ಶಿವಮೊಗ್ಗ; ಮಂಗನ ಕಾಯಿಲೆ, ಜ್ವರಕ್ಕೆ ಚಿಕಿತ್ಸೆ ಪಡೆಯಲು ಮನವಿ
ಶಿವಮೊಗ್ಗ, ಫೆಬ್ರವರಿ 11: ಬೇಸಿಗೆ ಆರಂಭದ ಹಂತದಲ್ಲಿಯೇ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಪತ್ತೆಯಾಗಿದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಕೆಲವು ಪ್ರಕರಣ ದಾಖಲಾಗಿದೆ. ಈ ಕುರಿತು ಆರೋಗ್ಯ ಇಲಾಖೆ ಸಹ ಎಚ್ಚರಿಕೆ ವಹಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗನ ಕಾಯಿಲೆ (Kyasanur Forest Disease) ಕುರಿತಾದ ಸಭೆಯನ್ನು ನಡೆಸಿದರು.

"ಮಂಗನ ಕಾಯಿಲೆ ಬಾಧಿತ ಪ್ರದೇಶದ ಜನರು ಜ್ವರದಂತಹ ಪ್ರಕರಣಗಳನ್ನು ನಿರ್ಲಕ್ಷ್ಯ ಮಾಡದೇ, ಶೀಘ್ರವಾಗಿ ಚಿಕಿತ್ಸೆ ಪಡೆಯಬೇಕು. ಮಂಗನ ಕಾಯಿಲೆ ಬಗ್ಗೆ ಗಾಬರಿಯಾಗುವುದು ಬೇಡ. ಆದರೆ ಜ್ವರ, ತಲೆನೋವು, ಸ್ನಾಯುಗಳ ನೋವು ಇತ್ಯಾದಿ ಲಕ್ಷಣ ಕಾಣಿಸಿಕೊಂಡಾಗ ತಕ್ಷಣ ಸಮೀಪದ ಸರ್ಕಾರಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಆರಂಭದಲ್ಲೇ ರೋಗ ಲಕ್ಷಣಗಳಿಗೆ ಚಿಕಿತ್ಸೆ ಪಡೆದಲ್ಲಿ ಸಂಪೂರ್ಣ ಗುಣಮುಖರಾಗಲು ಸಾಧ್ಯ" ಎಂದು ಸಚಿವರು ತಿಳಿಸಿದರು.
ಗುಣಪಡಿಸಬಹುದು: ಡಿಹೆಚ್‍ಓ ಡಾ. ರಾಜೇಶ್ ಸುರಗಿಹಳ್ಳಿ ಮಾತನಾಡಿ, "ಮಂಗನ ಕಾಯಿಲೆ ವೈರಾಣು ಸೋಂಕಿನ ನಿಂಫ್ ಹಂತದಲ್ಲಿರುವ ಉಣ್ಣಿಗಳು ಕಚ್ಚುವುದರಿಂದ ಹರಡುತ್ತದೆ. ಮಂಗನ ಅಸ್ವಾಭಾವಿಕ ಸಾವು ಮಂಗನ ಕಾಯಿಲೆಯ ಕುರಿತಾದ ಎಚ್ಚರಿಕೆ ಗಂಟೆ. ನಂತರ ಮನುಷ್ಯರಿಗೆ ಬರುತ್ತದೆ. ಜ್ವರ, ತಲೆನೋವು ಇತರೆ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬರಬೇಕು. ಇದು ಮೊದಲನೇ ಹಂತ. ಈ ಹಂತದಲ್ಲಿ ಸೋಂಕನ್ನು ಗುಣಪಡಿಸಬಹುದು. ಎರಡನೇ ಹಂತದಲ್ಲಿ ಫಿಟ್ಸ್, ನರಸಂಬಂಧಿ ಸಮಸ್ಯೆ, ರಕ್ತಸ್ರಾವ ಉಂಟಾಗುತ್ತದೆ" ಎಂದರು.
"ಅರಣ್ಯ ಭಾಗದಲ್ಲಿ ಇರುವವರೆಲ್ಲ ಸರ್ಕಾರಿ ಆಸ್ಪತ್ರೆಗಳಿಂದ ನೀಡಲಾಗುವ ಡಿಇಪಿಎ ತೈಲವನ್ನು ಹಚ್ಚಿಕೊಳ್ಳಬೇಕು. 2022ರ ವರೆಗೆ ಕೆಎಫ್‍ಡಿ ನಿಯಂತ್ರಣ ಲಸಿಕೆ ಇತ್ತು. ಇದೀಗ ಹೊಸ ಲಸಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಶೀಘ್ರದಲ್ಲೇ ಲಭ್ಯವಾಗಲಿದೆ. ರಾಜ್ಯದಲ್ಲಿ 70 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲೆ 25 ಪಾಸಿಟಿವ್ ಪ್ರಕರಣಗಳಿವೆ. 1 ಸಾವು ಸಂಭವಿಸಿದೆ. ಕೆಎಫ್‍ಡಿ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲ ರೀತಿಯ ಕ್ರಮಗಳನ್ನು ಇತರೆ ಇಲಾಖೆಗಳ ಸಮನ್ವಯದೊಂದಿಗೆ ಕೈಗೊಳ್ಳಲಾಗುತ್ತಿದೆ" ಎಂದು ಹೇಳಿದರು.
