ದಯಾಮರಣ ಕೋರಿ ಅರ್ಜಿ ಸಲ್ಲಿಸಿದ ಸಾಗರದ ದಂಪತಿ: ಅಧಿಕಾರಿಗಳ ಸ್ಪಷ್ಟನೆ

ಶಿವಮೊಗ್ಗ, ನವೆಂಬರ್‌ 16: ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದ ದಂಪತಿಗಳು ದಯಾ ಮರಣ ಕೋರಿ ಅರ್ಜಿ ಸಲ್ಲಿಸಿರುವ ಬಗ್ಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿಗಳಾದ ಎನ್.ಡಿ. ಪ್ರಕಾಶ್ ಸ್ಪಷ್ಟನೆ ನೀಡಿದ್ದಾರೆ.

ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಗ್ವೆ ಗ್ರಾಮದ ಸರ್ವೆ ನಂಬರ್ 136/1 ರಲ್ಲಿ ತಮಗೆ ಸೇರಿದ ಭೂಪರಿವರ್ತನೆಯಾದ ಜಾಗದಲ್ಲಿ 61%ರಷ್ಟು ನಿವೇಶನಗಳನ್ನು ಬಿಡುಗಡೆ ಮಾಡಲು ಅನುಮತಿ ನೀಡದೆ ಇರುವುದರಿಂದ ಶ್ರೀಕಾಂತ ನಾಯ್ಕ್‌ ಹಾಗೂ ಸುಜಾತಾ ನಾಯ್ಕ್‌ ಅವರು ದಯಾಮರಣ ಕೋರಿ ಸಾಗರ ಉಪ ವಿಭಾಗಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ಖಂಡಿಕಾ ಗ್ರಾಮ ಪಂಚಾಯಿತಿಯಿಂದ ಸಂಬಂಧಿಸಿದ ಕಡತ ಹಾಗೂ ದಾಖಲೆಗಳನ್ನು ಪಡೆದು ಕೂಲಂಕುಷವಾಗಿ ಪರಿಶೀಲಿಸಲಾಗಿರುತ್ತದೆ ಎಂದರು.

ಇನ್ನು ಈ ಬಗ್ಗೆ ಜಿಲ್ಲಾ ಪಂಚಾಯಿತಿಯಿಂದ ಕಾನೂನು ಸಲಹೆ ಪಡೆಯಲಾಗಿದ್ದು, ನ್ಯಾಯಾಲಯಗಳಲ್ಲಿ ದಾಖಲಾಗಿರುವ ಪ್ರಕರಣಗಳ ಅಂತಿಮ ಆದೇಶದವರೆಗೆ ಅಥವಾ ನಿವೇಶನಗಳ ಹಂಚಿಕೆ ಕರಾರು ಪತ್ರ ಸಲ್ಲಿಸುವವರೆಗೆ ನಿವೇಶನ ಮಾರಾಟಕ್ಕೆ ಬಿಡುಗಡೆ ಮಾಡಲು ಸಾಧ್ಯವಿರುವುದಿಲ್ಲವೆಂದು ವಕೀಲರು ಕಾನೂನು ಸಲಹೆಯನ್ನು ನೀಡಿರುತ್ತಾರೆ.

Officers Give Clarification On Sagara Taluk Couple Applied Mercy Petition

ಶ್ರೀಕಾಂತನಾಯ್ಕ ಹಾಗೂ ಮ್ಯಾನೇಜಿಂಗ್ ಪಾರ್ಟ್‍ನರ್ ಎಸ್.ಚಂದ್ರಶೇಖರ್ ನಡುವೆ ವಿವಿಧ ನ್ಯಾಯಾಲಯಗಳಲ್ಲಿ ವಿವಿಧ ವ್ಯಾಜ್ಯಗಳು ಬಾಕಿ ಇದೆ. ಈ ಹಂತದಲ್ಲಿ ನಿವೇಶನಗಳನ್ನು ಮಾರಾಟಕ್ಕೆ ಬಿಡುಗಡೆ ಮಾಡಲು ಸಾಧ್ಯವಾಗಿರುವುದಿಲ್ಲ ಎಂದು ಎನ್.ಡಿ. ಪ್ರಕಾಶ್ ತಿಳಿಸಿದ್ದಾರೆ.

ವಾಸ್ತವಾಂಶಗಳನ್ನು ಮರೆಮಾಚಿ ಮಾಲೀಕರಾದ ಶ್ರೀಕಾಂತ ನಾಯ್ಕ ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್, ಸಾಗರ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತ್ ಮೇಲೆ ಅನಗತ್ಯ ಒತ್ತಡ ಹೇರುವ ಸಲುವಾಗಿ ಸುಳ್ಳು ಲಂಚದ ಆರೋಪ ಮಾಡಿರುತ್ತಾರೆ. ಇದು ಸತ್ಯಕ್ಕೆ ದೂರವಾಗಿರುತ್ತದೆ. ಆದ್ದರಿಂದ ಈ ಸುದ್ದಿ ಸತ್ಯಕ್ಕೆ ದೂರವಾಗಿರುತ್ತದೆ ಎಂದು ಅವರು ಸ್ಪಷ್ಟೀಕರಣ ನೀಡಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+