ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ನಿಧನ
ಶಿವಮೊಗ್ಗ, ಡಿಸೆಂಬರ್, 21: ಗಮಕ ಗಂಧರ್ವ, ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿಯ ಎಚ್.ಆರ್.ಕೇಶವಮೂರ್ತಿ (89) ಅವರು ಇಂದು ನಿಧನರಾಗಿದ್ದಾರೆ.
2022ರಲ್ಲಿ ಕೇಂದ್ರ ಸರ್ಕಾರ ಎಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿ ಗೌರವಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು.
ಅಡಿಕೆ ಆಮದು ವಿರುದ್ಧದ ಪ್ರತಿಭಟನೆ ಬಲವಂತದಿಂದ ಅಂತ್ಯ: ಎಎಪಿ ಕಿಡಿ
ಎಚ್.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಳ್ಳಿಯ ರಾಮಸ್ವಾಮಿ ಶಾಸ್ತ್ರಿ-ಲಕ್ಷ್ಮೀದೇವಮ್ಮ ದಂಪತಿ ಪುತ್ರರಾಗಿದ್ದಾರೆ. ಫೆಬ್ರವರಿ 22, 1934ರಲ್ಲಿ ಜನಿಸಿದ್ದ ಅವರು ಬಾಲ್ಯದಿಂದಲೇ ಗಮಕ ಕಲೆಯನ್ನು ಕರಗತ ಮಾಡಿಕೊಂಡಿದ್ದರು. 16ನೇ ವಯಸ್ಸಿನಲ್ಲೇ ಗ್ರಾಮದ ವೆಂಕಟೇಶಯ್ಯ ಅವರ ಬಳಿ ಗಮಕ ವಾಚನ ಅಧ್ಯಯನವನ್ನು ಆರಂಭಿಸಿದ್ದರು. ರಾಮಾಯಣ, ಮಹಾಭಾರತ, ಕನ್ನಡ ಹಾಗೂ ಸಂಸ್ಕೃತದ ಕಾವ್ಯಗಳನ್ನು ಹಲವು ರಾಗಗಳಲ್ಲಿ ವಾಚನ ಮಾಡುವುದನ್ನೂ ರೂಢಿಸಿಕೊಂಡರು.

ದೇಶದ ಹಲವೆಡೆ ಗಮಕ ವಾಚನ
ರಾಜ್ಯ, ದೇಶದ ಹಲವೆಡೆ ಕಾರ್ಯಕ್ರಮಗಳಲ್ಲಿ ಗಮಕ ವಾಚನ ಮಾಡಿದ್ದಾರೆ. 100ಕ್ಕೂ ಹೆಚ್ಚು ರಾಗಗಳಲ್ಲಿ ವಾಚನ ಮಾಡುವ ಮೂಲಕ ಶತರಾಗಿ ಎಂಬ ಬಿರುದಿಗೂ ಪಾತ್ರರಾಗಿದ್ದರು. ಇವರ ಅದ್ಭುತ ಕಲೆಗೆ ಹಲವು ಪ್ರಶಸ್ತಿಗಳು ಅರಸಿ ಬಂದಿವೆ.
ಎಚ್.ಆರ್.ಕೇಶವಮೂರ್ತಿ ಮತ್ತು ಡಾ. ಮತ್ತೂರು ಕೃಷ್ಣಮೂರ್ತಿ ಅವರ ಜೋಡಿ ಪ್ರಖ್ಯಾತಿ ಪಡೆದಿತ್ತು. ಉದಯ ಟಿವಿಯಲ್ಲಿ ಇವರು ನಡೆಸುತ್ತಿದ್ದ ಕುಮಾರವ್ಯಾಸ ಭಾರತ ಕಾರ್ಯಕ್ರಮ ದೊಡ್ಡ ಮಟ್ಟದಲ್ಲಿ ಜನರನ್ನು ತಲುಪಿತ್ತು. ಡಾ.ಮತ್ತೂರು ಕೃಷ್ಣಮೂರ್ತಿ ಅವರು ಸಂಸ್ಕೃತ ಗ್ರಾಮ ಮತ್ತೂರಿನವರಾಗಿದ್ದಾರೆ. ಎಚ್.ಆರ್.ಕೇಶವಮೂರ್ತಿ ಅವರು ಹೊಸಹಳ್ಳಿಯವರಾಗಿದ್ದಾರೆ. ಮತ್ತೂರು, ಹೊಸಹಳ್ಳಿ ಇವೆರಡು ಕೂಡ ಅವಳಿ ಗ್ರಾಮಗಳಾಗಿವೆ.

ಕೇಶವಮೂರ್ತಿಯವರ ಹಲವು ಸಾಧನೆ
ಕುಮಾರವ್ಯಾಸ ಭಾರತ, ಜೈಮಿನಿ ಭಾರತ, ಪಂಪನ ಮಹಾ ಭಾರತ, ರನ್ನನ ಗಧಾಯುದ್ಧ, ರಘುವಂಶ, ಕುಮಾರಸಂಭವದ ಶ್ಲೋಕಗಳಿಗೆ ರಾಗ ಸಂಯೋಜನೆ ಮಾಡಿದ್ದಾರೆ. ಅಲ್ಲದೇ ಆರು ದಶಕಗಳ ಕಾಲ ಗಮಕವನ್ನು ದೇಶದೆಲ್ಲೆಡೆ ಪಸರಿಸಿದ್ದಾರೆ. ಕುಮಾರವ್ಯಾಸ ಭಾರತದ 135 ಧ್ವನಿ ಸುರುಳಿಗಳು, ಮಾರ್ಕಂಡೇಯ ಅವಧಾನಿ ಅವರ ವ್ಯಾಖ್ಯಾನದೊಂದಿಗೆ 35 ಧ್ವನಿ ಸುರುಳಿಗಳಲ್ಲಿ ಜೈಮಿನಿ ಭಾರತ ಹೊರ ಬಂದಿದೆ. ಕುಮಾರವ್ಯಾಸ ಭಾರತದ 200 ಕ್ಯಾಸೆಟ್‌ಗಳನ್ನು ಕೂಡ ಹೊರ ತಂದಿದ್ದಾರೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications