ತೀರ್ಥಹಳ್ಳಿ; ಸ್ಮಶಾನಕ್ಕೆ ರಸ್ತೆ ಇಲ್ಲ, ಮಳೆಯಲ್ಲೇ ಶವದ ಸಂಸ್ಕಾರ
ಶಿವಮೊಗ್ಗ, ಆಗಸ್ಟ್, 07: ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ತೆರಳಲು ಸರಿಯಾದ ರಸ್ತೆ ಇಲ್ಲದ ಕಾರಣ ಎದೆ ಮಟ್ಟದವರೆಗೆ ಹರಿಯುತ್ತಿರುವ ಮಳೆ ನೀರಿನಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
ತೀರ್ಥಹಳ್ಳಿ ತಾಲೂಕು ಕೋಡ್ಲು ಗ್ರಾಮದಲ್ಲಿ 80 ವರ್ಷದ ತಮ್ಮಯ್ಯ ಗೌಡ ಎಂಬುವವರು ವಯೋಸಹಜವಾಗಿ ಸಾವನ್ನಪ್ಪಿದ್ದರು. ಅವರ ಮೃತದೇಹವನ್ನು ನೀರಿನಲ್ಲಿ ಸಾಗಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಮಳೆಯಲ್ಲೇ ಅಂತ್ಯಸಂಸ್ಕಾರ: ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡ್ಲು ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ರಸ್ತೆ ಸಮರ್ಪಕವಾಗಿಲ್ಲ. ಮಳೆ ಬಂದರೆ ಸಾಕು ಅಲ್ಲಿನ ರಸ್ತೆ ಕೆರೆಯಂತಾಗಿಬಿಡುತ್ತದೆ. ಹೀಗೆ ವಯೋಸಹಜವಾಗಿ ತಮ್ಮಯ್ಯಗೌಡ ಅವರು ನಿಧನರಾದ ಹಿನ್ನೆಲೆ ಅವರ ಮೃತದೇವಹನ್ನು ಹರಿಯುತ್ತಿರುವ ಮಳೆ ನೀರಿನಲ್ಲೇ ಮೆರವಣಿಗೆ ಮಾಡಲಾಯಿತು. ಆರು ಜನರು ಮೃತದೇಹವನ್ನು ನೀರಿನಲ್ಲಿ ಸಾಗಿಸುವ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ.

ಎದೆ ಮಟ್ಟದವರೆಗೂ ಹರಿಯುತ್ತಿದ್ದ ಮಳೆ ನೀರಿನಲ್ಲಿಯೇ ಸಂಬಂಧಿಗಳು, ಗ್ರಾಮಸ್ಥರು ಮೃತದೇಹವನ್ನು ಹೊತ್ತು ಸ್ಮಶಾನಕ್ಕೆ ಸಾಗಿಸಿದ್ದಾರೆ. ಸ್ಮಶಾನಕ್ಕೆ ಸೂಕ್ತ ವ್ಯವಸ್ಥೆ ಇಲ್ಲದಿದ್ದರಿಂದ ಜೋರಾಗಿ ಸುರಿಯುವ ಮಳೆಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಶೀಟ್ ಹಾಕಿ ತಾತ್ಕಾಲಿಕವಾಗಿ ಶೆಡ್ ನಿರ್ಮಿಸಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಮಾಡಕೊಳ್ಳಲಾಗಿತ್ತು.

ಮನವಿಗೂ ಕ್ಯಾರೆ ಅನ್ನುತ್ತಿಲ್ಲ: ಸ್ಮಶಾನದ ಹಾದಿಗೆ ಮಣ್ಣು ಹಾಕಿ ಎತ್ತರಿಸುವಂತೆ ಹಲವು ಭಾರೀ ಮನವಿ ಮಾಡಿದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಕ್ಯಾರೆ ಅನ್ನುತ್ತಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದರು. ಮಳೆಗಾಲ ಶುರುವಾದರೆ ಈ ಮಾರ್ಗದಲ್ಲಿ ನೀರು ಹರಿಯಲು ಆರಂಭವಾಗುತ್ತದೆ. ಮೂರ್ನಾಲ್ಕು ತಿಂಗಳು ರಸ್ತೆಯಲ್ಲಿ ನೀರು ಹರಿಯುವುದರಿಂದ ಸ್ಮಶಾನಕ್ಕೆ ಹೋಗಲು ಸಾಧ್ಯವಾಗುವುದಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಸದ್ಯ ಮೃತದೇಹವನ್ನು ನೀರಿನಲ್ಲಿ ಹೊತ್ತು ಸಾಗುವ ದೃಶ್ಯ ಸಾಮಾಜಿಕ ಜಲತಾಣಗಳಲ್ಲಿ ವೈರಲ್ ಆಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳನ್ನು ಎಚ್ಚರಗೊಳ್ಳುವಂತೆ ಮಾಡಿದೆ.
-
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications