ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ; ಅಕ್ಸಿಜನ್ ಸಿಲಿಂಡರ್ ಮಾರಾಟ, ಪ್ರಕರಣ ದಾಖಲು

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಮೇ 03; ಅನುಮತಿ ಇಲ್ಲದವರಿಗೆ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಎರಡು ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 8 ಸಿಲಿಂಡರ್ ವಶಕ್ಕೆ ಪಡೆಯಲಾಗಿದೆ.

ವಿನೋಬಗರ ಠಾಣೆ ಸಬ್ ಇನ್ಸ್ಪೆಕ್ಟರ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಆಕ್ಸಿಜನ್ ಸಿಲಿಂಡರ್ ಮಾರಾಟ ಪ್ರಕರಣ ಬೆಳಕಿಗೆ ಬಂದಿದೆ. ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಎಂಎಸ್ಪಿಎಲ್ ಗ್ಯಾಸಸ್ ಮತ್ತು ಶಿವಮೊಗ್ಗ ಇಂಡಸ್ಟ್ರಿಯಲ್ ಗ್ಯಾಸಸ್ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಅತಿದೊಡ್ಡ ಲಿಕ್ವಿಡ್ ಆಕ್ಸಿಜನ್ ಉತ್ಪಾದನೆಗೆ ಮುಂದಾದ ರಿಲಯನ್ಸ್ ಅತಿದೊಡ್ಡ ಲಿಕ್ವಿಡ್ ಆಕ್ಸಿಜನ್ ಉತ್ಪಾದನೆಗೆ ಮುಂದಾದ ರಿಲಯನ್ಸ್

ಕೋವಿಡ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಕ್ಸಿಜನ್ ಅಭಾವ ತಪ್ಪಿಸಲು ಸರ್ಕಾರ, ಆಕ್ಸಿಜನ್ ಸಿಲಿಂಡರ್ ಮಾರಾಟದ ಮೇಲೆ ನಿರ್ಬಂಧ ವಿಧಿಸಿದೆ. ಖಾಸಗಿ ಕಂಪನಿಗಳು, ಗ್ಯಾರೇಜ್‌, ಕೈಗಾರಿಕೆಗಳು ಸೇರಿದಂತೆ ಅನುಮತಿ ಇಲ್ಲದ ಯಾರಿಗೂ ಆಕ್ಸಿಜನ್ ಮಾರಾಟ ಮಾಡುವಂತಿಲ್ಲ.

ವೈದ್ಯಕೀಯ ಶಿಕ್ಷಣ ಇಲಾಖೆ ಆ ತಪ್ಪಿನಿಂದ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ! ವೈದ್ಯಕೀಯ ಶಿಕ್ಷಣ ಇಲಾಖೆ ಆ ತಪ್ಪಿನಿಂದ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ !

Police Registered FIR For Selling Oxygen Cylinder

ಆಕ್ಸಿಜನ್‌ಗಳನ್ನು ಕೇವಲ ವೈದ್ಯಕೀಯ ಉದ್ದೇಶಗಳಿಗೆ ಬಳಕೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. ಆಸ್ಪತ್ರೆಗಳು ಮತ್ತು ಅನುಮತಿ ಪಡೆದ ಕೈಗಾರಿಕೆಗಳಿಗೆ ಮಾತ್ರ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡಬೇಕಿದೆ.

ಚಾಮರಾಜನಗರ; 6 ಸಾವಿರ ಲೀ ಆಕ್ಸಿಜನ್ ಪ್ಲಾಂಟ್‌ಗೆ ಚಾಲನೆ ಚಾಮರಾಜನಗರ; 6 ಸಾವಿರ ಲೀ ಆಕ್ಸಿಜನ್ ಪ್ಲಾಂಟ್‌ಗೆ ಚಾಲನೆ

Recommended Video

CSK ತಂಡದಲ್ಲಿ ಕೋವಿಡ್ ಪಾಸಿಟಿವ್ ಆಗಿರುವವರು ಯಾರು ? | Oneindia Kannada

ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಎರಡು ಸಂಸ್ಥೆಗಳು ಅನುಮತಿ ಪಡೆಯದವರಿಗೆ ಸಿಲಿಂಡರ್ ಮಾರಾಟ ಮಾಡಿದ್ದಕ್ಕೆ, ಸಾಂಕ್ರಾಮಿಕ ಕಾಯಿಲೆ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. ವಿನೋಬನಗರ ಠಾಣೆಯಲ್ಲಿ ಎಫ್ಐಆರ್ ಆಗಿದ್ದು, ತನಿಖೆ ಮುಂದುವರೆದಿದೆ.

English summary
Shivamogga Vinoba nagar police registered the FIR against two organizations for selling oxygen cylinder who not take approval in the time of COVID.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X