Eshwarappa: ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಮೋದಿ ಭಾಗಿ? ಗೊಂದಲ ಬೇಡ, ಇಲ್ಲಿದೆ ಅಸಲಿ ವಿಚಾರ!
ಶಿವಮೊಗ್ಗ, ಏಪ್ರಿಲ್ 13: ಮಗನಿಗೆ ಲೋಕಸಭಾ ಚುನಾವಣೆ ಟಿಕೆಟ್ ಕೈ ತಪ್ಪಿದ್ದಕ್ಕೆ ಬಿಜೆಪಿ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಈ ಬಾರಿ ಶತಾಯಗತಾಯ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಬೇಕು ಎನ್ನುವ ಹಠಕ್ಕೆ ಬಿದ್ದಿದ್ದಾರೆ. ಮಾಜಿ ಸಿಎಂ ಬಿ.ಎಸ್ ಯಡಿಯೂಪ್ಪ ಪುತ್ರ ಹಾಲಿ ಸಂಸದ ಬಿ.ವೈ ರಾಘವೇಂದ್ರ ವಿರುದ್ಧ ಗೆಲುವು ಸಾಧಿಸಬೇಕು ಎಂದು ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಂಡಾಯ ಸಾರಿರುವ ಕೆ.ಎಸ್ ಈಶ್ವರಪ್ಪ ಈಗಲೂ ಪ್ರಧಾನಿ ನರೇಂದ್ರ ಮೋದಿ ಅವರ ಬೆಂಬಲಿಗರಾಗಿದ್ದು, ತಮ್ಮ ಪ್ರಚಾರದ ವೇಳೆ ಅವರ ಮೇಲಿನ ಅಭಿಮಾನವನ್ನು ಪ್ರದರ್ಶಿಸುತ್ತಿದ್ದಾರೆ. ಕೆ.ಎಸ್ ಈಶ್ವರಪ್ಪ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಹಾಗೂ ಫೋಟೋಗಳನ್ನು ಬಳಸಿಕೊಳ್ಳುತ್ತಿರುವುದಕ್ಕೆ ರಾಜ್ಯ ಬಿಜೆಪಿ ನಾಯಕರು ಗರಂ ಆಗಿದ್ದಾರೆ. ಆದರೆ ಈಶ್ವರಪ್ಪ ಮಾತ್ರ ಕ್ಯಾರೇ ಎನ್ನದೇ ಪ್ರಚಾರ ನಡೆಸುತ್ತಿದ್ದಾರೆ.

ಸ್ವತಂತ್ರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ಮೋದಿ ಅವರ ಚಿತ್ರ ಬಳಸಿದ ವಿಚಾರ ಸ್ಥಳೀಯ ನ್ಯಾಯಾಲಯದ ಮೆಟ್ಟಿಲೇರಿರುವಾಗಲೇ ಈಶ್ವರಪ್ಪ ಲೋಕಸಭಾ ನಾಮಪತ್ರ ಸಲ್ಲಿಸುವ ವೇಳೆ ನಡೆದ ಬೃಹತ್ ಮೆರವಣಿಗೆಯಲ್ಲಿ ಪ್ರಧಾನಿ ಮೋದಿ ಅವರಂತೆ ಕಾಣುವ ವ್ಯಕ್ತಿಯನ್ನು ಕರೆತಂದು ಅಚ್ಚರಿ ಮೂಡಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ತಮ್ಮ ನಿರ್ಧಾರಕ್ಕೆ ಅಚಲರಾಗಿರುವ ಈಶ್ವರಪ್ಪ ಶುಕ್ರವಾರ ಸಾವಿರಾರು ಬೆಂಬಲಿಗರ ಜೊತೆ ಭರ್ಜರಿ ಪ್ರಚಾರ ನಡೆಸಿ ನಾಮಪತ್ರ ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ಬೈಂದೂರು ವಿಧಾನಸಭಾ ಕ್ಷೇತ್ರದಿಂದಲೂ ನೂರಾರು ಬೆಂಬಲಿಗರು ಶಿವಮೊಗ್ಗ ಆಗಮಿಸಿ ಈಶ್ವರಪ್ಪ ನಾಮಪತ್ರ ಸಲ್ಲಿಕೆಯಲ್ಲಿ ಭಾಗಿಯಾದರು. ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಸಾವಿರಾರು ಕಾರ್ಯಕರ್ತರು ಭಾಗಿಯಾದರೂ ಕೂಡ ಪ್ರಧಾನಿ ಮೋದಿ ಅವರಂತೆ ಕಾಣುವ ವ್ಯಕ್ತಿ ಎಲ್ಲರ ಗಮನ ಸೆಳೆದಿದ್ದಾರೆ. ದೂರದಿಂದ ನೋಡಿದವರು ಒಮ್ಮೆಲೆ ನರೇಂದ್ರ ಮೋದಿ ಅವರಾ..? ಎಂದು ಕನ್ಫೂಸ್ ಆಗಿದ್ದಾರೆ. ಆದರೆ ಆ ಬಳಿಕ ಅವರ ಗೊಂದಲಕ್ಕೆ ಉತ್ತರ ಸಿಕ್ಕಿದೆ.

