ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ಭಾರತ್ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ; ಎಂದಿನಂತೆ ಜನ ಜೀವನ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 8: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ತಿದ್ದುಪಡಿ, ಭೂಸುಧಾರಣಾ ಕಾಯ್ದೆ ಹಾಗೂ ಕೃಷಿ ಮಸೂದೆಗಳನ್ನು ವಿರೋಧಿಸಿ ರೈತ ಸಂಘ ಮತ್ತು ವಿವಿಧ ರೈತಪರ ಸಂಘಟನೆಗಳು ಕರೆ ನೀಡಿದ ಭಾರತ್ ಬಂದ್‌ಗೆ ಶಿವಮೊಗ್ಗ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಿವಮೊಗ್ಗ ನಗರದ ಬಸ್ ನಿಲ್ದಾಣ, ಹೋಟೆಲ್, ವ್ಯಾಪಾರ, ದಿನನಿತ್ಯದ ಚಟುವಟಿಕೆಗಳು ಎಂದಿನಂತೆ ನಡೆಯುತ್ತಿದ್ದು, ರೈತ ಸಂಘಟನೆಗಳು ರಸ್ತೆ ತಡೆ ಮೂಲಕ‌ ಕೃಷಿ ಕಾಯ್ದೆಯನ್ನು ವಿರೋಧಿಸಿದರು.

ಮಳೆಯಲ್ಲೇ ಮಳೆಯಲ್ಲೇ "ಭಾರತ್ ಬಂದ್' ಬೆಂಬಲಿಸಿ ರೈತ ಸಂಘಟನೆಗಳಿಂದ ಪ್ರತಿಭಟನೆ

ರೈತರ ಜೀವನದಲ್ಲಿ ಈ ಕಾಯ್ದೆಗಳು ಮರಣ ಶಾನಸವಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಹೊಸ ಕೃಷಿ ಕಾಯ್ದೆಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸದರು.

Mixed Response To Bharat Bandh In Shivamogga

ಮುಖ್ಯಮಂತ್ರಿ ತವರು ಕ್ಷೇತ್ರ ಶಿಕಾರಿಪುರದಲ್ಲಿ ರಸ್ತೆ ತಡೆ ನಡೆಸುವ ಮೂಲಕ, ರೈತ ಸಂಘಟನೆಗಳು ಪ್ರತಿಭಟನೆಯನ್ನು ನಡೆಸಿದರು. ಬಿ.ಎಸ್ ಯಡಿಯೂರಪ್ಪ ಡೋಂಗಿ ರೈತ ನಾಯಕ ಎಂದು ಘೋಷಣೆ ಕೂಗಿದರು.

Mixed Response To Bharat Bandh In Shivamogga

ಇನ್ನು ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿಯೂ ಕೂಡ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿ, ತಹಶೀಲ್ದಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದರು‌.

English summary
Shivamogga city bus stop, hotel, business and day-to-day activities are being held as usual, and farmers' organizations have objected to the farming laws.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X