ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗದಲ್ಲಿ ನೀಟ್ ಪ್ರವೇಶ ಪರೀಕ್ಷಾ ಕೇಂದ್ರಕ್ಕೆ ಆಗ್ರಹ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಡಿಸೆಂಬರ್ 26 : ಮೆಡಿಕಲ್ ಪ್ರವೇಶಕ್ಕೆ ಶಿವಮೊಗ್ಗದಲ್ಲೇ ನೀಟ್ ಪ್ರವೇಶ ಪರೀಕ್ಷಾ ಕೇಂದ್ರ ಪ್ರಾರಂಭಿಸುವಂತೆ ಆಗ್ರಹಿಸಿ ಮಂಗಳವಾರ ನಗರದಲ್ಲಿ ಎನ್ ಎಸ್ ಯು ಐ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು.

ಶಿವಮೊಗ್ಗ ಮೆಡಿಕಲ್ ಪದವಿ ಪ್ರವೇಶಕ್ಕೆ ನಡೆಸುವ ನೀಟ್ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ ) ಪರೀಕ್ಷೆಗೆ ರಾಜ್ಯದಲ್ಲಿ ಕೇವಲ 5 ಕೇಂದ್ರಗಳಿದ್ದು, ಶಿವಮೊಗ್ಗವನ್ನೂ ಪರೀಕ್ಷಾ ಕೇಂದ್ರವನ್ನಾಗಿ ಮಾಡಬೇಕೆಂದು ಆಗ್ರಹಿಸಿ ಡಿಸೆಂಬರ್ 15ರಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು.

NSUI protest for NEET center in Shivamogga

ಆದರೆ, ಹತ್ತು ದಿನಗಳು ಕಳೆದರೂ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಕೈಗೊಂಡಿದ್ದಾಗಲೀ, ರಾಜ್ಯ-ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಶಿವಮೊಗ್ಗ ಜಿಲ್ಲೆ ದಿನೇ ದಿನೇ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿದೆ. ಈಗಾಗಲೇ ಇಲ್ಲಿರುವ ಮೆಡಿಕಲ್ ಮತ್ತು ಎಂಜಿನಿಯರಿಂಗ್ ಕಾಲೇಜುಗಳ ಬೋಧನಾ ವ್ಯವಸ್ಥೆಯಿಂದಾಗಿ ಜಿಲ್ಲೆ ಹೆಸರು ಮಾಡುತ್ತಿದ್ದು, ರಾಜ್ಯದ ವಿವಿಧೆಡೆಯಿಂದ ಇಲ್ಲಿಗೆ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಬರುತ್ತಿದ್ದಾರೆ ಎಂದು ಕಾರ್ಯಕರ್ತರು ತಿಳಿಸಿದರು.

ವೈದ್ಯಕೀಯ ಪ್ರವೇಶದ 'ಕ್ಯಾಪಿಟೇಶನ್' ಪಿಡುಗಿಗೆ ರಾಮಬಾಣ NEETವೈದ್ಯಕೀಯ ಪ್ರವೇಶದ 'ಕ್ಯಾಪಿಟೇಶನ್' ಪಿಡುಗಿಗೆ ರಾಮಬಾಣ NEET

ಆದರೆ, ವೈದ್ಯಕೀಯಕೋರ್ಸ್ ಗಳಿಗಾಗಿ ನೀಟ್ (ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ) ಪ್ರವೇಶ ಪರೀಕ್ಷಾ ಕೇಂದ್ರಗಳು ರಾಜ್ಯದಲ್ಲಿ ಕೇವಲ 5 ಮಾತ್ರ (ದಾವಣಗೆರೆ, ಬೆಳಗಾವಿ, ಕಲಬುರ್ಗಿ, ಮಂಗಳೂರು ಮತ್ತು ಬೆಂಗಳೂರು) ಇವೆ. ನೀಟ್ ಪರೀಕ್ಷೆ ಬರೆಯುವವರು ಈ ಐದು ಕೇಂದ್ರಗಳಲ್ಲಿ ಯಾವುದಾದರೂ ಒಂದು ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿದರು.

ಶಿವಮೊಗ್ಗದಲ್ಲೂ ಈ ಪರೀಕ್ಷೆ ಬರೆಯಲು ಕೇಂದ್ರವನ್ನಾಗಿ ಮಾಡುವುದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ಉತ್ತರಕನ್ನಡ ಸೇರಿದಂತೆ ಸುತ್ತಮುತ್ತಲ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಶಿವಮೊಗ್ಗ ಜಿಲ್ಲೆ ಶೈಕ್ಷಣಿಕವಾಗಿ ಪ್ರಗತಿ ಸಾಧಿಸುತ್ತಿರುವುದರಿಂದಾಗಿ ಈಗಾಗಲೇ ಕೆಪಿಎಸ್ಸಿ ಸಹ ವಿಭಾಗೀಯ ಕಛೇರಿ ತೆರೆದಿದ್ದು, ಲಕ್ಷಾಂತರ ಮಂದಿಗೆ ಅನುಕೂಲವಾಗುತ್ತಿದೆ.

ನೀಟ್ ಗೆ ಶಿವಮೊಗ್ಗ ಜಿಲ್ಲೆಯನ್ನು ಪರೀಕ್ಷಾ ಕೇಂದ್ರವನ್ನಾಗಿ ಮಾಡಬಹುದೆಂಬ ಬಗ್ಗೆ ಜಿಲ್ಲಾಧಿಕಾರಿಗಳು ಮನವಿ ಮಾಡಿಕೊಳ್ಳಬೇಕಾಗಿದ್ದು, ಈ ತಿಂಗಳಾಂತ್ಯದೊಳಗೆ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಅರ್ಹತಾ ಪರೀಕ್ಷಾ ಮಂಡಳಿಗೆ ಶಿಫಾರಸ್ಸು ಮಾಡಬೇಕಿದೆ. ಆದರೆ, ಜಿಲ್ಲಾಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೇ ಇರುವುದು ದುರದೃಷ್ಟಕರ ಎಂದು ದೂರಿದರು.

ನೀಟ್ ಪರೀಕ್ಷೆ ನಡೆಸಲು ಶಿವಮೊಗ್ಗದಲ್ಲಿ ಎಲ್ಲಾ ಅನುಕೂಲತೆಗಳಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ನೀಟ್ ಪರೀಕ್ಷಾ ಕೇಂದ್ರದ ಬಗ್ಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಿ ವಿದ್ಯಾರ್ಥಿಗಳಿಗೆ ಅನುಕೂಲತೆಗಳನ್ನು ಮಾಡಿಕೊಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎನ್ಎಸ ಯು ಐ ರಾಜ್ಯ ಉಪಾಧ್ಯಕ್ಷ ಕೆ.ಚೇತನ್, ರಾಜ್ಯ ಕಾರ್ಯದರ್ಶಿ ವಿಕಾಸ್ ನಾಡಿಗ್, ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಬಿ.ವೆಂಕಟೇಶ್ ಪಾಲ್ಗೊಂಡಿದ್ದರು.

English summary
NSUI members held protest in Sgivamogga urging for NEET center in Shivamogga. They expressed unhappy baout there are only five centres in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X