ಶಿವಮೊಗ್ಗ; ನಾಪತ್ತೆಯಾಗಿದ್ದ ಯುವತಿ ಬಾವಿಯಲ್ಲಿ ಶವವಾಗಿ ಪತ್ತೆ
ಶಿವಮೊಗ್ಗ, ಸೆಪ್ಟೆಂಬರ್ 25: ಜಿಲ್ಲೆಯ ಹೊಸನಗರ ತಾಲೂಕು ರಿಪ್ಪನ್ ಪೇಟೆ ಸಮೀಪದ ಮಾದಾಪುರ ಗ್ರಾಮದಲ್ಲಿ ಕಾಣೆಯಾಗಿದ್ದ ಯುವತಿಯ ಶವ ಇಂದು ಬಾವಿಯೊಂದರಲ್ಲಿ ಪತ್ತೆಯಾಗಿದೆ.
ಯುವತಿ ಸೋಮವಾರ ಕಾಣೆಯಾಗಿದ್ದಳು. ಯುವತಿಯ ಮನೆಯ ಮುಂದಿನ ಬಾವಿಯಲ್ಲೇ ಶವ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾದಾಪುರ ಗ್ರಾಮದ ಈಶ್ವರ ಶೇಟ್ ಎಂಬುವವರ ಪುತ್ರಿ ಪೂಜಾ (17) ಮೃತ ವಿದ್ಯಾರ್ಥಿನಿ. ಯುವತಿ ರಿಪ್ಪನ್ ಪೇಟೆ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವ್ಯಾಸಂಗ ಮಾಡುತ್ತಿದ್ದಳು. ಮನೆಯಿಂದ ಕಾಣೆಯಾಗಿರುವ ಬಗ್ಗೆ ಸೋಮವಾರ ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ ಮನೆ ಎದುರಿನ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಪೂಜಾಳನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವ ಬಗ್ಗೆ ಶಂಕೆ ಮೂಡಿದ್ದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.












Click it and Unblock the Notifications