ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ನಾಗಾಸಾಧುಗಳ ಭೇಟಿ
Recommended Video

ಶಿವಮೊಗ್ಗ, ಸೆಪ್ಟೆಂಬರ್ 23 : ಮಾಜಿ ಉಪಮುಖ್ಯಮಂತ್ರಿ, ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ಅವರಿಗೆ ನಾಗಾಸಾಧುಗಳು ಆಶೀರ್ವಾದ ಮಾಡಿದರು. ಕರ್ನಾಟಕದ ವಿವಿಧ ರಾಜಕಾರಣಿಗಳ ನಿವಾಸಗಳಿಗೆ ನಾಗಾಸಾಧುಗಳು ಈಗಾಗಲೇ ಭೇಟಿ ನೀಡಿದ್ದಾರೆ.
ಭಾನುವಾರ ಶಿವಮೊಗ್ಗದಲ್ಲಿರುವ ಕೆ.ಎಸ್.ಈಶ್ವರಪ್ಪ ಅವರ 'ಜಯಲಕ್ಷ್ಮೀ' ನಿವಾಸಕ್ಕೆ ಭೇಟಿ ನೀಡಿದ ನಾಗಾಸಾಧುಗಳು ಕೆ.ಎಸ್.ಈಶ್ವರಪ್ಪ ಮತ್ತು ಅವರ ಪುತ್ರ ಕಾಂತೇಶ್ ಅವರಿಗೆ ಆಶೀರ್ವಾದ ಮಾಡಿದರು. ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈಶ್ವರಪ್ಪ ಈ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.
2018ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿಯೂ ನಾಗಾಸಾಧುಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಆಗ ಕೆ.ಎಸ್.ಈಶ್ವರಪ್ಪ ವಿರುದ್ಧ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಕೆ.ಬಿ.ಪ್ರಸನ್ನ ಕುಮಾರ್ ಅವರಿಗೆ ಆಶೀರ್ವಾದ ಮಾಡಿದ್ದರು.
ಬಿ.ಎಸ್.ಯಡಿಯೂರಪ್ಪ, ವರ್ತೂರು ಪ್ರಕಾಶ್, ಸಿ.ಟಿ.ರವಿ, ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ನಿವಾಸಕ್ಕೂ ನಾಗಾಸಾಧುಗಳು ಚುನಾವಣೆ ಸಮಯದಲ್ಲಿ ಭೇಟಿ ನೀಡಿದ್ದರು. ಭಾನುವಾರ ದಿಢೀರ್ ಆಗಿ ಈಶ್ವರಪ್ಪ ನಿವಾಸಕ್ಕೆ ಆಗಮಿಸಿದ್ದು ಏಕೆ? ಎಂಬುದು ಇನ್ನೂ ಕುತೂಹಲಕ್ಕೆ ಕಾರಣವಾಗಿದೆ...

ನಾಗಾಸಾಧುಗಳ ಭೇಟಿ
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನಿವಾಸಕ್ಕೆ ನಾಗಾಸಾಧುಗಳು ಭಾನುವಾರ ಭೇಟಿ ನೀಡಿದ್ದರು. ಕೆ.ಎಸ್.ಈಶ್ವರಪ್ಪ, ಈಶ್ವರಪ್ಪ ಪುತ್ರ ಕಾಂತೇಶ್ ಅವರಿಗೆ ನಾಗಾಸಾಧುಗಳು ಆಶೀರ್ವಾದ ಮಾಡಿದ್ದಾರೆ.

ಶಿವಮೊಗ್ಗ ಶಾಸಕ
ವಿಧಾನ ಪರಿಷತ್ ಸದಸ್ಯರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು 2018ರ ವಿಧಾನಸಭೆ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಜಯಗಳಿಸಿದ್ದಾರೆ.
ಈಶ್ವರಪ್ಪ ಪುತ್ರ ಕೆ.ಇ.ಕಾಂತೇಶ್ ಅವರು ಹೊಳಲೂರು ಕ್ಷೇತ್ರದಿಂದ ಶಿವಮೊಗ್ಗ ಜಿಲ್ಲಾ ಪಂಚಾಯಿತಿಗೆ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಯಡಿಯೂರಪ್ಪ ಮನೆಗೆ ಭೇಟಿ ಕೊಟ್ಟಿದ್ದರು
2017ರ ಅಕ್ಟೋಬರ್ ತಿಂಗಳಿನಲ್ಲಿ 10ಕ್ಕೂ ಹೆಚ್ಚು ನಾಗಾಸಾಧುಗಳು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸಕ್ಕೆ ಭೇಟಿ ನೀಡಿದ್ದರು. ಸುಮಾರು 30 ನಿಮಿಷಗಳ ಕಾಲ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದರು.

ಯಾರ-ಯಾರ ಮನಗೆ ಭೇಟಿ
ನಾಗಾಸಾಧುಗಳು ಮಾಜಿ ಸಚಿವ ಸಿ.ಟಿ.ರವಿ, ವರ್ತೂರು ಪ್ರಕಾಶ್, ಸಿದ್ದರಾಮಯ್ಯ ಅಭಿಮಾನಿ ಕಂಸಾಳೆ ರವಿ, ದಾವಣಗೆರೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಅವರ ಮನೆಗೆ ಭೇಟಿ ನೀಡಿದ್ದರು.












Click it and Unblock the Notifications