ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆಗೆ ತಡೆ ನೀಡದ ಹೈಕೋರ್ಟ್

|
Google Oneindia Kannada News

ಶಿವಮೊಗ್ಗ, ನವೆಂಬರ್ 08: ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದ ಚುನಾವಣೆಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಲು ನಿರಾಕರಿಸಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ನವೆಂಬರ್ 9ರಂದು ಚುನಾವಣೆ ನಡೆಯಲಿದೆ.

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್ ನಿರಾಕರಿಸಿದೆ. ಚುನಾವಣಾಧಿಕಾರಿ ನಾಗೇಂದ್ರ ಎಫ್. ಹೊನ್ನಾಳಿ ಸೋಮವಾರ ಚುನಾವಣೆ ನಡೆಸಲಿದ್ದಾರೆ.

ಮಂಜುನಾಥ ಗೌಡರಿಗೆ ಹಿನ್ನಡೆ; ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹೊಸ ಅಧ್ಯಕ್ಷರು ಮಂಜುನಾಥ ಗೌಡರಿಗೆ ಹಿನ್ನಡೆ; ಶಿವಮೊಗ್ಗ ಡಿಸಿಸಿ ಬ್ಯಾಂಕ್‌ ಹೊಸ ಅಧ್ಯಕ್ಷರು

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಗೆ ತಡೆ ನೀಡಬೇಕು. ತಮ್ಮ ಸದಸ್ಯತ್ವ ಅನರ್ಹತೆ ಕುರಿತ ತೀರ್ಪಿಗೆ ತಡೆ ನೀಡಬೇಕು ಎಂದು ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ ಗೌಡ ಹೈಕೋರ್ಟ್ ಮೆಟ್ಟಿಲೇರಿದ್ದರು.

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ; 3 ವರ್ಷಗಳ ನಂತರ ಒಂದಾದ ನಾಯಕರುಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ; 3 ವರ್ಷಗಳ ನಂತರ ಒಂದಾದ ನಾಯಕರು

No Stay For Shivamogga DCC Bank Elections On November 9

ತುರ್ತಾಗಿ ವಿಚಾರಣೆ ನಡೆಸುವ ಅರ್ಜಿ ಇದಲ್ಲ. ಮುಖ್ಯ ಅರ್ಜಿಯ ಜೊತೆ ವಿಚಾರಣೆ ನಡೆಯಲಿ ಎಂದು ಹೈಕೋರ್ಟ್ ಹೇಳಿದ್ದು, ನವೆಂಬರ್ 9ರಂದು ನಡೆಯಬೇಕಿದ್ದ ಅಧ್ಯಕ್ಷ ಹುದ್ದೆಯ ಚುನಾವಣೆಗೆ ತಡೆ ನೀಡಲು ನಿರಾಕರಿಸಿದೆ.

 ಡಿಸಿಸಿ ಬ್ಯಾಂಕ್ ಚುನಾವಣೆ: 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆಗೆ ಪ್ರಯತ್ನ ಡಿಸಿಸಿ ಬ್ಯಾಂಕ್ ಚುನಾವಣೆ: 16 ಕ್ಷೇತ್ರದಲ್ಲಿ ಅವಿರೋಧ ಆಯ್ಕೆಗೆ ಪ್ರಯತ್ನ

ಅಧ್ಯಕ್ಷರ ಆಯ್ಕೆ : ನವೆಂಬರ್ 9ರ ಸೋಮವಾರ ಡಿಸಿಸಿ ಬ್ಯಾಂಕ್ ಅಧ್ಯಕ್ಷರನ್ನು ಆಯ್ಕೆ ಮಾಡಲು ಚುನಾವಣೆ ನಡೆಯಲಿದೆ. ಬೆಳಗ್ಗೆ 9 ರಿಂದ 11 ಗಂಟೆಯ ತನಕ ನಾಮಪತ್ರಗಳನ್ನು ಸಲ್ಲಿಸಲು ಅವಕಾಶವಿದೆ. ಅಗತ್ಯವಿದ್ದರೆ ಮಧ್ಯಾಹ್ನ 1 ಗಂಟೆಯ ಬಳಿಕ ಮತದಾನ ನಡೆಯಲಿದೆ.

ಚಿತ್ರದುರ್ಗದ ಜಂಟಿ ರಿಜಿಸ್ಟ್ರಾರ್ ಇಲಿಯಾಸ್ ಉಲ್ಲಾ ಷರೀಫ್ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅವ್ಯವಹಾರಗಳ ಕುರಿತು ತನಿಖೆ ನಡೆಸಿದ್ದರು. ಬಳಿಕ ಆರ್. ಎಂ. ಮಂಜುಾಥ ಗೌಡ ಅವರ ಸದಸ್ಯತ್ವವನ್ನು 5 ವರ್ಷಗಳ ಕಾಲ ಅನರ್ಹಗೊಳಿಸಿದ್ದರು.

ಅಕ್ಟೋಬರ್ 17ರಿಂದ ಉಪಾಧ್ಯಕ್ಷ ಚನ್ನವೀರಪ್ಪ ಅವರು ಪ್ರಭಾರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ನಡೆಯಲಿರುವ ಚುನಾವಣೆಯಲ್ಲಿ ಆರ್. ಎಂ. ಮಂಜುನಾಥ ಗೌಡ ಬಣದ ನಡೆ ಕುತೂಹಲಕ್ಕೆ ಕಾರಣವಾಗಿದೆ.

English summary
No stay from Karnataka high court for Shivamogga District Cooperative Central Bank election. R.M. Manjunatha Gowda moved court and seek stay for November 9th elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X