• search
 • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಸಚಿವ ಈಶ್ವರಪ್ಪಗೆ ಕೋವಿಡ್ ಸೋಂಕು; ಆಸ್ಪತ್ರೆಗೆ ದಾಖಲು

|

ಶಿವಮೊಗ್ಗ, ಸೆಪ್ಟೆಂಬರ್ 01: ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ ಮತ್ತು ಸಚಿವ ಕೆ. ಎಸ್. ಈಶ್ವರಪ್ಪಗೆ ಕೋವಿಡ್ ಸೋಂಕು ತಗುಲಿದೆ. ಸಚಿವರು ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

   KS Eshwarappa ಅವರಿಗೆ ಕೊರೊನ , ಆಸ್ಪತ್ರೆಗೆ ದಾಖಲು | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಮಂಗಳವಾರ ಮಧ್ಯಾಹ್ನ ಟ್ವೀಟ್ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಈ ಕುರಿತು ಮಾಹಿತಿ ನೀಡಿದ್ದಾರೆ.

   ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು

   "ನನಗೆ ಇಂದು ಕೊರೊನಾ ಸೋಂಕು ದೃಢ ಪಟ್ಟಿದ್ದು, ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಸದ್ಯಕ್ಕೆ ವೈದ್ಯರ ಸಲಹೆಯಂತೆ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ಹೇಳಿದ್ದಾರೆ.

   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇಂದ್ರಗೆ ಕೊರೊನಾ ಸೋಂಕು

   "ನಿಮ್ಮೆಲ್ಲರ ಆಶೀರ್ವಾದ, ಹಾರೈಕೆಯಿಂದ ಶೀಘ್ರ ಗುಣಮುಖನಾಗುವ ವಿಶ್ವಾಸ ನನಗಿದೆ" ಎಂದು ಸಚಿವ ಕೆ. ಎಸ್. ಈಶ್ವರಪ್ಪ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

   ಕರ್ನಾಟಕದಲ್ಲಿ 6495 ಹೊಸ ಕೋವಿಡ್ ಪ್ರಕರಣ ದಾಖಲು

   ಸೋಮವಾರ ಮಹಿಳಾ, ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್ ಸೋಂಕು ತಗುಲಿತ್ತು. ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ ಎಂದು ಸಚಿವರು ಟ್ವೀಟ್ ಮಾಡಿದ್ದರು.

   ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರರಿಗೂ ಸೋಮವಾರ ಕೋವಿಡ್ ಸೋಂಕು ತಗುಲಿರುವುದು ಖಚಿತವಾಗಿತ್ತು. ಅವರು ಮನೆಯಲ್ಲಿಯೇ ಐಸೊಲೇಷನ್‌ನಲ್ಲಿದ್ದಾರೆ.

   ಸೋಮವಾರ ಶಿವಮೊಗ್ಗ ಜಿಲ್ಲೆಯಲ್ಲಿ 168 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 8,308ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2750.

   English summary
   Karnataka minister for rural development and panchayat raj K. S. Eshwarappa tested positive for COVID 19. Minister admitted to hospital.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X