ಶಿವಮೊಗ್ಗ ಮೆಡಿಕಲ್ ಕಾಲೇಜಿನ ಸೌಲಭ್ಯಕ್ಕೆ ಕ್ರಮ: ಸಂಸದ

ಶಿವಮೊಗ್ಗ, ಏಪ್ರಿಲ್ 20: ಶಿವಮೊಗ್ಗ ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ ಹುದ್ದೆಗಳನ್ನು ತುಂಬುವುದು ಸೇರಿದಂತೆ ಕಾಲೇಜಿನಲ್ಲಿ ಸೌಲಭ್ಯಗಳನ್ನು ಉತ್ತಮಪಡಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರ ಎಂದು ತಿಳಿಸಿದರು.

ಸೋಮವಾರ ಮೆಡಿಕಲ್ ಕಾಲೇಜಿನಲ್ಲಿ ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಮೆಡಿಕಲ್ ಕಾಲೇಜಿನಲ್ಲಿ ಖಾಲಿಯಿರುವ 133 "ಸಿ' ದರ್ಜೆ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು.

ರೋಸ್ಟರ್ ನಿಯಮಾವಳಿಯನ್ನು ನೇಮಕಾತಿಯಲ್ಲಿ ಪಾಲಿಸಬೇಕು, ಉಳಿದ ಖಾಯಂ ಹುದ್ದೆಗಳ ನೇಮಕಾತಿಗಾಗಿ ಆದಷ್ಟು ಬೇಗ ಇಲಾಖೆಯ ನೇಮಕಾತಿ ಮತ್ತು ವೃಂದ ನಿಯಮಾವಳಿಯನ್ನು ರಚಿಸುವಂತೆ ಅವರು ಸಭೆಯಲ್ಲಿ ಉಪಸ್ಥಿತರಿದ್ದ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಪಿ.ಜಿ.ಗಿರೀಶ್ ಅವರಿಗೆ ಸೂಚನೆ ನೀಡಿದರು.

MP BY Raghavendra Attended Meeting In Shivamogga Medical College

ರೇಡಿಯೋಲಜಿ ವಿಭಾಗದ ಎಲ್ಲಾ ಉಪಕರಣಗಳು ಶಿಮ್ಸ್ ನಲ್ಲಿ ಲಭ್ಯವಿದ್ದು, ತಜ್ಞ ವೈದ್ಯರ ನೇಮಕಾತಿ ಆಗಬೇಕಿದೆ. ಅಲ್ಲಿವರೆಗೆ ಲಭ್ಯವಿರುವ ಬಳಕೆದಾರರ ನಿಧಿಯನ್ನು ಉಪಯೋಗಿಸಿಕೊಂಡು ತಜ್ಞ ವೈದ್ಯರ ಸೇವೆಯನ್ನು ಪಡೆಯಲು ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಬೇಕು. ಬಳಕೆದಾರರ ನಿಧಿ ಸಂಗ್ರಹವನ್ನು ಹೆಚ್ಚಿಸಲು ಕ್ರಮ ಕೈಗೊಂಡು, ಅದರ ಮೂಲಕ ಇನ್ನಷ್ಟು ಸೌಲಭ್ಯಗಳನ್ನು ಕಲ್ಪಿಸಲು ಪ್ರಯತ್ನಿಸಬೇಕು ಎಂದರು.

ತಾಯಂದಿರ ಮತ್ತು ಮಕ್ಕಳ ಪ್ರತ್ಯೇಕ ವಿಭಾಗವನ್ನು ಆರಂಭಿಸಲು 8 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇತ್ತೀಚೆಗೆ ಬೆಂಕಿ ಅವಡಘ ಸಂಭವಿಸಿರುವ ಮಕ್ಕಳ ವಿಭಾಗದ ದುರಸ್ತಿ ಕಾರ್ಯವನ್ನು ಎರಡು ದಿನಗಳ ಒಳಗಾಗಿ ಪೂರ್ಣಗೊಳಿಸಿ, ಸೇವೆ ಆರಂಭಿಸಲು ಪ್ರಾರಂಭಿಸಬೇಕು. ಕ್ಯಾಥ್ ಲ್ಯಾಬ್ ಆರಂಭಿಸಲು ಈಗಾಗಲೇ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸಂಸದರು ಸೂಚಿಸಿದರು.

MP BY Raghavendra Attended Meeting In Shivamogga Medical College

ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳ ಮಾಹಿತಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಬಯೋಮೆಟ್ರಿಕ್ ವ್ಯವಸ್ಥೆಯನ್ನು ಮೆಡಿಕಲ್ ಕಾಲೇಜು ಸಹ ಅಳವಡಿಸಬೇಕು ಎಂದು ಸಭೆಯಲ್ಲಿ ಸೂಚನೆ ನೀಡಲಾಯಿತು.

ಶಾಸಕರಾದ ಅರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಆಯನೂರು ಮಂಜುನಾಥ, ಪ್ರಸನ್ನ ಕುಮಾರ್, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಶಿಮ್ಸ್ ನಿರ್ದೇಶಕ ಡಾ.ಗುರುಪಾದಪ್ಪ, ಶಿಮ್ಸ್ ಆಡಳಿತ ಮಂಡಳಿ ಸದಸ್ಯರಾದ ಕೆ.ದಿವಾಕರ ಶೆಟ್ಟಿ, ಡಾ.ಗೌತಮ್, ಡಾ.ವಾಣಿ ಕೋರಿ ಸೇರಿದಂತೆ ಹಿರಿಯ ವೈದ್ಯಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+