ಶಿವಮೊಗ್ಗದಲ್ಲಿ ಫೆ.14ರಂದು ಕಿಸ್ ಆಫ್ ಲವ್?
ಶಿವಮೊಗ್ಗ, ಜನವರಿ 30 : ಫೆಬ್ರವರಿ 14ರ ಪ್ರೇಮಿಗಳ ದಿನದಂದು ಶಿವಮೊಗ್ಗದಲ್ಲಿ ಕಿಸ್ ಆಫ್ ಲವ್ ಆಯೋಜಿಸಲು ಅನುಮತಿ ಕೇಳಲಾಗಿದೆ. ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಕಾರ್ಯಕ್ರಮಕ್ಕೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿವೆ.
'ವಿದ್ಯಾರ್ಥಿ' ಸಂಘಟನೆಯ ಅಧ್ಯಕ್ಷ ವಿನಯ್ ಕೆ.ಸಿ.ರಾಜಾವತ್ ಅವರು ಫೆ.14ರಂದು ಕಿಸ್ ಆಫ್ ಲವ್ ಆಚರಣೆ ಮಾಡಲು ಅನುಮತಿ ನೀಡಬೇಕು. ಗೋಪಿ ವೃತ್ತದಲ್ಲಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕಾರ್ಯಕ್ರಮಕ್ಕೆ ರಕ್ಷಣೆ ನೀಡಬೇಕು ಎಂದು ಎಸ್ಪಿ ರವಿ ಡಿ.ಚೆನ್ನಣ್ಣನವರ್ ಮತ್ತು ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. [ಕಿಸ್ ಆಫ್ ಲವ್ : ವಿದ್ಯಾರ್ಥಿಗಳು ಏನಂತಾರೆ?]

ಕಿಸ್ ಆಫ್ ಲವ್ನಂತಹ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡಬಾರದು ಎಂದು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಒತ್ತಾಯಿಸಿವೆ. ಕಾರ್ಯಕ್ರಮಕ್ಕೆ ಅವಕಾಶ ನೀಡಿದರೆ ಮುಂದೆ ನಡೆಯುವ ಅನಾಹುತಕ್ಕೆ ನಮ್ಮನ್ನು ಹೊಣೆ ಮಾಡಬೇಡಿ ಎಂದು ಭಜರಂಗದಳದ ನಗರ ಸಂಚಾಲಕ ಮಾಲತೇಶ್ ಹೇಳಿದ್ದಾರೆ. [ಕಿಸ್ ಆಫ್ ಲವ್ ಕೇಸಲ್ಲಿ ಟ್ವಿಸ್ಟ್ : ಇದಕ್ಕೆಲ್ಲ ಆತನೇ ಕಾರಣ!]
ಬೆಂಗಳೂರಲ್ಲಿ ಅನುಮತಿ ನೀಡಿರಲಿಲ್ಲ : 2014ರ ನವೆಂಬರ್ನಲ್ಲಿ ಬೆಂಗಳೂರಿನಲ್ಲಿ ಕಿಸ್ ಆಫ್ ಲವ್ ಆಯೋಜಿಸಲು ಪೊಲೀಸರ ಅನುಮತಿ ಕೇಳಲಾಗಿತ್ತು. ಆದರೆ, ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದರು. ಕಿಸ್ ಆಫ್ ಲವ್ಗೆ ಅನುಮತಿ ನೀಡದಂತೆ ಹಿಂದೂ ಸಂಘಟನೆಗಳು ಪೊಲೀಸರನ್ನು ಒತ್ತಾಯಿಸಿದ್ದವು.
ಕೇರಳದಲ್ಲಿ ಕಿಸ್ ಆಫ್ ಲವ್ ಅಭಿಯಾನದ ರೂವಾರಿಗಳಾದ ರಾಹುಲ್ ಪಶುಪಾಲನ್ ಮತ್ತು ಆತನ ಪತ್ನಿ ರೇಶ್ಮಿ ನಾಯರ್ ಕೆಲವು ದಿನಗಳ ಹಿಂದೆ ವೇಶ್ಯಾವಾಟಿಕೆ ಜಾಲದಲ್ಲಿ ಸಿಕ್ಕಿಬಿದ್ದಿದ್ದಾರೆ. ರೇಶ್ಮಿ ನಾಯರ್ ಗಂಡನ ವಿರುದ್ಧವೇ ಆರೋಪ ಮಾಡಿದ್ದು ಆತನೇ ತನ್ನನ್ನು ವೇಶ್ಯಾವಾಟಿಕೆಗೆ ತಳ್ಳಿದ್ದ ಎಂದು ದೂರಿದ್ದಾಳೆ.
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications