ಶಿವಮೊಗ್ಗ; ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ

ಶಿವಮೊಗ್ಗ, ಫೆಬ್ರವರಿ 22: ತೀರ್ಥಹಳ್ಳಿಯ ಪ್ರಮುಖ ಆಕರ್ಷಣೆಗಳಲ್ಲಿ ಜಯಚಾಮರಾಜೇಂದ್ರ ಸೇತುವೆಯೂ ಒಂದು. ತುಂಗಾ ನದಿಗೆ ಅಡ್ಡವಾಗಿ ಈ ಸೇತುವೆಯನ್ನು ನಿರ್ಮಾಣ ಮಾಡಲಾಗಿದೆ. ಈಗ ಪಟ್ಟಣದಲ್ಲಿ ಹೊಸ ಸೇತುವೆ ನಿರ್ಮಾಣವಾಗುತ್ತಿದೆ.

ಹೌದು, ತೀರ್ಥಹಳ್ಳಿಯಲ್ಲಿ ತುಂಗಾ ನದಿಗೆ ಹೊಸ ಸೇತುವೆ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗಾಗಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ 55.62 ಕೋಟಿ ರೂ.ಗಳಿಗೆ ಅನುಮೋದನೆ ಸಿಕ್ಕಿದೆ.

ತೀರ್ಥಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಈ ಕುರಿತು ಫೇಸ್ ಬುಕ್‌ನಲ್ಲಿ ಮಾಹಿತಿ ನೀಡಿದ್ದಾರೆ. ಹೊಸ ಸೇತುವೆ ಕಾಮಗಾರಿಯನ್ನು ಎರಡು ವರ್ಷಗಳಲ್ಲಿ ಪೂರ್ಣಗೊಳಿಸಲಾಗುತ್ತದೆ ಎಂದು ಶಾಸಕರು ಹೇಳಿದ್ದಾರೆ.

New Bridge Will Come Up In Thirthahalli Tunga River

ಹೊಸ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 13 ತೀರ್ಥಹಳ್ಳಿ ಮತ್ತು ಶೃಂಗೇರಿಗೆ ಸಂಪರ್ಕ ಕಲ್ಪಿಸುತ್ತದೆ. ಸರಕು ಸಾಗಣೆ ಲಾರಿಗಳ ಸಂಚಾರದಿಂದಾಗಿ ನೂರು ವರ್ಷಕ್ಕೂ ಹಳೆಯದಾದ ಸೇತುವೆಗೆ ಅಪಾಯ ಎದುರಾಗಿದೆ. 2018ರಿಂದಲೇ ಹೊಸ ಸೇತುವೆ ನಿರ್ಮಾಣದ ಚರ್ಚೆಗಳು ನಡೆಯುತ್ತಿದ್ದವು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+