕಟಿಸುತ್ತಿದ್ದಂತೆಯೆ ಬಿಜೆಪಿ ಕಚೇರಿಗೆ ಮುನಿರತ್ನ ಅವರು ಆಗಮಿಸಿದ್ದರು. ಜೊತೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಂದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಈಗಾಗಲೇ ಬಿ ಫಾರಂ ಅನ್ನು ಪಡೆದುಕೊಂಡಿದ್ದಾರೆ.

ಮಂಗಳವಾರ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ ತುಮಕೂರು ಜಿಲ್ಲೆಯ ಶಿರಾ ಕ್ಷೇತ್ರದ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ನಿರೀಕ್ಷೆಯಂತೆ ಡಾ. ರಾಜೇಶ್ ಗೌಡ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ನವೆಂಬರ್ 3 ರಂದು ಉಪ ಚುನಾವಣೆ ನಡೆಯಲಿದೆ.

English summary
Rural Development Minister KS Eshwarappa said would be we won in the Rajarajeshwari Nagar assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X