ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ, ಸಾಗರದಲ್ಲಿ 200ಕ್ಕೂ ಹೆಚ್ಚು ಜನ ದಿಢೀರ್ ಅಸ್ವಸ್ಥ; ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ನವೆಂಬರ್ 13: ಶಿವಮೊಗ್ಗ ಜಿಲ್ಲೆಯ ಎರಡು ತಾಲೂಕಿನಲ್ಲಿ ನಡೆದ ಮದುವೆ, ನಾಮಕರಣ ಸೇರಿದಂತೆ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸುಮಾರು 200 ಜನರು ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಾಗರ ತಾಲೂಕು ಜೋಗ, ಕಾರ್ಗಲ್, ಲಿಂಗನಮಕ್ಕಿ ಸುತ್ತಮುತ್ತ 150ಕ್ಕೂ ಹೆಚ್ಚು ಮಂದಿ ದಿಢೀರ್ ಅಸ್ವಸ್ಥಗೊಂಡಿದ್ದಾರೆ. ಎಲ್ಲರಲ್ಲೂ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ವಿವಿಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜನರು ದಿಢೀರ್ ಅಸ್ವಸ್ಥಗೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ. ಆಹಾರ ಅಥವಾ ನೀರಿನಲ್ಲಿ ಸಮಸ್ಯೆ ಉಂಟಾಗಿ ಈ ರೀತಿಯಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ.

ಶುಕ್ರವಾರ ಬೆಳಗ್ಗೆಯಿಂದಲೇ ಜನರು ದಿಢೀರ್ ಅಸ್ವಸ್ಥಗೊಂಡ ಕಾರ್ಗಲ್ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚುವರಿ ಚಿಕಿತ್ಸೆ ಅಗತ್ಯ ಇದ್ದವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಸಾಗರ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್. ಮೋಹನ್ ಅವರು ಹೆಚ್ಚುವರಿ ವೈದ್ಯರು ಮತ್ತು ಅಗತ್ಯ ಔಷಧವನ್ನು ಕಾರ್ಗಲ್ ಆಸ್ಪತ್ರೆಗೆ ಒದಗಿಸಿದ್ದಾರೆ.

 ಘಟನೆಗೆ ಕಾರಣವೇನು?

ಘಟನೆಗೆ ಕಾರಣವೇನು?

ಜಿಲ್ಲೆಯ ಜೋಗ, ಕಾರ್ಗಲ್‌ನಲ್ಲಿ ಎರಡು ದಿನದ ಹಿಂದೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಹಲವರು ಅಸ್ವಸ್ಥಗೊಂಡಿದ್ದಾರೆ. ಇನ್ನು ಡಾಬಾ ಒಂದರಲ್ಲಿ ಊಟ ಮಾಡಿದ 12 ಮಂದಿಯಲ್ಲೂ ವಾಂತಿ, ಭೇದಿ, ಹೊಟ್ಟೆನೋವು ಕಾಣಿಸಿಕೊಂಡಿದೆ. ಹಾಗಾಗಿ ಆಹಾರದಲ್ಲಿ ವ್ಯತ್ಯಾಸವಾಗಿರಬೇಕು ಅಥವಾ ನೀರಿನಲ್ಲಿ ಸಮಸ್ಯೆಯಾಗಿರುವ ಸಾಧ್ಯತೆ ಬಗ್ಗೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನು ಮಾಧ್ಯಮಗಳ ಜೊತೆ ಮಾತನಾಡಿದ ಸಾಗರ ತಾಲೂಕು ಆರೋಗ್ಯಾಧಿಕಾರಿ ಡಾ. ಕೆ.ಎಸ್.ಮೋಹನ್, ಅಗತ್ಯ ಚಿಕಿತ್ಸೆ ಒದಗಿಸಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಕಾರ್ಗಲ್ ಮತ್ತು ಸಾಗರ ಆಸ್ಪತ್ರೆಗಳಲ್ಲಿ ವೈದ್ಯರ ತಂಡವನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

 15 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ

15 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ

ಕಾರ್ಗಲ್ ಆಸ್ಪತ್ರೆಯಲ್ಲಿ ಬಂದು ಹಲವರು ಚಿಕಿತ್ಸೆ ಪಡೆದಿದ್ದಾರೆ. 15 ಜನರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರು ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ. ಸಮೀಪದ ಖಾಸಗಿ ಆಸ್ಪತ್ರೆಯಲ್ಲಿಯೂ 50ಕ್ಕೂ ಹೆಚ್ಚು ಮಂದಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಕಾರ್ಗಲ್ ಆಸ್ಪತ್ರೆಗೆ ಇಬ್ಬರು ಹೆಚ್ಚುವರಿ ವೈದ್ಯರನ್ನು ನಿಯೋಜಿಸಲಾಗಿದೆ. ನರ್ಸಿಂಗ್ ಸಿಬ್ಬಂದಿ, ಹೆಚ್ಚುವರಿ ಇಂಜೆಕ್ಷನ್, ಔಷಧವನ್ನು ಒದಗಿಸಲಾಗಿದೆ. ತುರ್ತು ಸಂದರ್ಭ ರೋಗಿಗಳನ್ನು ಸಾಗರ ಆಸ್ಪತ್ರೆಗೆ ಕರೆದೊಯ್ಯಲು ಎರಡು ಆ್ಯಂಬುಲೆನ್ಸ್‌ಗಳನ್ನು ನಿಯೋಜಿಸಲಾಗಿದೆ. ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿಡಲಾಗಿದೆ. ಇಲ್ಲಿಯೂ ಕೆಲವರು ಚಿಕಿತ್ಸೆ ಪಡೆಯುತ್ತಿದ್ದಾರೆ.