ಉಡುಪಿ ಜಿಲ್ಲೆಯ ಹಿರಿಯಡ್ಕ ಪಟ್ಟಣದ ಬೊಮ್ಮರಬೆಟ್ಟು ಗ್ರಾಮದ ಸದಾನಂದ ನಾಯಕ್ ನೋಡಲು ಪ್ರಧಾನಿ ನರೇಂದ್ರ ಮೋದಿ ಅವರಂತೆ ಕಾಣುತ್ತಾರೆ. ಸಾಮಾನ್ಯ ದಿನಗಳಲ್ಲಿ ಅಡುಗೆ ಕೆಲಸ ಮಾಡುವ ಅವರು, ಚುನಾವಣೆ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಸಮಾವೇಶಗಳಲ್ಲಿ, ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಸಮಾವೇಶಗಳಲ್ಲಿ ದಿಟ್ಟು ಪ್ರಧಾನಿ ಮೋದಿ ಅವರಂತೆ ಉಡುಪು ಧರಿಸಿ ಭಾಗಿಯಾಗುತ್ತಾರೆ. ಒಮ್ಮೆಲೆ ನೋಡಿದವರು ಗೊಂದಲಕ್ಕೀಡಾಗಬೇಕು ಆ ರೀತಿ ಸದಾನಂದ ನಾಯಕ್ ಕಾಣಿಸಿಕೊಳ್ಳುತ್ತಾರೆ.
ಅದೇ ರೀತಿ ಈಶ್ವರಪ್ಪ ನಾಮಪತ್ರ ಸಲ್ಲಿಕೆ ವೇಳೆ ಸಹ ಸದಾನಂದ ನಾಯಕ್ ಭಾಗಿಯಾಗಿದ್ದು ಜನರು ಅವರತ್ತ ಕೈ ಬೀಸಿ ನಮಸ್ಕರಿಸಿದರು. ಈ ಮೂಲಕ ಕೆ.ಎಸ್.ಈಶ್ವರಪ್ಪ ಅವರಿಗೆ ಬೆಂಬಲ ಸೂಚಿಸಿದರು. ರಾಜ್ಯ ಬಿಜೆಪಿ ನಾಯಕರ ವಿರುದ್ಧ ಬಂಡಾಯ ಸಾರಿ, ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಈಶ್ವರಪ್ಪ, 'ನಾನು ಗೆದ್ದ ನಂತರ ದೆಹಲಿಗೆ ತೆರಳಿ ಪ್ರಧಾನಿ ಮೋದಿಯವರ ಆಶೀರ್ವಾದ ಪಡೆದು ಅವರನ್ನು ಬೆಂಬಲಿಸುತ್ತೇನೆ' ಎಂದು ನಾಮಪತ್ರ ಸಲ್ಲಿಕೆ ವೇಳೆ ತಿಳಿಸಿದ್ದಾರೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications