23 ಪೊಲೀಸರ ಮೊಬೈಲ್ ಕದ್ದ ಚಾಲಾಕಿ ಕೊನೆಗೆ ಸಿಕ್ಕಿಬಿದ್ದ!

ಶಿವಮೊಗ್ಗ, ನವೆಂಬರ್ 10 : ಪೊಲೀಸರು ಉಳಿದುಕೊಂಡಿದ್ದ ಕಲ್ಯಾಣ ಮಂದಿರಕ್ಕೆ ನುಗ್ಗಿ 23 ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಶಿವಮೊಗ್ಗದಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಮಿಳುನಾಡು ಮೂಲದ ಕಾರ್ತಿಕ್ (34) ಬಂಧಿತ ಆರೋಪಿ. ದೊಡ್ಡಪೇಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೆಲವು ಪೊಲೀಸರು ಮೊಬೈಲ್ ಲೋಕೇಷನ್ ಪತ್ತೆ ಹಚ್ಚುವ ಮೂಲಕ ಆರೋಪಿಯನ್ನು ಬಂಧಿಸಲಾಗಿದೆ.

2018ರ ಸೆಪ್ಟೆಂಬರ್‌ನಲ್ಲಿ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ಕರೆಸಲಾಗಿತ್ತು. ನಗರದ ಭಾರತೀಯ ಸಮುದಾಯ ಭವನದಲ್ಲಿ ಅವರಿಗೆ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿತ್ತು.

Police Officers Mobile Stolen Accused Arrested

ಸಮುದಾಯ ಭವನಕ್ಕೆ ಆಗಮಿಸಿದ್ದ ಆರೋಪಿ ಕಾರ್ತಿಕ್ ಪೊಲೀಸರ 23 ಮೊಬೈಲ್ ಕದ್ದು ಪರಾರಿಯಾಗಿದ್ದ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಾಗಿತ್ತು. ಮೊಬೈಲ್ ಲೋಕೇಷನ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯಿಂದ 13 ಮೊಬೈಲ್‌ಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಶಿವಮೊಗ್ಗ ನಗರದಲ್ಲಿ ಸೆಪ್ಟೆಂಬರ್ 12ರಂದು ಹಿಂದು ಮಹಾಸಭಾ ಗಣಪತಿ ವಿಸರ್ಜನೆ ಮೆರವಣಿಗೆ ನಡೆದಿತ್ತು. ಲಕ್ಷಾಂತರ ಜನರು ಇದರಲ್ಲಿ ಪಾಲ್ಗೊಂಡಿದ್ದರು. ಭದ್ರತೆಯ ಉಸ್ತುವಾರಿ ವಹಿಸಿದ್ದ ಪೊಲೀಸರು ಮುಂಜಾನೆ 2 ಗಂಟೆ ಬಳಿಕ ಸಮುದಾಯ ಭವನಕ್ಕೆ ವಾಪಸ್ ಆಗಿದ್ದರು. ಆ ಬಳಿಕ ಬಂದಿದ್ದ ಆರೋಪಿ ಮೊಬೈಲ್ ಕದ್ದಿದ್ದ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+