ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ: ಗಾಂಜಾ ಅಮಲಿನಲ್ಲಿದ್ದರ ವಿಚಾರಣೆ ವೇಳೆ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆ ಸಂಚು ಬಯಲು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಏಪ್ರಿಲ್ 26: ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢವಾಗಿದೆ.

ಮೂವರನ್ನು ವಿಚಾರಣೆಗೆ ಒಳಪಡಿಸಿದಾಗ ಹಿಂದೂ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಪೊಲೀಸರ ಮುನ್ನೆಚ್ಚರಿಕೆ ಶಿವಮೊಗ್ಗದಲ್ಲಿ ಸಂಭವಿಸಬಹುದಾಗಿದ್ದ ಮತ್ತೊಂದು ದುರಂತವನ್ನು ತಪ್ಪಿಸಿದೆ.

ಶಿವಮೊಗ್ಗ: ಬೊಲೇರೋ ಜೀಪಲ್ಲಿ ಬಂದು ಒಂಟಿ ಮನೆಯಲ್ಲಿ ದರೋಡೆಗೆ ಯತ್ನಶಿವಮೊಗ್ಗ: ಬೊಲೇರೋ ಜೀಪಲ್ಲಿ ಬಂದು ಒಂಟಿ ಮನೆಯಲ್ಲಿ ದರೋಡೆಗೆ ಯತ್ನ

ಏನಿದು ಪ್ರಕರಣ?
ಶಿವಮೊಗ್ಗದ ಮೆಹಬೂಬ್ ನಗರದ ಸಲ್ಮಾನ್, ಅರ್ಬಾಜ್, ಉಸ್ಮಾನ್ ಬಂಧಿತರಾಗಿದ್ದು, ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಇವರನ್ನು ದೊಡ್ಡಪೇಟೆ ಠಾಣೆ ಪೊಲೀಸರು ಬಂಧಿಸಿದ್ದರು.

Plot To Murder of Another Hindu Activist in Shivamogga Revealed

'ಸಂಜೆಯೊಳಗೆ ಸಾಯಿಸುತ್ತೇವೆ'
ಇತ್ತೀಚೆಗೆ ನ್ಯೂ ಮಂಡ್ಲಿ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬನ ಸಹೋದರನನ್ನು ಆರೋಪಿಗಳು ಅಡ್ಡಗಟ್ಟಿದ್ದರು. ಮಾರಕಾಸ್ತ್ರಗಳನ್ನು ತೋರಿಸಿ ನಿನ್ನ ಸಹೋದರ ಎಲ್ಲಿದ್ದಾನೆ? ಸಂಜೆಯೊಳಗೆ ಆತನನ್ನು ಸಾಯಿಸುತ್ತೇವೆ ಎಂದು ಬೆದರಿಕೆ ಒಡ್ಡಿದ್ದಾರೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕಾರ್ಯಕರ್ತನ ಮೇಲೆ ನಿಗಾ ವಹಿಸಿದ್ದರು
ಆರೋಪಿಗಳು ಹಿಂದೂ ಸಂಘಟನೆಯ ಕಾರ್ಯಕರ್ತನ ಚಲನವಲನದ ಮೇಲೆ ನಿಗಾ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಬೈಪಾಸ್ ರಸ್ತೆಯ ಸೇತುವೆ ಬಳಿ ಇವರು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಪೊಲೀಸರು ಇವರನ್ನು ಬಂಧಿಸಿದ್ದರು. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.

ಹೆಚ್ಚಿನ ವಿಚಾರಣೆ ನಡೆಸಿದಾಗ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆಗೆ ಸಂಚು ರೂಪಿಸಿರುವುದನ್ನು ಬಾಯಿ ಬಿಟ್ಟಿದ್ದಾರೆ. ಮೂವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Plot to Murder of another Hindu activist in Shivamogga, Three accused Arrested by Doddapete Police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X