ಶಿವಮೊಗ್ಗ : ಡಿ.14ರಂದು ಸಾಗರ ಬಂದ್, ನಿಷೇಧಾಜ್ಞೆ ಹೇರಿಕೆ
ಶಿವಮೊಗ್ಗ, ಡಿಸೆಂಬರ್. 13 : ಹೊನ್ನಾವರದ ಪರೇಶ್ ಮೇಸ್ತ ಸಾವಿನ ಪ್ರಕರಣದ ಕಿಚ್ಚು ಪಕ್ಕದ ಜಿಲ್ಲೆ ಶಿವಮೊಗ್ಗಕ್ಕೆ ಹಬ್ಬಿದೆ. ಡಿ.14ರಂದು ಸಾಗರ ಬಂದ್‌ಗೆ ಕರೆ ನೀಡಲಾಗಿದೆ.
ಪರೇಶ್ ಮೇಸ್ತ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಡಿ.14ರ ಗುರುವಾರ ಸಾಗರ ಬಂದ್‌ಗೆ ಕರೆ ನೀಡಿವೆ. ಈ ಹಿನ್ನಲೆಯಲ್ಲಿ ಸಾಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಹೇರಲಾಗಿದೆ.

ಡಿ.8ರಂದು ಪರೇಶ್ ಮೇಸ್ತ ಶವ ಸಿಕ್ಕ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆಗಳು ನಡೆದಿದ್ದವು. ಪ್ರತಿಭಟನೆ ವೇಳೆ ಕುಮಟಾ, ಶಿರಸಿಯಲ್ಲಿ ಹಿಂಸಾಚಾರ ನಡೆದಿತ್ತು.
ಉತ್ತರ ಕನ್ನಡ ಪಕ್ಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿಯೂ ಬಂದ್ ಕರೆ ನೀಡಲಾಗಿದೆ. ಆದ್ದರಿಂದ, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಹೇರಿದೆ.
ಪರೇಶ್ ಮೇಸ್ತ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಬೆಂಗಳೂರಿನಲ್ಲಿ ಬುಧವಾರ ಸಂಜೆ ಹೇಳಿದ್ದಾರೆ.












Click it and Unblock the Notifications