ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರ ಬೀಳಿಸುತ್ತೇನೆಂದು ನಾನು ಹೇಳಿಲ್ಲ: ಸಿದ್ದರಾಮಯ್ಯ

|
Google Oneindia Kannada News

ಶಿವಮೊಗ್ಗ, ನವೆಂಬರ್ 5: ತಾವು ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದಾಗಿ ಹೇಳಿಯೇ ಇಲ್ಲ ಮತ್ತು ಅಂತಹ ಪ್ರಯತ್ನವನ್ನೂ ಮಾಡಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಶಿವಮೊಗ್ಗದ ಸಾಗರ ಪ್ರವಾಸದಲ್ಲಿರುವ ಸಿದ್ದರಾಮಯ್ಯ, ರಾಜ್ಯ ರಾಜಕೀಯದ ಬೆಳವಣಿಗೆಗಳ ಕುರಿತು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಬಿಜೆಪಿಯಲ್ಲಿಯೇ ಯಡಿಯೂರಪ್ಪ ಅವರಿಗೆ ಶತ್ರುಗಳು ಸಾಕಷ್ಟು ಮಂದಿ ಇದ್ದಾರೆ. ಅವರಲ್ಲಿಯೇ ಯಾರಾದರೂ ಆಡಿಯೋ ಸೋರಿಕೆ ಮಾಡಿರಬಹುದು ಎಂಬ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.

ಇದ್ದ ಮೂರು ಜನರಲ್ಲಿ ಕದ್ದವರಾರು?: ಬಿಎಸ್‌ವೈಗೆ ಸಿದ್ದರಾಮಯ್ಯ ಟಾಂಗ್ಇದ್ದ ಮೂರು ಜನರಲ್ಲಿ ಕದ್ದವರಾರು?: ಬಿಎಸ್‌ವೈಗೆ ಸಿದ್ದರಾಮಯ್ಯ ಟಾಂಗ್

ತಮ್ಮ ಪಕ್ಷದ ಶಾಸಕರು ಬಿಜೆಪಿಗೆ ಹೋಗಬಹುದು ಎಂಬ ಭಯದಿಂದ ಎಚ್ ಡಿ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಉರುಳಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ವ್ಯಂಗ್ಯವಾಡಿದರು. ಇದೇ ಸಂದರ್ಭದಲ್ಲಿ ಆರ್ಥಿಕ ಹಿಂಜರಿತದ ಕುರಿತು ಪ್ರಸ್ತಾಪಿಸಿದ ಅವರು, ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಮಂಗಳವಾರ ಬೆಳಿಗ್ಗೆ ವಿಶ್ವವಿಖ್ಯಾತ ಜೋಗಫಾಲ್ಸ್‌ಗೆ ಸಿದ್ದರಾಮಯ್ಯ ಭೇಟಿ ನೀಡಿದರು. ಬಳಿಕ ಕಾಂಗ್ರೆಸ್ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ತೆರಳಿದರು.

ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ

ಸರ್ಕಾರ ಬೀಳಿಸುವುದಾಗಿ ಹೇಳಿಲ್ಲ

ನಮ್ಮ 80 ಜನ ಶಾಸಕರಿದ್ದು, ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ರಲ್ಲ ಎಂದು ನಮ್ಮ‌ ಕಾರ್ಯಕರ್ತರೊಬ್ಬರು ಕೇಳಿದ್ದರು. ಅದಕ್ಕೆ ಲೋಕಸಭಾ ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ, ಚುನಾವಣೆಯ ನಂತರ ಕೂತು ಮಾತನಾಡೋಣ ಎಂದಿದ್ದೆ. ನಾನು ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿಲ್ಲ, ಆ ಪ್ರಯತ್ನವನ್ನೂ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ರಾಜೀನಾಮೆ ನೀಡಲಿ ಎಂದು ಆಡಿಯೋ ಸೋರಿಕೆ

ರಾಜೀನಾಮೆ ನೀಡಲಿ ಎಂದು ಆಡಿಯೋ ಸೋರಿಕೆ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ. ಹಿರಿಯ ನಾಯಕರಷ್ಟೇ ಇರುವ ಬಿಜೆಪಿಯ ಕೋರ್ ಕಮಿಟಿಯಲ್ಲೇ ಯಡಿಯೂರಪ್ಪ ಅವರಿಗೆ ಆಗದವರು ಇದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ನಾಟಕಗಳೆಲ್ಲ ಆಪರೇಷನ್ ಕಮಲದ ಭಾಗವಲ್ಲವೇ?; ಸಿದ್ದರಾಮಯ್ಯ ವ್ಯಂಗ್ಯಈ ನಾಟಕಗಳೆಲ್ಲ ಆಪರೇಷನ್ ಕಮಲದ ಭಾಗವಲ್ಲವೇ?; ಸಿದ್ದರಾಮಯ್ಯ ವ್ಯಂಗ್ಯ

ಜೆಡಿಎಸ್‌ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಜೆಡಿಎಸ್‌ನಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್‌ನಿಂದ ಬೇರೇನು ನಿರೀಕ್ಷೆ ಮಾಡಲು ಸಾಧ್ಯ? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆ ಎಂದು ಟೀಕಿಸಿದ್ದಾರೆ.

ಭಾರತ್ ಮೇ ಸಬ್ ಅಚ್ಚಾ ಹೇ ಎಂದರೆ ಇದಾ?

ಭಾರತ್ ಮೇ ಸಬ್ ಅಚ್ಚಾ ಹೇ ಎಂದರೆ ಇದಾ?

ನೋಟು ರದ್ದತಿ, ಅವೈಜ್ಞಾನಿಕ ಹಾಗೂ ಅಸಮರ್ಪಕ ಜಿಎಸ್‌ಟಿ ಜಾರಿ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವೈಫಲ್ಯ ದೇಶದ ಆರ್ಥಿಕ ಹಿಂಜರಿತಕ್ಕೆ ಬಹುಮುಖ್ಯ ಕಾರಣಗಳು. ಹಸಿವಿನ ಪ್ರಮಾಣ ಹೆಚ್ಚಿರುವ 118 ದೇಶಗಳ ಪಟ್ಟಿಯಲ್ಲಿ ಭಾರತ 102ನೇ ಸ್ಥಾನದಲ್ಲಿದೆ. ಇದು ದೇಶದ ಪಾಲಿನ ಕರಾಳ ದಿನಗಳು. 'ಭಾರತ್ ಮೇ ಸಬ್ ಅಚ್ಚಾ ಹೇ' ಎಂದರೆ ಇದಾ? ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

"ಸಿದ್ದರಾಮಯ್ಯ ಅವರೇ ಯಾಕೆ ಈ ಕೆಲಸ ಮಾಡಿರಬಾರದು"; ಬಾಣ ತಿರುಗಿಸಿದ ಸೋಮಣ್ಣ

ಸಿದ್ದರಾಮಯ್ಯನವರೇ ಇದರ ಹೆಸರೇನು?

ಸಿದ್ದರಾಮಯ್ಯನವರೇ ಇದರ ಹೆಸರೇನು?

ಆಪರೇಷನ್ ಕಮಲದ ಕುರಿತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯಗೆ ಸಚಿವ ಸಿ.ಟಿ. ರವಿ ತಿರುಗೇಟು ನೀಡಿದ್ದಾರೆ. ಜಮೀರ್ ಅಹ್ಮದ್ ಖಾನ್, ಚೆಲುವರಾಯಸ್ವಾಮಿ, ಅಖಂಡ ಶ್ರೀನಿವಾಸ ಮೂರ್ತಿ, ಎಚ್ ಸಿ ಬಾಲಕೃಷ್ಣ, ಭೀಮಾ ನಾಯ್ಕ್, ರಮೇಶ ಬಂಡಿಸಿದ್ದೇಗೌಡ, ಇಕ್ಬಾಲ್ ಅನ್ಸಾರಿ- ಈ ಎಲ್ಲ ಶಾಸಕರೂ 2018ರಲ್ಲಿ ಜೆಡಿಎಸ್ ತೊರೆದು ನೀವು ಮುಖ್ಯಮಂತ್ರಿಯಾಗಿದ್ದಾಗ ಕಾಂಗ್ರೆಸ್ ಸೇರ್ಪಡೆಯಾದರು. ಈ ಆಪರೇಷನ್‌ನ ಹೆಸರೇನು? ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಉರಿಯುತ್ತಿರುವ ನಿಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ: ಎಚ್ಡಿಕೆ ಹೇಳಿದ್ದು ಯಾರಿಗೆ?ಉರಿಯುತ್ತಿರುವ ನಿಮ್ಮ ಮನೆಯ ಬೆಂಕಿ ನಂದಿಸಿಕೊಳ್ಳಿ: ಎಚ್ಡಿಕೆ ಹೇಳಿದ್ದು ಯಾರಿಗೆ?

English summary
Congress leader Siddaramaiah has made clarification that, he has never said that he will topple the coalition government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X