ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿಗೆ ಪ್ರಧಾನಿ ಮೋದಿ ಕರೆ
ಶಿವಮೊಗ್ಗ, ಏಪ್ರಿಲ್ 23: ಬಿಜೆಪಿಯ ಹಿರಿಯ ಮುಖಂಡ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ 9 ಗಂಟೆಗೆ ಕರೆ ಮಾಡಿ, ಶಂಕರಮೂರ್ತಿ ಅವರ ಆರೋಗ್ಯ ವಿಚಾರಿಸಿದ್ದಾರೆ.
Recommended Video
ಲಾಕ್ ಡೌನ್ ಅವಧಿಯಲ್ಲಿ ಹೇಗೆ ಸಮಯ ಕಳೆಯುತ್ತಿದ್ದೀರಿ ಎಂದು ಮಾಹಿತಿ ಕೇಳಿದ್ದಾರೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಇದ್ದು, ಫೋನ್ ಮೂಲಕವೇ ಕೆಲಸ ಮಾಡುತ್ತಿರುವುದಾಗಿ ಪ್ರಧಾನಿಗೆ ಶಂಕರಮೂರ್ತಿ ಅವರು ಮಾಹಿತಿ ನೀಡಿದ್ದಾರೆ.
ಶಂಕರಮೂರ್ತಿ ಅವರಿಗೆ ಆರೋಗ್ಯ ಕಾಪಾಡಿಕೊಳ್ಳುವಂತೆ ಪ್ರಧಾನಿ ಮೋದಿ ಅವರು ಸಲಹೆ ನೀಡಿದ್ದು, ನಿಮ್ಮ ರಾಜಕೀಯ ಅನುಭವ ಹಾಗೂ ಪಕ್ಷ ಸಂಘಟನೆಯ ಅನುಭವ ಬೇರೆಯವರಿಗೂ ತಿಳಿಸುವಂತೆ ಸಲಹೆ ನೀಡಿ, ನಿಮ್ಮಂತ ಹಿರಿಯ ಅನುಭವಿ ರಾಜಕಾರಣಿಗಳು ಪಕ್ಷಕ್ಕೆ ಅಗತ್ಯ ಇದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಒಂದೂವರೆ ನಿಮಿಷಗಳ ಕಾಲ ಶಂಕರಮೂರ್ತಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಮಾಜಿ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅವರು "ಒನ್ಇಂಡಿಯಾ' ದೊಂದಿಗೆ ಮಾತನಾಡಿ, ಕೊರೊನಾ ವೈರಸ್ ವಿರುದ್ಧ ಸಮರ ಸಾರುತ್ತಿರುವ ಪ್ರಧಾನಿ ಮೋದಿ ಅವರು ಇಂತಹ ಬಿಗುವಿನ ಸಂದರ್ಭದಲ್ಲೂ ಸ್ವತಃ ಕರೆ ಮಾಡಿ ನಮ್ಮ ಆರೋಗ್ಯದ ಬಗ್ಗೆ ವಿಚಾರಿಸಿ, ನನ್ನ ಬಗ್ಗೆ ವಿಶೇಷ ಕಾಳಜಿಯನ್ನು ವ್ಯಕ್ತಪಡಿಸಿರುವುದು ಸಂತಸ ತಂದಿದೆ ಎಂದು ತಿಳಿಸಿದ್ದಾರೆ.
-
Vastu Tips: ವಾಸ್ತು ಪ್ರಕಾರ ನಮ್ಮ ಮನೆಯ ಸುತ್ತಮುತ್ತಲಿನ ವಿನ್ಯಾಸ ಹೇಗಿರಬೇಕು -
Vastu Plants: ಮನೆಯಲ್ಲೇ ಐಶ್ವರ್ಯ ಹೆಚ್ಚಿಸಬೇಕಾ? ಈ 5 ಸಸ್ಯಗಳನ್ನು ಬೆಳೆಸಿ -
ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವ ಮೊದಲು ತಿಳಿದುಕೊಳ್ಳಬೇಕಾದ ವಿಷಯಗಳು -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications