ಫೆಬ್ರವರಿ 12ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ ಮಾಡಲಿರುವ ಪ್ರಧಾನಿ: ಬಿ.ವೈ. ರಾಘವೇಂದ್ರ
ಶಿವಮೊಗ್ಗ, ಜನವರಿ, 09: ಮಲೆನಾಡಿನ ಹೆಬ್ಬಾಗಿಲೆಂದೇ ಕರೆಸಿಕೊಳ್ಳುವ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣ ತಲೆ ಎತ್ತುತ್ತಿದೆ. ನಗರದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಸೋಮವಾರ ಶಿವಮೊಗ್ಗದಲ್ಲಿ ಮಾಹಿತಿ ನೀಡಿದರು.
ಯೋಜನೆಯ ಸದುಪಯೋಗ ಪಡೆದುಕೊಳ್ಳಿ
ನಗರದ ನವಲೆ, ಕೃಷಿ ಕಾಲೇಜು ಎದುರು ಚನ್ನಮುಂಬಾಪುರದಲ್ಲಿ ಜಿಲ್ಲಾ ಜಂಗಮ ಸಮಾಜದಿಂದ ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ನೆರವೇರಿಸಲಾಯಿತು. ಜಂಗಮ ಸಮಾಜದ ಸಾಂಸ್ಕೃತಿಕ ಭವನ ಶಿಲಾನ್ಯಾಸ ಹಾಗೂ ಭೂಮಿಪೂಜೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು, ಶಿವಮೊಗ್ಗದ ಸೋಗಾನೆ ಬಳಿಯ ವಿಮಾನ ನಿಲ್ದಾಣದ ಕಾಮಗಾರಿ ಮುಗಿಯುವ ಹಂತದಲ್ಲಿದೆ. ವಿಮಾನ ಹಾರಾಟಕ್ಕೆ ಎಲ್ಲಾ ರೀತಿಯ ಯೋಜನೆ ರೂಪಿಸಲಾಗಿದೆ. ಮುಂದಿನ ದಿನದಲ್ಲಿ ಇಲ್ಲಿನ ಜನರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

ಹಾಗೆಯೇ ಜಂಗಮ ಸಮಾಜ ಪವಿತ್ರವಾದುದು. ದೇವರಿಗೆ ಹಾಗೂ ಭಕ್ತರಿಗೆ ಸೇತುವೆಯಾಗಿ ಸಮಾಜ ಕೆಲಸ ಮಾಡುತ್ತಿದೆ. ದೇವರನ್ನು ಹತ್ತಿರದಿಂದ ಕಾಣಲು ಗುರುಗಳಿಗೆ ಬಿಟ್ಟರೆ, ಜಂಗಮ ಸಮಾಜಕ್ಕೆ ಆ ಶಕ್ತಿ ಇದೆ. ಜಂಗಮ ಸಮಾಜದ ಸಾಂಸ್ಕೃತಿಕ ಭವನಕ್ಕೆ 1 ಕೋಟಿ ರೂಪಾಯಿ ಅನುದಾನ ಮಂಜೂರು ಮಾಡಲಾಗಿದೆ. ಶೀಘ್ರವೇ ಕಾಮಗಾರಿ ಮುಗಿಸಿ, ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಹಲವು ಜಿಲ್ಲೆಗಳಲ್ಲಿ ವಿಮಾನ ನಿಲ್ದಾಣ ಕಾಮಗಾರಿ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಸರದಿಯಲ್ಲಿ ವಿಮಾನ ನಿಲ್ದಾಣ ಕಾಮಗಾರಿಗಳು ನಡೆಯುತ್ತಿವೆ. ಜೊತೆಗೆ ಸರದಯಲ್ಲಿ ಯೋಜನೆಗಳು ಪ್ರಕಟವಾಗಿವೆ.

2023 ರ ಆರಂಭದಲ್ಲಿ ಶಿವಮೊಗ್ಗ ಮತ್ತು ವಿಜಯಪುರದಲ್ಲಿ ನೂತನ ವಿಮಾನ ನಿಲ್ದಾಣಗಳು ಕಾರ್ಯಾರಂಭಗೊಳ್ಳಲಿವೆ, ಆದರೆ ಹಾಸನದಲ್ಲಿ ವರ್ಷಾಂತ್ಯದ ವೇಳೆಗೆ ಒಂದು ವಿಮಾನ ನಿಲ್ದಾಣ ಆರಂಭವಾಗುವ ನಿರೀಕ್ಷೆಯಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು. ನವೆಂಬರ್‌ನಲ್ಲಿ ಔಪಚಾರಿಕವಾಗಿ ಉದ್ಘಾಟನೆಗೊಂಡಿದ್ದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್‌ನಲ್ಲಿ ದೇಶೀಯ ಕಾರ್ಯಾಚರಣೆಗಳು ಪ್ರಾರಂಭವಾಗಲಿವೆ ಎನ್ನುವ ಮಾಹಿತಿಯೂ ಲಭ್ಯವಾಗಿತ್ತು. ಕೊಡಗಿನಲ್ಲಿ ಹೆಲಿಪೋರ್ಟ್ ಸಿದ್ಧವಾಗುತ್ತಿದೆ, ಮತ್ತು ಪೈಲಟ್‌ಗಳಿಗೆ ತರಬೇತಿ ನೀಡಲು ಎರಡು ಹೊಸ ಫ್ಲೈಯಿಂಗ್ ತರಬೇತಿ ಸಂಸ್ಥೆಗಳನ್ನು ಬೆಳಗಾವಿಯಲ್ಲಿ ಪ್ರಾರಂಭಿಸಲಾಗುವುದು ಎನ್ನವ ಮಾಹಿತಿ ತಿಳಿದುಬಂದಿತ್ತು.












Click it and Unblock the Notifications