ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಮೆಗ್ಗಾನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಬೆಡ್ ಅಭಾವ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 06; ಒಂದೆಡೆ ಆಕ್ಸಿಜನ್ ಕೊರತೆಯ ಭೀತಿ ಇದ್ದರೆ, ಮತ್ತೊಂದೆಡೆ ಮುಖ್ಯಮಂತ್ರಿ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ಆಕ್ಸಿಜನ್ ಬೆಡ್‌ಗಳಿಗೆ ಅಭಾವ ಉಂಟಾಗಿದೆ. ಜಿಲ್ಲಾಸ್ಪತ್ರೆ ಮುಂಭಾಗ 'ಆಕ್ಸಿಜನ್ ಬೆಡ್ ಇಲ್ಲ' ಎಂದು ಬೋರ್ಡ್ ಹಾಕಲಾಗಿದೆ.

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮುಂಭಾಗ ಕೋವಿಡ್ ಸೋಂಕಿತರಿಗೆ ಆಕ್ಸಿಜನ್ ಬೆಡ್ ಇಲ್ಲ ಎಂದು ಬೋರ್ಡ್ ಹಾಕಲಾಗಿದೆ. ಉಸಿರಾಟದ ಸಮಸ್ಯೆ ಮತ್ತು ಆಕ್ಸಿಜನ್ ತುರ್ತು ಅಗತ್ಯವಿರುವ ಕೋವಿಡ್ ಸೋಂಕಿತರಿಗೆ ಬೆಡ್ ಸಿಗದಂತಾಗಿದೆ.

ಶಿವಮೊಗ್ಗ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್; ಹೋಂ ಐಸೊಲೇಷನ್ಶಿವಮೊಗ್ಗ ಜಿಲ್ಲಾಧಿಕಾರಿಗೆ ಕೊರೊನಾ ಪಾಸಿಟಿವ್; ಹೋಂ ಐಸೊಲೇಷನ್

ಮೆಗ್ಗಾನ್ ಆಸ್ಪತ್ರೆಯಲ್ಲಿ 400 ಆಕ್ಸಿಜನ್ ಬೆಡ್‌ಗಳಿವೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಇದರಿಂದ ಬೆಡ್‌ಗಳು ಭರ್ತಿಯಾಗಿದ್ದು, ಆತಂಕ ಮೂಡಿಸಿದೆ. ಜಿಲ್ಲೆಯಲ್ಲಿ ಬೆಡ್ ಸಮಸ್ಯೆ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ, ಜಿಲ್ಲಾಡಳಿತ ಹೇಳುತ್ತಿದೆ.

ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ

 No Oxygen Bed Availability In District COVID Hospital

ಆದರೆ ಆಕ್ಸಿಜನ್ ಬೆಡ್ ಕೊರತೆ ಇದೆ ಎಂದು ಆಸ್ಪತ್ರೆ ಮುಂದೆ ಬೋರ್ಡ್ ಹಾಕಿರುವುದು ಸೋಂಕಿತರಲ್ಲಿ ಆತಂಕ ಮೂಡಿಸಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 702 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 5192.

ಜಿಲ್ಲಾಡಳಿತ ಹೇಳುವುದೇನು?; "ಆಕ್ಸಿಜನ್ ಪ್ರಮಾಣಕ್ಕೆ ತಕ್ಕಂತೆ ಬೆಡ್‌ಗಳನ್ನು ವ್ಯವಸ್ಥೆ ಮಾಡಿಕೊಂಡಿದ್ದೇವೆ. ಅದಕ್ಕಿಂತಲೂ ಹೆಚ್ಚು ಬೆಡ್ ವ್ಯವಸ್ಥೆ ಮಾಡಿ, ಬಳಿಕ ಆಕ್ಸಿಜನ್ ಇಲ್ಲದೆ ಸೋಂಕಿತರು ನರಳುವುದು ಬೇಡ. ಸಂಜೆ ವೇಳೆಗೆ ಹೆಚ್ಚುವರಿ ಆಕ್ಸಿಜನ್ ಬಳಿಕ ಉಳಿದ ವ್ಯವಸ್ಥೆ ಮಾಡುವುದಾಗಿ" ಮೆಗ್ಗಾನ್ ಆಸ್ಪತ್ರೆ ಅಧೀಕ್ಷಕ ಡಾ. ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ.

English summary
There is no oxygen bed availability in Mc Gann district hospital, Shivamogga for COVID patients.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X