ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking: ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆ ಘೋಷಣೆ

|
Google Oneindia Kannada News

ಶಿವಮೊಗ್ಗ, ಏಪ್ರಿಲ್ 14: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರವಾಗಿ ವಿಪಕ್ಷಗಳ ತೀವ್ರ ಆಗ್ರಹ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ಗುರುವಾರ ಸಂಜೆ ಶಿವಮೊಗ್ಗದಲ್ಲಿ ತುರ್ತು ಪತ್ರಿಕಾಗೋಷ್ಠಿ ನಡೆಸಿ, ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ಶುಕ್ರವಾರ ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದೇನೆ ಎಂದು ಪ್ರಕಟಿಸಿದರು.

ಇನ್ನು ಮೂರು ದಿನ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದ ಸಚಿವ ಈಶ್ವರಪ್ಪ, ಇಂದು ಸಂಜೆ ದಿಢೀರ್ ಪತ್ರಿಕಾಗೋಷ್ಠಿ ಕರೆದಿದ್ದು, ಸಾಕಷ್ಟು ಕುತೂಹಲ ಮೂಡಿಸಿತ್ತು. ಬೆಳಗ್ಗೆಯಿಂದಲೂ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

Recommended Video

ಪ್ರತಿಭಟನೆ ಮಾಡೋಕೆ ಹೋದ ಕಾಂಗ್ರೆಸ್ ನಾಯಕರ ಕಥೆ ನೋಡಿ | Oneindia Kannada

ಬುಧವಾರ ಶಿವಮೊಗ್ಗದಲ್ಲಿ ಮಾತನಾಡಿದ್ದ ಸಚಿವ ಕೆ.ಎಸ್.ಈಶ್ವರಪ್ಪ, ನನ್ನ ಮೇಲಿನ ಆರೋಪಗಳೆಲ್ಲ ಸುಳ್ಳು, ಸಂತೋಷ್ ಯಾರು ಎಂಬುದೇ ಗೊತ್ತಿಲ್ಲ, ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದರು.

Minister KS Eshwarappa Will Held Emergency Press Conference In Shivamogga On Thursday at 6 pm

English summary
Minister KS Eshwarappa will held a major Emergency Press conference at 6 pm today (Thursday) in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X