ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಸಂಘಟನೆ ಕೈವಾಡ; ಈಶ್ವರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 04; ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡ ಇರುವ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದರು.

ಬುಧವಾರ ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು, "ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಅತಿ ಹೆಚ್ಚು ಮುಸ್ಲಿಂ ಸಮುದಾಯದವರಿದ್ದಾರೆ. ಹಾಗಾಗಿ ಇದರ ಹಿಂದೆ ಯಾವುದೋ ಮುಸ್ಲಿಂ ಸಂಘಟನೆ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಈ ಕೃತ್ಯದಲ್ಲಿ ಯಾರಿದ್ದಾರೆ? ಅನ್ನುವುದು ತನಿಖೆಯಿಂದ ತಿಳಿಬೇಕಿದೆ" ಎಂದು ಹೇಳಿದರು.

"ಬೆಡ್ ಬ್ಲಾಕಿಂಗ್ ಮಾಡುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಸಂಸದ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿಯವರು ಇದನ್ನು ಬಯಲಿಗೆಳೆದಿದ್ದಾರೆ. ಇದರ ಹಿಂದೆ ಇರುವ ವ್ಯಕ್ತಿಗಳು ಅಥವಾ ಸಂಘಟನೆಯನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲಾಗುತ್ತದೆ" ಎಂದು ಈಶ್ವರಪ್ಪ ತಿಳಿಸಿದರು.

ಬೆಡ್ ಬ್ಲಾಕಿಂಗ್; ತೇಜಸ್ವಿಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆಗಳು! ಬೆಡ್ ಬ್ಲಾಕಿಂಗ್; ತೇಜಸ್ವಿಸೂರ್ಯಗೆ ಸಿದ್ದರಾಮಯ್ಯ ಪ್ರಶ್ನೆಗಳು!

Muslim Organisation Behind Bed Blocking Racket KS Eashwarappa

ಸ್ಯಾನಿಟೈಸ್ ಮಾಡಿದ ಸಚಿವರು; ಸೇವಾ ಭಾರತಿ ಮತ್ತು ಕೋವಿಡ್ ಸುರಕ್ಷಾ ಪಡೆ ವತಿಯಿಂದ ಶಿವಮೊಗ್ಗ ನಗರದಾದ್ಯಂತ ಸ್ಯಾನಿಟೈಸ್ ಮಾಡಲಾಗುತ್ತಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಸಚಿವ ಕೆ. ಎಸ್. ಈಶ್ವರಪ್ಪ ಅವರು ಸ್ಯಾನಿಟೈಸ್ ಮಾಡುವ ಮೂಲಕ ಈ ಕಾರ್ಯಕ್ಕೆ ಚಾಲನೆ ನೀಡರು.

ಸಂಸದ ತೇಜಸ್ವಿ ಸೂರ್ಯ ಈ ಪ್ರಶ್ನೆಗಳನ್ನು ನೀವು ಕೇಳಬೇಕಿತ್ತು!ಸಂಸದ ತೇಜಸ್ವಿ ಸೂರ್ಯ ಈ ಪ್ರಶ್ನೆಗಳನ್ನು ನೀವು ಕೇಳಬೇಕಿತ್ತು!

ಶಿವಮೊಗ್ಗ ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್, ಪಕ್ಷದ ಪ್ರಮುಖರಾದ ಕೆ. ಇ. ಕಾಂತೇಶ್ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

English summary
Muslim organisation behind bed blocking racket at the BBMP war room alleged rural development and panchayat raj minister K. S. Eshwarappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X