PM Modi Shivamogga Visit : ಸೋಮವಾರ ಶಿವಮೊಗ್ಗಕ್ಕೆ ಮೋದಿ ಭೇಟಿ, ಕಾರ್ಯಕ್ರಮ ಪಟ್ಟಿ

ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದಾರೆ. ಅವರು ಶಿವಮೊಗ್ಗದಲ್ಲಿ ಉದ್ಘಾಟನೆ ಮಾಡುವ ಕಾರ್ಯಕ್ರಮಗಳ ವಿವರ ಹೀಗಿದೆ.

ಶಿವಮೊಗ್ಗ, ಫೆಬ್ರವರಿ 26; ಭಾರತದ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27ರ ಸೋಮವಾರ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಶಿವಮೊಗ್ಗ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಅವರು ಭೇಟಿ ನೀಡಿ, ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆ ಚುನಾವಣೆ ಎದುರಿರುವ ಕರ್ನಾಟಕ ರಾಜ್ಯಕ್ಕೆ ಫೆಬ್ರವರಿ ತಿಂಗಳಿನಲ್ಲಿ 3ನೇ ಬಾರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಭೇಟಿ ಕುರಿತು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ಮಾಹಿತಿ ನೀಡಿದ್ದಾರೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 27ರಂದು ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದು, ಕಾರ್ಯಕ್ರಮಕ್ಕೆ ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Narendra Modi Shivamogga Visit On February 27th, Timings, Full Schedule Of Events

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ ಮತ್ತು ಇತರೆ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನದ ಬಳಿಕ ಬೆಳಗಾವಿಗೆ ತೆರಳಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದ ಆವರಣದಲ್ಲಿ ಮಾತ್ರ ನರೇಂದ್ರ ಮೋದಿ ಕಾರ್ಯಕ್ರಮ ನಡೆಯಲಿದೆ. ಶಿವಮೊಗ್ಗ ನಗರದ ಬೇರೆ ಯಾವ ಪ್ರದೇಶಗಳಲ್ಲಿಯೂ ಕಾರ್ಯಕ್ರಮಗಳಿಲ್ಲ.

ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ಕಾರ್ಯಕ್ರಮಕ್ಕೆ ಜಿಲ್ಲಾಡಳಿ ಜನರನ್ನು ಸ್ವಾಗತಿಸಿದೆ. 1 ಲಕ್ಷ ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. 2 ಕಡೆ ಊಟದ ವ್ಯವಸ್ಥೆ ಇದ್ದು ಒಂದೊಂದು ಕಡೆ 100 ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಕಾರ್ಯಕ್ರಮದ ವೀಕ್ಷಣೆಗೆ 4 ಕಡೆ ವಿಶಾಲವಾದ ಪರದೆಗಳ ವ್ಯವಸ್ಥೆಯನ್ನು ಮಾಡಲಾಗಿದೆ ಹಾಗೂ ಕಾರ್ಯಕ್ರಮಕ್ಕೆ ಅಗತ್ಯವಾದ ಎಲ್ಲ ಸಿದ್ದತೆಗಳೊಂದಿಗೆ ಸೂಕ್ತ ಪೊಲೀಸ್ ಬಂದೋಬಸ್ತ್‌ ಸಹ ಮಾಡಲಾಗಿದೆ.

ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಆಗಮಿಸುವ ಯಾರೂ ಕೂಡ ಕಪ್ಪು ಬಣ್ಣದ ಬಟ್ಟೆ, ಕರ್ಚೀಫ್‍ಗಳನ್ನು ಧರಿಸಿ ಬರುವಂತಿಲ್ಲ. ನೀರಿನ ಬಾಟಲ್, ಹ್ಯಾಂಡ್ ಬ್ಯಾಗ್ ಮತ್ತು ಕಪ್ಪು ಕರ್ಚೀಫ್‍ಗಳನ್ನು ತರುವಂತಿಲ್ಲ. ಮೊಬೈಲ್ ಮತ್ತು ಪರ್ಸ್‍ಗೆ ಮಾತ್ರ ಅವಕಾಶ ಇರುತ್ತದೆ. ಎರಡು ಹಂತದ ತಪಾಸಣೆ ಇರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Narendra Modi Shivamogga Visit On February 27th, Timings, Full Schedule Of Events

ಮೋದಿ ಕಾರ್ಯಕ್ರಮದ ವಿವರಗಳು; ಶಿವಮೊಗ್ಗ ವಿಮಾನ ನಿಲ್ದಾಣವನ್ನು ಒಟ್ಟು 775 ಎಕರೆ ವಿಸ್ತೀರ್ಣದಲ್ಲಿ ರೂ. 449.22 ಕೋಟಿ ವೆಚ್ಚದಲ್ಲಿ ಎಟಿಆರ್ 72 ರಿಂದ ಏರ್‌ಬಸ್ 320 ರವರೆಗೆ ಎಲ್ಲ ರೀತಿಯ ವಿಮಾನಗಳು ಹಗಲು, ರಾತ್ರಿ ಕಾರ್ಯಾಚರಣೆಗೆ ಅನುಕೂಲವಾಗುವಂತೆ ನಿರ್ಮಾಣ ಮಾಡಲಾಗಿದೆ. ವಿಮಾನ ನಿಲ್ದಾಣದ ರನ್‌ ವೇ 3.2 ಕಿ. ಮೀ ಹಾಗೂ 4320 ಚದರ ಅಡಿ ವಿಸ್ತೀರ್ಣದ ಸುಸಜ್ಜಿತ ಪ್ಯಾಸೆಂಜರ್ ಟರ್ಮಿನಲ್, ಏರ್ ಟ್ರಾಫಿಕಿಂಗ್ ಸೆಂಟರ್ ಇತರೆ ಸೌಲಭ್ಯಗಳನ್ನು ನಿರ್ಮಾಣ ಮಾಡಲಾಗಿದೆ. ನರೇಂದ್ರ ಮೋದಿ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿದ್ದಾರೆ.

ಸೋಮವಾರ ಶಿವಮೊಗ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ರೂ. 995 ಕೋಟಿ ವೆಚ್ಚದಲ್ಲಿ 103 ಕಿ. ಮೀ. ಉದ್ದದ ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲು ಮಾರ್ಗಕ್ಕೆ ಶಂಕುಸ್ಥಾಪನೆ ಮಾಡಲಿದ್ದಾರೆ. ರೂ. 97.18 ಕೋಟಿ ವೆಚ್ಚದಲ್ಲಿ ಕೋಟೆಗಂಗೂರಿನಲ್ಲಿ ರೈಲ್ವೇ ಕೋಚಿಂಗ್ ಡಿಪೋ, ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ರೂ. 862 ಕೋಟಿ ಮೊತ್ತದ ಕಾಮಗಾರಿ ಶಂಕುಸ್ಥಾಪನೆ ಮತ್ತು ರೂ. 91.50 ಕೋಟಿ ಮೊತ್ತದ ಕಾಮಗಾರಿಗಳನ್ನು ಲೋಕಾರ್ಪಣೆ ಮಾಡುವರು.

ರೂ. 66.44 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 766 ಸಿ ಬೈಂದೂರು-ರಾಣೆಬೆನ್ನೂರು ರಸ್ತೆಯಲ್ಲಿ 14.77 ಕಿಮೀ ಉದ್ದದ ಶಿಕಾರಿಪುರ ಬೈಪಾಸ್ ನಿರ್ಮಾಣ, ರೂ. 96.20 ಕೋಟಿ ವೆಚ್ಚದಲ್ಲಿ ರಾ.ಹೆ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮೇಗರವಳ್ಳಿಯಿಂದ ಆಗುಂಬೆವರೆಗೆ 17.77 ಕಿ.ಮೀ ದ್ವಿಪಥ ರಸ್ತೆ ಅಗಲೀಕರಣ ಕಾಮಗಾರಿ. ರೂ. 56.56 ಕೋಟಿ ವೆಚ್ಚದಲ್ಲಿ ರಾ.ಹೆ 169 ಶಿವಮೊಗ್ಗ-ಮಂಗಳೂರು ರಸ್ತೆಯ ತೀರ್ಥಹಳ್ಳಿ ತಾಲ್ಲೂಕಿನ ಭಾರತೀಪುರ ಬಳಿ 1.29 ಕಿ.ಮೀ ರಸ್ತೆ ನಿರ್ಮಾಣ ಮತ್ತು ತಿರುವಿನ ಅಭಿವೃದ್ದಿಗೆ ಶಂಕು ಸ್ಥಾಪನೆ ಮಾಡಲಿದ್ದಾರೆ.

ಒಟ್ಟು ರೂ. 896.16 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‍ಸಿಟಿ ಯೋಜನೆಯಡಿ ನಿರ್ಮಾಣಗೊಂಡಿರುವ 44 ಯೋಜನೆಗಳ ಕಾಮಗಾರಿಗಳ ಲೋಕಾರ್ಪಣೆ, ಶಿಮುಲ್ ಶಿವಮೊಗ್ಗ ಕೇಂದ್ರ ಡೇರಿ ಆವರಣದಲ್ಲಿ ರೂ. 45 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರೂ. 2 ಲಕ್ಷ ಲೀಟರ್ ಸಾಮರ್ಥ್ಯದ ಹಾಲು, ಮೊಸಲು ಮತ್ತು ಮಜ್ಜಿಗೆ ಪ್ಯಾಕಿಂಗ್ ಘಟಕ ಕಟ್ಟಡ ಉದ್ಘಾಟನೆ ಹಾಗೂ ನಗರದ ಎಪಿಎಂಸಿ ಆವರಣದಲ್ಲಿ ರೂ. 8 ಕೋಟಿ ವೆಚ್ಚಲ್ಲಿ ನಿರ್ಮಿಸಿರುವ ಮ್ಯಾಮ್‍ಕೋಸ್‍ನ 4 ಅಂತಸ್ತುಗಳ ಆಡಳಿತ ಕಚೇರಿ ಕಟ್ಟಡದ ಉದ್ಘಾಟನೆಯನ್ನು ಪ್ರಧಾನಮಂತ್ರಿಗಳು ನೆರವೇರಿಸುವರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಪೊಲೀಸ್ ಭದ್ರತೆ ಬಗ್ಗೆ ಮಾಹಿತಿ ನೀಡಿದ್ದಾರೆ. "ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಎಲ್ಲ ಕಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಎಲ್ಲ ಸಾರ್ವಜನಿಕರು ಬೆಳಿಗ್ಗೆ 10 ಗಂಟೆಯ ಒಳಗೆ ಕಾರ್ಯಕ್ರಮದ ಆವರಣದೊಳಗೆ ಬರಬೇಕು. ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಇದ್ದು, ನಿಗದಿಪಡಿಸಿದ ಸ್ಥಳದಲ್ಲಿಯೇ ವಾಹನಗಳನ್ನು ನಿಲ್ಲಿಸಬೇಕು" ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+