ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗಕ್ಕೆ ಆಗಮಿಸಿದ 289 ಜನರಿಗೆ ಕ್ವಾರಂಟೈನ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 10: ಕಳೆದ ಒಂದು ವಾರದ ಅವಧಿಯಲ್ಲಿ ಶಿವಮೊಗ್ಗ ಜಿಲ್ಲೆಗೆ ಹೊರ ರಾಜ್ಯಗಳಿಂದ ಆಗಮಿಸಿರುವ 289 ಜನರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ತಿಳಿಸಿದ್ದಾರೆ.

ಕಳೆದ ಎರಡು ದಿನಗಳಲ್ಲಿ ವಿವಿಧ 7 ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತ್ 9 ಜನರಿದ್ದಾರೆ.

ಸಿಎಂ ತವರು ಕ್ಷೇತ್ರದಿಂದ ಜಮಾತ್ ‌ಗೆ ಹೋಗಿದ್ರಾ 16 ಮಂದಿ?ಸಿಎಂ ತವರು ಕ್ಷೇತ್ರದಿಂದ ಜಮಾತ್ ‌ಗೆ ಹೋಗಿದ್ರಾ 16 ಮಂದಿ?

ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಹೆಚ್ಚಿನ ಕೊರೊನಾ ಪ್ರಕರಣಗಳು ಕಂಡು ಬಂದಿರುವ ಹೈ ರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತಿದೆ.

More Than Two Hundred People Came to Shivamogga From Other States

ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರೆಂಟೈನ್ ಗೆ ಕಳುಹಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಹೊರ ರಾಜ್ಯಗಳಿಂದ ಆಗಮಿಸಿರುವವರನ್ನು ಸೂಕ್ತ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಮುಂದಿನ ದಿನಗಳಲ್ಲಿ ಅವರ ಆರೋಗ್ಯ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ.

ಬೇರೆ ರಾಜ್ಯಗಳಿಂದ ಆಗಮಿಸಿರುವವರ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಗೊಂದಲವನ್ನು ಹುಟ್ಟಿಸುವಂತಹ, ಸಮಾಜದಲ್ಲಿ ಒಡಕನ್ನು ಉಂಟು ಮಾಡುವಂತಹ, ವದಂತಿಗಳನ್ನು ಹರಡುವ ಸಂದೇಶಗಳನ್ನು ಹಾಕುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲೆ ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

English summary
The quarantine was carried out after a health check of 289 people who had arrived from other states in Shivamogga district within a week, DC KB Shivakumar said that.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X