BREAKING: ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಿಐಡಿಗೆ ವಹಿಸಲು ನಿರ್ಧಾರ
Neha Hiremath Murder Case: ನೇಹಾ ಹಿರೇಮಠ್ ಪ್ರಕರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಆರೋಪಿಗೆ ಸೂಕ್ತ ಶಿಕ್ಷೆಯಾಗಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಿವೆ. ಇದೀಗ ಈ ಬಗ್ಗೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಅವರು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ.
ಇದೇ ವಿಚಾರವಾಗಿ ಇಂದು (ಏಪ್ರಿಲ್ 22) ಬಿಜೆಪಿ, ಹಲವು ಸಂಘಟನೆಗಳು ಕೂಡ ಪ್ರತಿಭಟನೆಗೆ ಇಳಿದಿದ್ದು, ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂಯೆ ಒತ್ತಾಯಿಸಿವೆ. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈ ಚಾರದಲ್ಲಿ ರಾಜಕೀಯ ಮಾಡುವುದು ಬೇಡ. ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧಾರ ಮಾಡಿದ್ದೇವೆ ಎಂದು ಹೇಳಿದ್ದಾರೆ

ಮತ್ತೊಂದೆಡೆ ಬಿಜೆಪಿ ನಾಯಕರು ಇದೇ ವಿಚಾರವನ್ನು ಇಟ್ಟುಕೊಂಡು ಕೆಂಡಕಾರುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಇರುವುದರಿಂದಲೇ ರಾಜ್ಯದಲ್ಲಿ ಇಂತಹ ಕೃತ್ಯಗಳು ಹೆಚ್ಚಾಗುತ್ತಿವೆ ಎನ್ನುವ ಆರೋಪವನ್ನು ಕೂಡ ಬಿಜೆಪಿ ನಾಯಕರು ಮಾಡುತ್ತಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿಯೂ ಕೂಡ ಆರೋಪಿಗೆ ಸೂಕ್ತ ಶಿಕ್ಷೆ ನೀಡುವ ಮೂಲಕ ಸ್ನೇಹಾ ಕುಟುಂಬಕ್ಕೆ ನ್ಯಾಯ ಕೊಡಿಸಿ ಎನ್ನುವ ಕೂಗುಗಳು ಜೋರಾಗಿಯೇ ಕೇಳಿಬರುತ್ತಿವೆ. ಇನ್ನು ಈ ಬಗ್ಗೆ ಸ್ವತಃ ಸ್ನೇಹಾ ತಂದೆಯವರೇ ಪ್ರತಿಕ್ರಿಯಿಸಿದ್ದರು.
"ಆರೋಪಿ ಫಯಾಜ್ ಕೆಲವು ದಿನಗಳ ಹಿಂದೆಯೇ ನಿಮ್ಮ ಮಗಳನ್ನು ಮದುವೆ ಮಾಡಿಕೊಡಿ, ನಿಮ್ಮ ಸಮುದಾಯಕ್ಕೆ ಮತಾಂತರವಾಗುತ್ತೇನೆ ಎಂದು ಫೋನ್ ಮಾಡಿ ಕೇಳಿಕೊಂಡಿದ್ದ. ಆದರೆ ನಾನು ಇದೆಲ್ಲ ಬೇಡ, ನಮ್ಮ ಮಗಳು ಕೂಡ ಇದಕ್ಕೆ ಒಪ್ಪುವುದಿಲ್ಲ. ಸುಮ್ಮನೆ ವಿದ್ಯಾರ್ಥಿಯಾಗಿ ಉತ್ತಮ ಭವಿಷ್ಯ ಕಟ್ಟಿಕೋ," ಎಂದು ಸಲಹೆ ನೀಡಿದ್ದೆ ಎಂದು ಟಿವಿ9 ಜೊತೆ ಮಾತನಾಡುವಾಗ ಸ್ನೇಹಾ ತಂದೆ ಹೇಳಿದ್ದಾರೆ.












Click it and Unblock the Notifications