ಶಿವಮೊಗ್ಗದ ಪೊಲೀಸ್ ಠಾಣೆ ಸೀಲ್ ಡೌನ್, ಕಾರಣ?

ಶಿವಮೊಗ್ಗ, ಜೂನ್ 1: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯನ್ನು ಇಂದು ತಾತ್ಕಾಲಿಕವಾಗಿ ಸೀಲ್ ಡೌನ್ ಮಾಡಲಾಗಿದೆ.

ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಎಎಸ್ಐ ಪುತ್ರಿ ಇದೇ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜಯನಗರ ಪೊಲೀಸ್ ಠಾಣೆಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.

ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಅಳವಡಿಸಿ ಸೀಲ್ ಡೌನ್ ಮಾಡಲಾಗಿದ್ದು, ಇಡೀ ಪೊಲೀಸ್ ಠಾಣೆಗೆ ಅಗ್ನಿಶಾಮಕ ದಳದ ವಾಹನ ಬಳಸಿ ಸ್ಯಾನಿಟೈಸರಿಂಗ್ ಮಾಡಲಾಗುತ್ತಿದೆ.

Police Station Sealdown For Coronavirus In Shivamogga

ಭಾನುವಾರ ಕೆ.ಎಸ್.ಆರ್.ಪಿ ಎಎಸ್ಐ ಸೇರಿದಂತೆ ಆರು ಮಂದಿ ಪೊಲೀಸರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿತ್ತು. ಎಎಸ್ಐ ಹೋಮ್ ಕ್ವಾರಂಟೈನ್ ನಲ್ಲಿದ್ದರು.

ಎಎಸ್ಐ ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಅವರ ಮಗಳು, ಜಯನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರಿಂದ ಜಯನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+