ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಅಪ್ರಾಪ್ತೆ ಮೇಲೆ ಅತ್ಯಾಚಾರ, ನಾಲ್ವರ ಬಂಧನ

|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 08: ಶಿವಮೊಗ್ಗದಲ್ಲಿ ಶನಿವಾರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೆಗ್ಗಾನ್ ಆಸ್ಪತ್ರೆ ವಾರ್ಡ್‌ ಬಾಯ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ವಾರ್ಡ್‌ ಬಾಯ್ ಮನೋಜ್, ಆತನ ಸ್ನೇಹಿತರಾದ ಪ್ರಜ್ವಲ್, ವಿನಯ್, ಸಂದೀಪ್ ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ 23 ವರ್ಷದವರಾಗಿದ್ದಾರೆ.

ಶಿವಮೊಗ್ಗ; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಶಿವಮೊಗ್ಗ; ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿಯನ್ನು ನೋಡಿಕೊಳ್ಳಲು ಮೆಗ್ಗಾನ್ ಆಸ್ಪತ್ರೆಯಲ್ಲಿದ್ದ ಬಾಲಕಿಗೆ ಊಟ ತಂದು ಕೊಟ್ಟು ಆಕೆಯ ಜೊತೆ ಮನೋಜ್ ಸಲುಗೆ ಬೆಳೆಸಿಕೊಂಡಿದ್ದ. ಶನಿವಾರ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಆಗ ಊಟ ಕೊಡಿಸುವುದಾಗಿ ಆಕೆಯನ್ನು ಕರೆದುಕೊಂಡು ಹೋಗಿದ್ದ.

ಕೋಲಾರದಲ್ಲಿ 13ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕೋಲಾರದಲ್ಲಿ 13ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ

Minor Girl Raped In Shivamogga Four Accused Arrested

ಆಸ್ಪತ್ರೆಯಿಂದ ಕಾರಿನಲ್ಲಿ ಬಾಲಕಿಯನ್ನು ಸಾಗರ ರಸ್ತೆಯಲ್ಲಿನ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ನಾಲ್ವರು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಆಸ್ಪತ್ರೆಗೆ ಬಂದ ಬಳಿಕ ಬಾಲಕಿ ಈ ಕುರಿತು ತಾಯಿಗೆ ಮಾಹಿತಿ ನೀಡಿದ್ದಳು.

ಸುಟ್ಟ ಗಾಯಗಳಿಂದ ಅತ್ಯಾಚಾರ ಸಂತ್ರಸ್ತ ಬಾಲಕಿ ಸಾವು: ಮೂವರ ಬಂಧನಸುಟ್ಟ ಗಾಯಗಳಿಂದ ಅತ್ಯಾಚಾರ ಸಂತ್ರಸ್ತ ಬಾಲಕಿ ಸಾವು: ಮೂವರ ಬಂಧನ

ಘಟನೆ ಬಳಿಕ ಮೆಗ್ಗಾನ್ ಆಸ್ಪತ್ರೆಯಲ್ಲಿಯೇ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಖಿನ್ನತೆಗೆ ಒಳಗಾಗಿದ್ದು, ಪೊಲೀಸರ ಪ್ರಶ್ನೆಗಳಿಗೆ ಸಹ ಸರಿಯಾಗಿ ಉತ್ತರ ಕೊಡುತ್ತಿಲ್ಲ. ಬಾಲಕಿಯನ್ನು ಸಖಿ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

ಘಟನೆಗೆ ಶಿವಮೊಗ್ಗದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ವಿವಿಧ ಸಂಘಟನೆಗಳು ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಪೊಲೀಸರಿಗೆ ಮನವಿ ಸಲ್ಲಿಸಿದ್ದರು. ದೊಡ್ಡಪೇಟೆ ಪೊಲೀಸರು ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

English summary
4 accused arrested in connection with the minor girl rape case in Shivamogga. MCGANN hospital ward boy and his three friends arrested and all belongs to age 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X