ಶಿವಮೊಗ್ಗದಲ್ಲಿ ರೌಡಿಶೀಟರ್ ದೀಪು ಕಾಲಿಗೆ ಪೊಲೀಸ್ ಗುಂಡೇಟು
ಶಿವಮೊಗ್ಗ, ಫೆಬ್ರವರಿ.19: ವ್ಯಾಪಾರಿಯೊಬ್ಬರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೌಡಿಶೀಟರ್ ದೀಪು ಅಲಿಯಾಸ್ ಡಿಂಗನ ಕಾಲಿಗೆ ಪೊಲೀಸರು ಗುಂಡು ಹೊಡೆದಿರುವ ಘಟನೆ ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ನಡೆದಿದೆ. ಪೊಲೀಸರ ಫೈರಿಂಗ್ ನಲ್ಲಿ ಗಾಯಗೊಂಡಿರುವ ರೌಡಿಶೀಟರ್ ನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಶಿವಮೊಗ್ಗದ ಅನುಪಿನಕಟ್ಟೆ ಬಳಿ ಅಡಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು. ತುಂಗಾ ನಗರ ಠಾಣೆ ಇನ್ಸ್ ಪೆಕ್ಟರ್ ದೀಪಕ್ ಮತ್ತು ಸಿಬ್ಬಂದಿ ಆತನನ್ನು ಬಂಧಿಸಲು ತೆರಳಿದ್ದರು. ಹೆಡ್ ಕಾನ್ಸ್ ಟೇಬಲ್ ಅರುಣ್ ಕುಮಾರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಹಿನ್ನೆಲೆ ಗಾಳಿಯಲ್ಲಿ ಗುಂಡು ಹಾರಿಸಿದ ಪೊಲೀಸರು ಆರೋಪಿಗೆ ಎಚ್ಚರಿಕೆ ನೀಡಿದರು. ಇದಕ್ಕೆ ಜಗ್ಗದಿದ್ದಾಗ ಅನಿವಾರ್ಯವಾಗಿ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾಂತರಾಜು ತಿಳಿಸಿದ್ದಾರೆ.
ರೌಡಿ ಶೀಟರ್ ದೀಪು ನಡೆಸಿದ ಹಲ್ಲೆಯಿಂದ ಗಾಯಗೊಂಡ ಹೆಡ್ ಕಾನ್ಸ್ ಟೇಬಲ್ ಅರುಣ್ ಕುಮಾರ್ ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶುಕ್ರವಾರ ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಕಾಂತರಾಜು ಮತ್ತು ಡಿವೈಎಸ್ಪಿ ಪ್ರಶಾಂತ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದರು.

ವ್ಯಾಪಾರಿಗೆ ಹಣಕ್ಕಾಗಿ ಬೆದರಿಕೆ:
ಶಿವಮೊಗ್ಗದ ಟಿಪ್ಪು ನಗರದಲ್ಲಿರುವ ವ್ಯಾಪಾರಿಗೆ ಕುಖ್ಯಾತ ರೌಡಿ ಬಚ್ಚನ್ ಹಣಕ್ಕಾಗಿ ಬೇಡಿಕೆಯಿಟ್ಟದ್ದನು ಎಂಬ ಆರೋಪವಿದೆ. ವ್ಯಾಪಾರಿಯು ಹಣ ನೀಡಲು ನಿರಾಕರಿಸಿದ ಹಿನ್ನೆಲೆ ಆತನ ಗ್ಯಾಂಗ್ ನಲ್ಲಿದ್ದ ರೌಡಿಶೀಟರ್ ದೀಪು ಮತ್ತು ಆತನ ಸಹಚರರು ವ್ಯಾಪಾಮಿ ಮನೆ ಮೇಲೆ ದಾಳಿ ನಡೆಸಿದ್ದರು. ವ್ಯಾಪಾರಿ ಸಹೋದರರ ಮೇಲೆ ಹಲ್ಲೆ ನಡೆಸಿದ್ದು, ಜೀವ ಬೆದರಿಕೆಯೊಡ್ಡಿದ್ದರು. ಇದಕ್ಕೆ ಸಂಬಂಧಿಸಿದಂತೆ ವ್ಯಾಪಾರಿಯು ತುಂಗಾ ನಗರ ಠಾಣೆಗೆ ದೂರು ನೀಡಿದ್ದರು.

ಎರಡು ಪ್ರಕರಣಗಳಲ್ಲಿ ಬೇಕಾದ ಆರೋಪಿ ದೀಪು:
ರೌಡಿಶೀಟರ್ ದೀಪು ಈ ಹಿಂದೆ ರೌಡಿಶೀಟರ್ ಆಗಿದ್ದ ಲೋಕಿ ಜೊತೆಗೆ ಗುರುತಿಸಿಕೊಂಡದ್ದನು. ಮೆಂಟಲ್ ಸೀನ ಮತ್ತು ಮೋಟಿ ವೆಂಕಟೇಶ್ ಹತ್ಯೆ ಪ್ರಕರಣದಲ್ಲಿ ರೌಡಿಶೀಟರ್ ದೀಪು ಆರೋಪಿಯಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications