ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯಗೆ ಹುಚ್ಚು ಹಿಡಿದಿದೆ; ಸಚಿವ ಈಶ್ವರಪ್ಪ ತಿರುಗೇಟು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 6: ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರು ಲೆಕ್ಕದಲ್ಲೂ ಇಲ್ಲ, ಬುಕ್ಕದಲ್ಲೂ ಇಲ್ಲ. ತೊಟ್ಟಿಯಲ್ಲಿರುವ ಕಸದಂತಾಗಿದೆ ಸಿದ್ದರಾಮಯ್ಯ ಅವರ ಪರಿಸ್ಥಿತಿ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ತಿರುಗೇಟು ನೀಡಿದರು.

ಕೆ.ಎಸ್ ಈಶ್ವರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

""ಮೈಸೂರು ಮೇಯರ್, ಉಪ ಮೇಯರ್ ಚುನಾವಣೆ ಸಂದರ್ಭ ತಮ್ಮ ಮಾತು ಕೇಳಲಿಲ್ಲ ಎಂದು ನಾಲ್ಕು ದಿನ ಹೋಗಿ ರೆಸಾರ್ಟ್ ನಲ್ಲಿ ಕೂತಿದ್ದರು. ಸಿದ್ದರಾಮಯ್ಯ ಅವರಿಗೆ ಅನ್ಯಾಯವಾಗಿದೆ ಎಂದು ರಮೇಶ್ ಕುಮಾರ್ ಅವರೂ ಹೇಳಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಅವರ ಸ್ಥಿತಿ ಹೇಗಿದೆ ಅಂದರೆ ತೊಟ್ಟಿಯಲ್ಲಿರುವ ಕಸದಂತಾಗಿದೆ. ಹಾಗಾಗಿ ಮೊದಲು ಅವರು ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು'' ಎಂದು ಸಚಿವ ಈಶ್ವರಪ್ಪ ಆಗ್ರಹಿಸಿದರು.

Shivamogga: Minister KS Eshwarappa Reaction On Siddaramaiah Statement

ಮುಖ್ಯಮಂತ್ರಿ ಸ್ಥಾನ ಕಳೆದುಕೊಂಡ ಮೇಲೆ ಸಿದ್ದರಾಮಯ್ಯ ಅವರಿಗೆ ಹುಚ್ಚು ಹಿಡಿದಿದೆ. ಕರ್ನಾಟಕದಲ್ಲಿ ಇಷ್ಟೊಂದು ಅಭಿವೃದ್ಧಿ ಆಗುತ್ತಿರುವುದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಇದರಿಂದ ಸಿದ್ದರಾಮಯ್ಯ ಅವರಿಗೆ ತಲೆಕೆಟ್ಟು ಹೋಗಿದೆ ಎಂದು ಆರೋಪಿಸಿದರು.

Shivamogga: Minister KS Eshwarappa Reaction On Siddaramaiah Statement

ಅಧಿಕಾರಿಗಳು ಮಾತು ಕೇಳುತ್ತಿಲ್ಲ, ಸಚಿವರು ಮಾತು ಕೇಳುತ್ತಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ನಾಳೆಯೋ, ನಾಡಿದ್ದೋ ಬೆಂಗಳೂರಿಗೆ ಹೋಗುತ್ತೇನೆ. ಸ್ವಾತಂತ್ರ್ಯ ನಂತರ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಏನೇನು ಆಗಿರಲಿಲ್ಲ, ಈಗ ಏನೇನು ಆಗಿದೆ ಅನ್ನುವುದರ ಪಟ್ಟಿ ಕೊಡುತ್ತೇನೆ. ನಾವು, ನಮ್ಮ ಅಧಿಕಾರಿಗಳು ಏನೆಲ್ಲ ಕೆಲಸ ಮಾಡಿದ್ದೇವೆ ಎಂದು ತಿಳಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.

English summary
In Shivamogga, Minister Eshwarappa has responded to former Chief Minister Siddaramaiah's statement that KS Eshwarappa should resign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X