• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವಮೊಗ್ಗ: ಸುರಿಯುವ ಮಳೆಯಲ್ಲೂ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಸಂಸದ ರಾಘವೇಂದ್ರ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 06: ಶಿವಮೊಗ್ಗ ಜಿಲ್ಲೆಯಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಜಿಲ್ಲಾಧಿಕಾರಿಗಳು ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾರೆ.

ಭಾರೀ ಮಳೆಯ ನಡುವೆಯೂ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ಅವರು ಅಧಿಕಾರಿಗಳೊಂದಿಗೆ ಶಿವಮೊಗ್ಗದ ಸೋಗಾನೆಯ ವಿಮಾನ ನಿಲ್ದಾಣದ ಕಾಮಗಾರಿಯ ಪ್ರಗತಿ ಪರಿವೀಕ್ಷಣೆ ಮಾಡಿದರು.

ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಬಾಗಿನ ಅರ್ಪಣೆಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಸಚಿವ ಕೆ.ಎಸ್ ಈಶ್ವರಪ್ಪ ಬಾಗಿನ ಅರ್ಪಣೆ

ಶಿವಮೊಗ್ಗ ಜಿಲ್ಲೆಯ ಮಹತ್ವಾಕಾಂಕ್ಷೆಯ ಯೋಜನೆಯಾಗಿರುವ ವಿಮಾನ ನಿಲ್ದಾಣ ಕಾಮಗಾರಿ ಈಗಾಗಲೇ ಬರದಿಂದ ಸಾಗುತ್ತಿದ್ದು, ರನ್ ವೇ ನಿರ್ಮಾಣ ಕೆಲಸ ನಡೆಯುತ್ತಿದೆ.

ಈ ಸಂದರ್ಭದಲ್ಲಿ ಜ್ಯೋತಿಪ್ರಕಾಶ್, ಪಿ.ಡಬ್ಲ್ಯೂ.ಡಿ ಮುಖ್ಯ ಎಂಜಿನಿಯರ್ ಕಾಂತರಾಜ್, ಕಾರ್ಯಪಾಲಕ ಇಂಜಿನಿಯರ್ ಸಂಪತ್, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಇದ್ದರು.

English summary
Shivamogga MP BY Raghavendra has Inspected Shivamogga Airport work Progress in the midst of the rain.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X