ಶಿವಮೊಗ್ಗ; ರೌಡಿ ಶೀಟರ್ ಕಾಲಿಗೆ ಪೊಲೀಸರ ಗುಂಡೇಟು
ಶಿವಮೊಗ್ಗ,ಜೂನ್ 3: ಬಂಧಿಸಲು ಹೊರಟಿದ್ದ ವೇಳೆ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾದ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಗಾಯಗೊಂಡಿರುವ ಆರೋಪಿಯನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ರೌಡಿ ಹರ್ಷದ್ ಅಲಿಯಾಸ್ ಜಾಮೂನ್ (30) ಎಂಬಾತನ ಬಲಗಾಲಿಗೆ ಗುಂಡು ಹೊಡೆಯಲಾಗಿದೆ. ಶಿವಮೊಗ್ಗದ ಅನುಪಿನಕಟ್ಟೆಯಲ್ಲಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿ ಚಾಕು ಬೀಸಿದ್ದಾನೆ. ಈ ವೇಳೆ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಹರ್ಷದ್ ಪ್ರಕರಣವೊಂದರಲ್ಲಿ ಹತ್ತು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದು, ಸುಪ್ರೀಂಕೋರ್ಟ್‌ನಿಂದ ಜಾಮೀನು ಪಡೆದು ಹೊರಬಂದಿದ್ದ.
ಏನಿದು ಘಟನೆ?; ಬುದ್ಧನಗರ ನಿವಾಸಿ ಹರ್ಷದ್ ಹಲ್ಲೆ, ಮನೆಗಳ್ಳತನ ಮತ್ತು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಐದು ಪ್ರಕರಣ ದಾಖಲಾಗಿವೆ. ಈ ಹಿಂದೆ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಆರೋಪ ಸಾಬೀತಾಗಿತ್ತು.

2017ರ ಜುಲೈ 10ರಂದು ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜೈಲು ಶಿಕ್ಷೆಯಾದ ನಂತರ ಆರೋಪಿ ಹರ್ಷದ್ ಸುಪ್ರೀಂಕೋರ್ಟ್ ಮೆಟ್ಟಿಲೇರಿ ಜಾಮೀನು ಪಡೆದುಕೊಂಡಿದ್ದ. ಜಾಮೀನನ ಮೇಲೆ ಹೊರಬಂದರೂ ತಮ್ಮ ಕುಕೃತ್ಯಗಳನ್ನು ಮುಂದುವರೆಸಿದ್ದ. ಹಲವು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.
ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಹರ್ಷದ್ ಚಾಕು ತೋರಿಸಿ ವ್ಯಕ್ತಿಯೊಬ್ಬರಿಗೆ ಹಣ ನೀಡುವಂತೆ ಬೆದರಿಕೆ ಹಾಕಿದ್ದ. ಈ ಸಂಬಂಧ ಜೂನ್ 1ರಂದು ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದರು. ಬಂಧಿಸುವ ಕಾರ್ಯಾಚರಣೆ ವೇಳೆ ಹರ್ಷದ್ ಪೊಲೀಸರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಚಾಕು ಬೀಸಿದ್ದಾನೆ ಎಂದು ಆರೋಪಿಸಲಾಗಿದೆ. ಹರ್ಷದ್ ಚಾಕು ಬೀಸಿದ್ದರಿಂದ ತುಂಗಾ ನಗರ ಠಾಣೆ ಇನ್ಸ್‌ಪೆಕ್ಟರ್ ಮಂಜುನಾಥ್ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದು, ಹರ್ಷದ್ ಬಲಗಾಲಿಗೆ ಗುಂಡು ತಗುಲಿದೆ. ಗಾಯಗೊಂಡಿದ್ದ ಆತನನ್ನು ಪೊಲೀಸರು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.












Click it and Unblock the Notifications