 ನೀರು, ಆಹಾರದ ಸ್ಯಾಂಪಲ್ ಸಂಗ್ರಹ

ನೀರು, ಆಹಾರದ ಸ್ಯಾಂಪಲ್ ಸಂಗ್ರಹ

ವಿಚಾರ ತಿಳಿಯುತ್ತಿದ್ದಂತೆ ಅಧಿಕಾರಿಗಳು ಜೋಗ, ಕಾರ್ಗಲ್‌ನಲ್ಲಿ ನಡೆದ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಆಹಾರದ ಸ್ಯಾಂಪಲ್ ಸಂಗ್ರಹಿಸಿದ್ದಾರೆ. ನೀರು ಪೂರೈಕೆ ಕೇಂದ್ರಕ್ಕೂ ಭೇಟಿ ನೀಡಿ ಸ್ಯಾಂಪಲ್‌ಗಾಗಿ ನೀರು ಸಂಗ್ರಹಿಸಲಾಗಿದೆ ಎಂದು ಟಿಎಚ್ಒ ಡಾ. ಕೆ.ಎಸ್.ಮೋಹನ್ ತಿಳಿಸಿದ್ದಾರೆ.

ಇತ್ತ ಶಿವಮೊಗ್ಗದ ತಾಲೂಕಿನ ಹೊಳೆಹೊನ್ನೂರು ಸಮೀಪದ ಆಲದಹಳ್ಳಿಯಲ್ಲಿ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಊಟ ಮಾಡಿದ ಹಲವರು ಅಸ್ವಸ್ಥರಾಗಿದ್ದಾರೆ. ವಾಂತಿ, ಭೇದಿ, ಹೊಟ್ಟೆನೋವು ಕಾಣಿಕೊಂಡು ಹೊಳಲೂರು, ಹೊಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮದುವೆ ಸಮಾರಂಭದಲ್ಲಿ ರಾತ್ರಿ ಊಟ ಮಾಡಿದ್ದ ಸುಮಾರು 50 ಜನರಲ್ಲಿ ಇವತ್ತು ವಾಂತಿ, ಭೇದಿ ಕಾಣಿಸಿಕೊಂಡಿದೆ. ಹೊಳಲೂರಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. 26 ಮಂದಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯದಲ್ಲೂ ಚೇತರಿಕೆ ಕಂಡಿದೆ.

 500 ಮಂದಿ ಊಟ ಮಾಡಿರುವ ಅಂದಾಜು

500 ಮಂದಿ ಊಟ ಮಾಡಿರುವ ಅಂದಾಜು

ಮೆಗ್ಗಾನ್ ಆಸ್ಪತ್ರೆಗೆ ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಭೇಟಿ ನೀಡಿ, ರೋಗಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ಉತ್ತಮ ರೀತಿಯ ಚಿಕಿತ್ಸೆ ನಡೆಯುತ್ತಿದೆ ಎಂದು ತಿಳಿಸಿದರು.

ಮದುವೆ ಸಮಾರಂಭದಲ್ಲಿ ಸುಮಾರು 500 ಮಂದಿ ಊಟ ಮಾಡಿರುವ ಅಂದಾಜಿದೆ. ಮತ್ತಷ್ಟು ಮಂದಿಯ ಸ್ಕ್ರೀನಿಂಗ್ ಪ್ರಕ್ರಿಯೆ ಆರಂಭವಾಗಿದೆ. ಅಗತ್ಯ ಇದ್ದವರಿಗೆ ತುರ್ತಾಗಿ ಚಿಕಿತ್ಸೆ ಒದಗಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. ಸಮುದಾಯ ಆರೋಗ್ಯ ಕೇಂದ್ರದ ಬಳಿ ಹೆಚ್ಚುವರಿ ಆಂಬುಲೆನ್ಸ್ ನಿಯೋಜಿಸಲಾಗಿದೆ. ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲು ವ್ಯವಸ್ಥೆ ಮಾಡಲಾಗಿದೆ.

ಮದುವೆ ಸಮಾರಂಭದಲ್ಲಿ ಬಳಕೆಯಾದ ಆಹಾರ ಮತ್ತು ಜನರಿಗೆ ಒದಗಿಸಲಾಗಿದ್ದ ನೀರಿನ ಸ್ಯಾಂಪಲ್ ಪರೀಕ್ಷೆಗೆ ಒಳಪಡಿಸಾಗಿದೆ. ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

English summary
Shivamogga: More Than 200 People Admitted to Hospital due to Stomach Pain After Having Food at Marriage, Naming Ceremoney and Other Functions at Sagar Taluk.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X