ಸಭೆಯಲ್ಲಿ ಮಾತನಾಡಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, "ಕೆಎಫ್‍ಡಿಗೆ ಲಸಿಕೆ ಅತ್ಯಗತ್ಯವಾಗಿ ಬೇಕು. ಮುಂದೆ ಉಷ್ಣತೆ ಹೆಚ್ಚುತ್ತಿದ್ದಂತೆ ಸೋಂಕು ಹೆಚ್ಚುತ್ತದೆ. ಅದನ್ನು ಊಹಿಸಲೂ ಕಷ್ಟ. ಮಲೆನಾಡು ಭಾಗದಲ್ಲಿ ಕೆಎಫ್‍ಡಿ ಬಗ್ಗೆ ಕೋವಿಡ್‍ಗಿಂತ ಹೆಚ್ಚು ಭಯ ಇದೆ. ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಲಸಿಕೆ ನೀಡಬೇಕು" ಎಂದರು.
"ಸಕ್ರಿಯ ಸಮೀಕ್ಷೆ ನಡೆಯಬೇಕು. ದೂರದ ಮಲೆನಾಡಿನ ಹಳ್ಳಿಗಾಡಿನ ಬಗ್ಗೆ ಹೆಚ್ಚಿನ ಕಾಳಜಿ ತೋರಬೇಕು ಹಾಗೂ ಜಾನುವಾರುಗಳಿಗೆ ಲಸಿಕೆ ನೀಡಬೇಕು. ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಇನ್ನು 2-3 ತಿಂಗಳು ಕಾಲ ಅಂಬ್ಯುಲೆನ್ಸ್/ ಮೊಬೈಲ್ ವಾಹನ ಸೇವೆಯನ್ನು ಒದಗಿಸಿ, ಜ್ವರದಂತಹ ಪ್ರಕರಣಗಳನ್ನು ಶೀಘ್ರವಾಗಿ ಉಪಚರಿಸಲು ಅನುಕೂಲ ಮಾಡಿಕೊಡಬೇಕು" ಎಂದು ಒತ್ತಾಯಿಸಿದರು.
ಸಚಿವ ಮಧು ಬಂಗಾರಪ್ಪ, "1960 ರಿಂದ ಕೆಎಫ್‍ಡಿ ಮಲೆನಾಡಿನ ಸಾಗರ, ಹೊಸನಗರ ತೀರ್ಥಹಳ್ಳಿ ಹಾಗೂ ಘಟ್ಟದ ಭಾಗದಲ್ಲಿ ಇದೆ. ಯಾವುದೇ ಸಾವು ನೋವು ಸಂಭವಿಸಬಾರದು. ಆ ರೀತಿ ಕ್ರಮ ವಹಿಸಲು ಸೂಚಿಸಿದ್ದೇನೆ ಹಾಗೂ ಕೆಎಫ್‍ಡಿ ಶಾಶ್ವತ ಪರಿಹಾರ ಹಾಗೂ ಲಸಿಕೆ ಬಗ್ಗೆ ಚರ್ಚಿಸಲು ಏಪ್ರಿಲ್ 13 ಮತ್ತು 14 ರಂದು ಅಧಿಕಾರಿಗಳು, ತಜ್ಞರ ತಂಡ ಹಾಗೂ ಶಾಸಕರು, ಆರೋಗ್ಯ ಸಚಿವರೊಂದಿಗೆ ಎರಡು ಹಂತದ ಸಭೆಯನ್ನು ನಡೆಸಲಾಗುವುದು" ಎಂದರು.
