KS Eshwarappa: ಚುನಾವಣಾ ಆಯೋಗದ ಮೆಟ್ಟಿಲೇರಿದ ಈಶ್ವರಪ್ಪ-ಮೋದಿ ಫೋಟೋ ವಿವಾದ!

ಶಿವಮೊಗ್ಗ, ಏಪ್ರಿಲ್. 11: ಮಗನಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿಲ್ಲ ಎಂದು ಪಕ್ಷದ ವಿರುದ್ಧವೇ ಬಂಡಾಯ ಎದ್ದಿರುವ ಹಿರಿಯ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಮತ್ತು ಬಿಜೆಪಿ ನಡುವಿನ ಜಗಳ ನಿಲ್ಲುವಂತೆ ಕಾಣಿಸುತ್ತಿಲ್ಲ. ಇಷ್ಟು ದಿನ ನಾಯಕರು ಈಶ್ವರಪ್ಪ ಅವರನ್ನು ಸಮಾಧಾನ ಮಾಡಲು ಪ್ರಯತ್ನಿಸಿದ್ದರು. ಈ ಚುನಾವಣಾ ಆಯೋಗದ ಮೊರೆ ಹೋಗಿದ್ದಾರೆ.

ಹೌದು... ಬಿಜೆಪಿ ಪಕ್ಷದ ಬಂಡಾಯ ನಾಯಕ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಬಳಸದಂತೆ ಬಿಜೆಪಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದೆ. ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಬಳಿಕ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

Narendra Modi Photo Row BJP Petitions EC against Rebel KS Eshwarappa

ರಾಜ್ಯ ಬಿಜೆಪಿಯಲ್ಲಿನ ಕುಟುಂಬ ರಾಜಕಾರಣದ ವಿರುದ್ಧ ಹೋರಾಡುತ್ತೇನೆ ಎಂದಿರುವ ಅವರು, ಸವಾಲು ಹಾಕಿರುವುದು ಮಾತ್ರ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ. ಹೀಗಾಗಿಯೇ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಕಣಕ್ಕಿಳಿದಿದ್ದಾರೆ.

ಚುನಾವಣಾ ಆಯೋಗಕ್ಕೆ ಬಿಜೆಪಿ ಸಲ್ಲಿಸಿರುವ ತನ್ನ ದೂರಿನಲ್ಲಿ, "ನಮಗೆ ಆಘಾತ ಮತ್ತು ಆಶ್ಚರ್ಯಕರವಾಗಿ, ಶಿವಮೊಗ್ಗದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಅವರು ನರೇಂದ್ರ ಮೋದಿ ಮತ್ತು ಬಿಜೆಪಿ ನಾಯಕರ ಪರವಾಗಿ ಸ್ಪರ್ಧಿಸುವುದಾಗಿ ಸಾರ್ವಜನಿಕರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಅವರು ತಾವು ಬಿಜೆಪಿಯ ಭಾಗವೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ಇದು ತಪ್ಪು" ಎಂದಿದೆ.

"ಈಶ್ವರಪ್ಪ ತಮ್ಮ ಪ್ರಚಾರದಲ್ಲಿ ಪ್ರಧಾನಿ ಫೋಟೋ ಬಳಸುತ್ತಿದ್ದಾರೆ. ಕಳೆದ ವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಈಶ್ವರಪ್ಪ ಅವರಿಗೆ ಕರೆ ಮಾಡಿ ಈ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು. ಆದರೆ ಅವರು ಶಿವಮೊಗ್ಗದಿಂದ ಸ್ಪರ್ಧಿಸುವ ನಿರ್ಧಾರದಲ್ಲಿ ದೃಢವಾಗಿ ನಿಂತಿದ್ದಾರೆ" ಎಂದು ಹೇಳಿದ್ದಾರೆ.

ಏಪ್ರಿಲ್ 6 ರಂದು, ಪ್ರಧಾನಿ ಮೋದಿ ಅವರ ಚಿತ್ರವನ್ನು ಪ್ರಚಾರಕ್ಕಾಗಿ ಬಳಸಿದ್ದಕ್ಕಾಗಿ ಬಿಜೆಪಿ ತನ್ನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾದರೆ ಎಂದು ಯೋಚಿಸಿ ಮುಂಜಾಗ್ರತಾ ಕ್ರಮವಾಗಿ ಕೆ ಎಸ್ ಈಶ್ವರಪ್ಪ ಕರ್ನಾಟಕ ಹೈಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ್ದಾರೆ. ಈ ಬಗ್ಗೆಯೂ ಬಿಜೆಪಿ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಯಡಿಯೂರಪ್ಪ ಮತ್ತು ಅವರ ಪುತ್ರ ಬಿವೈ ರಾಘವೇಂದ್ರ 2009 ರಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಬಿವೈ ರಾಘವೇಂದ್ರ ಹೊರತುಪಡಿಸಿ ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದಿಂದ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜಕುಮಾರ್ ಕಣಕ್ಕೆ ಇಳಿದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+