ಶಿವಮೊಗ್ಗ: ವಿವಿಧ ಯೋಜನೆಗಳ ಬಿಗ್ ಅಪ್ಡೇಟ್ಸ್ ಇಲ್ಲಿದೆ!
New Railway line: ರೈಲ್ವೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ಮತ್ತೊಂದು ಬಂಪರ್ ಗುಡ್‌ನ್ಯೂಸ್ ಸಿಕ್ಕಿದೆ. ವಿ. ಸೋಮಣ್ಣ ಅವರು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಮೇಲೆ ಕರ್ನಾಟಕಕ್ಕೆ ಹಲವು ಗುಡ್‌ನ್ಯೂಸ್‌ಗಳನ್ನು ನೀಡಲಾಗಿದೆ. ಇದೀಗ ಕೇಂದ್ರ ಸರ್ಕಾರದ ಸಹಕಾರದೊಂದಿಗೆ ಕರ್ನಾಟಕಕ್ಕೆ ಮತ್ತೊಂದು ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಈ ವಿಚಾರವನ್ನು ಶಿವಮೊಗ್ಗ ಜನತೆಗೆ ಮತ್ತೊಂದು ಸಂತಸ ಸುದ್ದಿ.... ಎಂದು ಸಂಸದ ಬಿ.ವೈ ರಾಘವೇಂದ್ರ ಅವರು ಹಂಚಿಕೊಂಡಿದ್ದಾರೆ.
ಹೌದು ಕರ್ನಾಟಕದ ಶಿವಮೊಗ್ಗ ರೈಲು ಸೇವೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್‌ವೊಂದು ಬಂದಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಂಸದ ಬಿ.ವೈ ರಾಘವೇಂದ್ರ ಅವರು, ಭದ್ರಾವತಿಯಿಂದ ಚಿಕ್ಕಜಾಜೂರುವರೆಗೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯನ್ನು ಶೀಘ್ರವೇ ಆರಂಭಿಸುವ ದೃಷ್ಠಿಯಿಂದ, ಈ ರೈಲ್ವೆ ಮಾರ್ಗದ ಅಂತಿಮ ಸರ್ವೆ ಮಾಡಲು ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.

ಮುಂದುವರಿದು ಈ ಒಂದು ಹೊಸ ಮೈಲಿಗಲ್ಲು ಸ್ಥಾಪಿತವಾದ ನಂತರ ನಮ್ಮ ಮಲೆನಾಡು ಭಾಗಕ್ಕೆ ಬಯಲು ಸೀಮೆ ಹಾಗೂ ಅರೆ ಮಲೆನಾಡು ಭಾಗಗಳ ಸಂಪರ್ಕ ಸಾಧ್ಯತೆಯಿಂದ ವ್ಯಾಪಾರ, ವ್ಯವಹಾರ, ಪ್ರವಾಸೋದ್ಯಮ, ಕೈಗಾರಿಕೆ ಹಾಗೂ ವಾಣಿಜ್ಯೋದ್ಯಮಕ್ಕೆ ಹೆಚ್ಚಿನ ಬಲ ದೊರೆಯುತ್ತದೆ ಇದರೊಂದಿಗೆ ಮಲೆನಾಡಿನ ಆರ್ಥಿಕ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದ್ದಾರೆ.
ಇದರೊಂದಿಗೆ ಮಲೆನಾಡಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಉತ್ತಮ ಸಂಪರ್ಕ ದೊರೆಯುವ ಮೂಲಕ ಜನಸಾಮಾನ್ಯರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಾಗಲಿದೆ. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ಕೂಡ ನಿರ್ಮಾಣವಾಗುತ್ತದೆ ಅಂತ ಹೇಳಿದ್ದಾರೆ.
ಈ ಎಲ್ಲ ದೂರದೃಷ್ಟಿ ಇಟ್ಟುಕೊಂಡು ರಾಜ್ಯದಲ್ಲಿ ರೈಲ್ವೆ ಮೂಲಸೌಕರ್ಯಗಳ ಹೆಚ್ಚಳ ಹಾಗೂ ನೂತನ ರೈಲ್ವೆ ಮಾರ್ಗಗಳ ನಿರ್ಮಾಣಕ್ಕೆ ಬೆಂಬಲವಾಗಿ ನಿಂತಿರುವ ಸನ್ಮಾನ್ಯ ಪ್ರಧಾನಿ ನರೇಂದ್ರ ಮೋದಿಜೀ, ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರಿಗೆ ಶಿವಮೊಗ್ಗ ಜನತೆಯ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿ ಸಂತೋಷ ಹಂಚಿಕೊಂಡಿದ್ದಾರೆ.
ಶಿವಮೊಗ್ಗ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಮನವಿ. ಇನ್ನು ಶಿವಮೊಗ್ಗದ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಈಚೆಗೆ ಸಂಸದ ಬಿ.ವೈ ರಾಘವೇಂದ್ರ ಅವರು, ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ ಕೆಲವೊಂದು ಪ್ರಮುಖ ವಿಚಾರಗಳನ್ನು ಚರ್ಚಿಸಿದ್ದರು.
* ಶಿವಮೊಗ್ಗದ ಶೆಟ್ಟಿಹಳ್ಳಿ ವನ್ಯ ಜೀವಿ ಪರಿಸರದ ಸೀಮಾರೇಖೆಯ ಮರು ಅಧಿಸೂಚನೆ ಹೊರಡಿಸುವ ಪ್ರಯುಕ್ತ ಕೇಂದ್ರ ಸರ್ಕಾರವು ಅನುಮತಿ ನೀಡಿದ್ದು ಅದನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಬೇಕಿದೆ. ಈ ಸಂಬಂಧ ಅನುಮತಿಯನ್ನು ಶೀಘ್ರವಾಗಿ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಲಾಗಿತ್ತು.
* ಶಿವಮೊಗ್ಗ ನಗರದ ಆರ್ಥಿಕ ಸಾಮಾಜಿಕ ಬೆಳವಣಿಗೆಯ ಅಭಿವೃದ್ಧಿಯ ವೇಗವನ್ನು ಹೆಚ್ಚಿಸುವ ಉದ್ದೇಶದಿಂದ ಶಿವಮೊಗ್ಗದ ಪರಿಸರ ಸೂಕ್ಷ್ಮ (ECO SENSITIVE) ಪ್ರದೇಶವನ್ನು 1.00ಕಿಮಿಗೆ ಮಿತಿಗೊಳಿಸಬೇಕು ಅಂತ ಕೇಳಲಾಗಿದೆ.
* ಶರಾವತಿ ಹಿನ್ನಿರಿನಲ್ಲಿ ಜಲಾಶಯ ನಿರ್ಮಿಸುವ ಸಂಧರ್ಭದಲ್ಲಿ ಅಲ್ಲಿನ ಭೂ ಅನುಭವಿದಾರರ ಪಟ್ಟಿಯನ್ನು ನೀಡುವಂತೆ ಪಟ್ಟಿ ಕಳುಹಿಸಿಕೊಡಲು ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾವು ಸೂಚಿಸಿದೆ. ಇದರಂತೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ನಿಜವಾದ ಭೂ ಅನುಭವಿದಾರರನ್ನು ಗುರುತಿಸಿ ಪಟ್ಟಿ ಕಳುಹಿಸಿಕೊಡುವಂತೆ ಸಹ ಇದೇ ಸಂದರ್ಭದಲ್ಲಿ ಮನವಿ ಮಾಡಲಾಗಿದೆ.
* ಪ್ರವಾಸೋಧ್ಯಮವನ್ನು ಹೆಚ್ಚಿಸುವ ಅವಕಾಶವಿರುವ ಶಿವಮೊಗ್ಗದ ತ್ಯಾವರೆಕೊಪ್ಪದಲ್ಲಿರುವ ಮೃಗಾಲಯ, ಹುಲಿ-ಸಿಂಹಧಾಮದಲ್ಲಿ walk through aviary ಗಳನ್ನು ನಿರ್ಮಿಸಲು 5 ಕೋಟಿಗಳ ಅನುದಾನವನ್ನು ನೀಡುವಂತೆ ಸಹ ಕೋರಲಾಗಿದೆ. ಈ ಎಲ್ಲಾ ಬೇಡಿಕೆಗಳಿಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಅಂತ ಹೇಳಲಾಗಿದೆ.












Click it and Unblock the Notifications