"ಕಾಯಿಲೆ ಬಾಧಿತ ಪ್ರದೇಶಗಳಲ್ಲಿ ಆಶಾ ಕಾರ್ಯಕರ್ತೆಯರು ನಿಯಮಿತವಾಗಿ ಮನೆ ಮನೆ ಭೇಟಿ ನೀಡಿ ಜ್ವರ ಪ್ರಕರಣಗಳನ್ನು ಪತ್ತೆ ಹಚ್ಚುವ ಕೆಲಸ ಮಾಡಬೇಕು. ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ, ಬಸ್‍ನಿಲ್ದಾಣಗಳಲ್ಲಿ ಜನರಿಗೆ ಕಾಣುವಂತಹ ಕೆಎಫ್‍ಡಿ ಬಗ್ಗೆ ಅರಿವು ಮೂಡಿಸುವ ಪೋಸ್ಟರ್‌ಗಳನ್ನು ಅಂಟಿಸುವುದು, ಕರಪತ್ರಗಳನ್ನು ನೀಡುವ ಕೆಲಸ ಶೀಘ್ರದಲ್ಲೇ ಆಗಬೇಕು. ಈ ಪ್ರದೇಶದ ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕು" ಎಂದು ಸಚಿವರು ಸೂಚನೆ ನೀಡಿದರು.
ಸಹಾಯವಾಣಿಗೆ ಕರೆ ಮಾಡಿ; ಕೆಎಫ್‌ಡಿ ಬಾಧಿತ ಪ್ರದೇಶದಲ್ಲಿ ಜನರಿಗೆ ಜ್ವರ ಇತರೆ ಲಕ್ಷಣಗಳು ಕಂಡುಬಂದಲ್ಲಿ ಶೀಘ್ರವಾಗಿ ಆಸ್ಪತ್ರೆಗೆ ಹೋಗಬೇಕು ಹಾಗೂ ಹೆಚ್ಚಿನ ಸಹಾಯ ಅಗತ್ಯವಿದ್ದಲ್ಲಿ ಡಿಹೆಚ್‍ಓ ಸಹಾಯವಾಣಿ ಸಂಖ್ಯೆಗೆ 08182-222382 ಕರೆ ಮಾಡಿ ಅಂಬ್ಯುಲೆನ್ಸ್, ಚಿಕಿತ್ಸೆ ಸೇರಿದಂತೆ ಅಗತ್ಯ ಸೇವೆ ಪಡೆಯಬಹುದು.
ಇದುವರೆಗೆ ಕೆಎಫ್‍ಡಿಯಿಂದ ಮರಣ ಹೊಂದಿದವರಿಗೆ ಯಾವುದೇ ರೀತಿಯ ಸಹಾಯ/ ಪರಿಹಾರ ಇರುವುದಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಪರಿಹಾರ ನೀಡುವ ಕುರಿತು ಚರ್ಚಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, "ಕೇವಲ ಆರೋಗ್ಯ ಇಲಾಖೆ ಮಾತ್ರವಲ್ಲ, ಪಶುಪಾಲನಾ ಇಲಾಖೆ, ಅರಣ್ಯ, ಗ್ರಾಮೀಣಾಭಿವೃದ್ದಿ, ಕಂದಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿಕ್ಷಣ ಇಲಾಖೆಗಳು ಸಮನ್ವಯದೊಂದಿಗೆ ಕೆಎಫ್‍ಡಿ ನಿಯಂತ್ರಣದಲ್ಲಿ ಸಕ್ರಿಯವಾಗಿ ಕಾರ್ಯನಿರತರಾಗಬೇಕು" ಎಂದರು.
ಸಾಗರ, ಹೊಸನಗರ, ತೀರ್ಥಹಳ್ಳಿ ತಾಲ್ಲೂಕು ವೈದ್ಯಾಧಿಕಾರಿಗಳು ತಾಲ್ಲೂಕು ಆಸ್ಪತ್ರೆಗಳಲ್ಲಿ ಕೆಎಫ್‍ಡಿಗೆ ಚಿಕಿತ್ಸೆ ನೀಡಲು ಹಾಸಿಗೆಗಳನ್ನು ಮೀಸಲಿರಿಸಲಾಗಿದೆ. ಉನ್ನತ ರೆಫರಲ್ ಸೆಂಟರ್‌ಗೆ ಸಾಗಿಸಲು ಉಚಿತ ಅಂಬ್ಯುಲೆನ್ಸ್ ಸೌಲಭ್ಯ ಮತ್ತು ಔಷಧಿಗಳ ಲಭ್ಯತೆ ಇದೆ ಎಂದು ಸಭೆಗೆ ಮಾಹಿತಿ ನೀಡಿದರು.
-
ನಾವು ಸೇವಿಸುವ ಈ ಆಹಾರಗಳಲ್ಲಿ ಆಲ್ಕೋಹಾಲ್ ಇರುತ್ತದೆ.. ಇದು ನಿಮಗೆ ಗೊತ್ತಿರಲಿ -
Vastu Tips for Kitchen: ವಾಸ್ತು ಪ್ರಕಾರ ಅಡುಗೆ ಮನೆಯಲ್ಲಿ ಇವು ಇರಬಾರದು.. ಒಮ್ಮೆ ನೋಡಿ! -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications